ಕೇಂದ್ರದ ಆಯುಷ್ಮಾನ್ ಯೋಜನೆಗೆ ಪ್ರಮುಖ ಖಾಸಗಿ ಆಸ್ಪತ್ರೆಗಳ ಕ್ಯಾತೆ
Team Udayavani, Jun 2, 2018, 11:33 AM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಜನಕಲ್ಯಾಣ ಆರೋಗ್ಯ ಯೋಜನೆಯಾಗಿರುವ “ಆಯುಷ್ಮಾನ್ ಭಾರತ’ಕ್ಕೆ ದೇಶದ ಕೆಲವು ಪ್ರಮಖ ಹಾಗೂ ದೊಡ್ಡ ಖಾಸಗಿ ಆಸ್ಪತ್ರೆಗಳು ವಿರೋಧ ವ್ಯಕ್ತಪಡಿಸುತ್ತಿರುವುದಾಗಿ ವರದಿಯಾಗಿದೆ.
ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದಲ್ಲಿ ಕ್ಲಿಷ್ಟಕರ ವೈದ್ಯಕೀಯ ಸೇವೆಯನ್ನು ಕೂಡ ಒದಗಿಸುವ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ ಯೋಜನೆಯನ್ನು ನಿರ್ವಹಿಸುವುದು ತಮಗೆ ಕಷ್ಟವೆಂಬ ನೆಪವನ್ನು ಈ ಖಾಸಗಿ ಆಸ್ಪತ್ರೆಗಳು ಮುಂದೊಡ್ಡುತ್ತಿವೆ. ಈ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಮುಖವಾಗಿ ಕಾಣಿಸುವುಗಳೆಂದರೆ ಫೋರ್ಟಿಸ್, ಅಪೋಲೋ, ಮೇದಾಂತಾ ಮತ್ತು ನಾರಾಯಣ ಮುಂತಾದ ಆಸ್ಪತ್ರೆಗಳು.
ಜಟಿಲ ಹಾಗೂ ಹೆಚ್ಚು ವೆಚ್ಚದಾಯಕವಾಗಿರುವ ಕೆಲವೊಂದು ಚಿಕಿತ್ಸೆಗಳ ಸೇವಾ ಶುಲ್ಕವನ್ನು ಹೆಚ್ಚಿಸಬೇಕೆಂಬ ಆಗ್ರಹದೊಂದಿಗೆ ಈ ಖಾಸಗಿ ಆಸ್ಪತ್ರೆಗಳ ಸಮಿತಿ ನೀತಿ ಆಯೋಗ ಮತ್ತು ಕೇಂದ್ರ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿವೆ. ಜಟಿಲ ಮತ್ತು ವೆಚ್ಚದಾಯಕ ಆರೋಗ್ಯ ಸೇವೆಗಳಿಗೆ ದರ ನಿಗದಿ ಮಾಡುವ ಸ್ವಾತಂತ್ರ್ಯವನ್ನು ತಮಗೆ ನೀಡಬೇಕೆಂದು ಸಮಿತಿ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.
ಬಡ ಜನರಿಗೆ ಕೈಗೆಟಕುವ ದರಗಳಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ ಯೋಜನೆಯಡಿ ದೇಶಾದ್ಯಂತ ಏಕ ಪ್ರಕಾರದ ಆರೋಗ್ಯ ಸೇವಾ ವೆಚ್ಚಗಳನ್ನು ನಿಗದಿಸಲಾಗಿದೆ. ಅಂತಿರುವಾಗ ಯಾವುದೇ ದರ ವ್ಯತ್ಯಾಸವನ್ನು ಆಯಾ ರಾಜ್ಯ ಸರಕಾರಗಳೇ ನಿಭಾಯಿಸಬೇಕೆಂಬುದನ್ನು ಈ ಯೋಜನೆಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.