ತ್ಯಾಜ್ಯ ವಿಲೇವಾರಿಯಿಂದ ವೃದ್ಧಿಸಿದ ಸಮಸ್ಯೆ

Team Udayavani, Jun 2, 2018, 12:06 PM IST

tyajya.jpg

ಮಹದೇವಪುರ: ಬೆಂಗಳೂರು ನಗರದ ತ್ಯಾಜ್ಯವನ್ನು ಇಲ್ಲಿನ ಮೀಟಗಾನಹಳ್ಳಿ ಬಳಿ ಇರುವ ಕಲ್ಲು ಕ್ವಾರಿಗಳಲ್ಲಿ ಅವೈಜ್ಞಾನಿಕವಾಗಿ ಸುರಿಯುತ್ತಿದ್ದು, ಈ ತ್ಯಾಜ್ಯದಿಂದ ಉತ್ಪತ್ತಿಯಾಗುತ್ತಿರುವ ದ್ರವ ರೂಪದ ಅಪಾಯಕಾರಿ ಕೊಳಚೆ (ಲಿಚೆಡ್‌) ಕಣ್ಣೂರು ಕೆರೆ ಸೇರಿ, ಕೆರೆ ನೀರು ಕಲುಷಿತಗೊಂಡಿದೆ. ಜತೆಗೆ ಸುತ್ತಮುತ್ತ ಅಂತರ್ಜಲ ಕೂಡ ಕೊಳಕಾಗುತ್ತಿದೆ.

ಆರಂಭದಿಂದಲೂ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ, ಸಾರ್ವಜನಿಕರ ಕಣ್ತಪ್ಪಿಸಿ ತ್ಯಾಜ್ಯ ತಂದು ಸುರಿದಿರುವ ಪಾಲಿಕೆ ಅಧಿಕಾರಿಗಳು, ಸಮಸ್ಯೆ ತೀವ್ರಗೊಂಡಿದ್ದರೂ ಪರಿಹರಿಸಲು ಗಮನಹರಿಸದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸುತ್ತಮುತ್ತಲ ಗ್ರಾಮಸ್ಥರು, ಪಾಲಿಕೆ ವಿರುದ್ಧ ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ.

ಹೊಸೂರುಬಂಡೆ ಗ್ರಾಮದ ಕಡೆಯಿರುವ ಕಲ್ಲು ಕ್ವಾರಿಗಳ ತಳದಲ್ಲಿ ಮ್ಯಾಟ್‌ (ಟಾರ್ಪಲ್‌) ಹಾಕದೇ ಕಸ ಸುರಿಯಲಾಗುತ್ತಿದೆ. ಹೀಗಾಗಿ ಅಪಾಯಕಾರಿ ಕೊಳಚೆ, ಪಕ್ಕದಲ್ಲೇ ಇರುವ ಕಣ್ಣೂರು ಕೆರೆ ಸೇರುತ್ತಿದೆ. ಈ ಭಾಗದಲ್ಲಿ ಕೃಷಿಗೆ ಆಧಾರವಾಗಿದ್ದ ಕೆರೆ, ಪ್ರಸ್ತುತ ಮಲಿನಗೊಂಡಿದೆ. ದನಕರುಗಳು ಕೆರೆ ನೀರು ಕುಡಿಯದಂತಹ ಪರಿಸ್ಥಿತಿಯಿದ್ದರೂ ಬಿಬಿಎಂಪಿ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ವಾರಿಯಲ್ಲಿ 75 ಲೋಡ್‌ ತ್ಯಾಜ್ಯ ಮಾತ್ರ ಸುರಿಯುವುದಾಗಿ ಹೇಳಿದ್ದ ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯರ ಕಣ್ತಪ್ಪಿಸಿ 350ಕ್ಕೂ ಹೆಚ್ಚು ಲಾರಿ ಲೋಡ್‌ ತ್ಯಾಜ್ಯ ಸುರಿದಿದ್ದಾರೆ. ಈ ಮೂಲಕ ಪಾಲಿಕೆ ಅಧಿಕಾರಿಗಳು ಕಣ್ಣೂರು ಸುತ್ತಮುತ್ತಲ ಗ್ರಾಮಗಳ ಜನರ ಜೀವನದೊಂದಿಗೆ ಆಟವಾಡುತ್ತಿದ್ದಾರೆ ಎಂದು ತಾ.ಪಂ ಮಾಜಿ ಉಪಧ್ಯಕ್ಷೆ ಲಕ್ಷ್ಮಮ್ಮ ನಂಜೇಗೌಡ ದೂರಿದ್ದಾರೆ.

ಕಾಟಾಚಾರಕ್ಕೆ ಔಷಧ ಸಿಂಪಡಣೆ: ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ಜತೆಗೆ, ದುರ್ವಾಸನೆ ಹರಡದಂತೆ ಔಷಧ ಸಿಂಪಡಿಸುವುದಾಗಿ ಹೇಳಿದ್ದ ಬಿಬಿಎಂಪಿ, ಕಣ್ಣೂರು ಸುತ್ತಮುತ್ತಲ ಗ್ರಾಮಸ್ಥರು ಪ್ರತಿಭಟನೆ ನಡೆಸುವವರೆಗೂ ಒಮ್ಮೆ ಕೂಡ ಔಷಧ ಸಿಂಪಡಿಸಿರಲಿಲ್ಲ. ಪ್ರತಿಭಟನೆ ನಂತರ ಕಾಟಾಚಾರಕ್ಕೆ ಔಷಧ ಸಿಂಪಡಿಸಲಾಗುತ್ತಿದೆ. ಪರಿಣಾಮ ಸುತ್ತಲ ವಾತವರಣ ಕಲುಷಿತಗೊಂಡು, ದುರ್ವಾಸನೆ ಹೆಚ್ಚಾಗಿದೆ. ಸೊಳ್ಳೆ, ನೊಣಗಳೂ ಹೆಚ್ಚಿ, ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ ಎಂದು ಲಕ್ಷ್ಮಮ್ಮ ಆತಂಕ ವ್ಯಕ್ತಪಡಿಸಿದರು.

ಕೆರೆ ನೀರು ಮಲಿನಗೊಂಡಿರುವ ಕಾರಣ, ಕಣ್ಣೂರು, ಹೂಸೂರು ಬಂಡೆ, ಕಾಡುಸೊಣಪ್ಪನಹಳ್ಳಿ, ಮೀಟಗಾನಹಳ್ಳಿ ಹಾಗೂ ಬೆಳ್ಳಳಿ ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಒಂದು ವಾರದೊಳಗೆ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ, ಕ್ವಾರಿ ಸುತ್ತಲ ಎಲ್ಲ ಹಳ್ಳಿಗಳ ಗ್ರಾಮಸ್ಥರು ಪಾಲಿಕೆ ವಿರುದ್ಧ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.