ಮೂರು ವರ್ಷದಲ್ಲಿ 79 ರೈತರು ಆತ್ಮಹತ್ಯೆ: ಶಶಿಧರ ಕುರೇರ 


Team Udayavani, Jun 2, 2018, 4:50 PM IST

2-june-25.jpg

ಬಾಗಲಕೋಟೆ: ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ವಿವಿಧ ಇಲಾಖೆಗಳ ಮೂಲಕ ವಿಶೇಷ ಸೌಲಭ್ಯಗಳನ್ನು ದೊರಕಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈ ಕುರಿತು ಜರುಗಿದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆತ್ಮಹತ್ಯೆಗೆ ಒಳಗಾದ ರೈತರ ಕುಟುಂಬಗಳಿಗೆ ಸೌಲಭ್ಯ ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದು, ಈ ಸಮಿತಿ ಕಂದಾಯ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಮೂಲಕ ಸಿಗಬಹುದಾದ ಸೌಲಭ್ಯಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು.

ರೈತರ ಆತ್ಮಹತ್ಯೆಗೆ ಸಂಬಂಧಿ ಸಿದಂತೆ ಜಿಲ್ಲೆಯಲ್ಲಿ ಕಳೆದ 2015-16ನೇ ಸಾಲಿನಲ್ಲಿ 20 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 16 ಪ್ರಕರಣಗಳನ್ನು ಮಾತ್ರ ಸ್ವೀಕರಿಸಲಾಗಿದೆ. 2016-17ನೇ ಸಾಲಿನಲ್ಲಿ ಒಟ್ಟು 24 ಪ್ರಕರಣಗಳಲ್ಲಿ 24 ಪ್ರಕರಣಗಳನ್ನು, 2017-18ನೇ ಸಾಲಿನಲ್ಲಿ 32 ಪ್ರಕರಣಗಳಲ್ಲಿ 30 ಪ್ರಕರಣಗಳನ್ನು ಸ್ವೀಕರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ 3 ಪ್ರಕರಣಗಳು ದಾಖಲಾಗಿದ್ದು, ಸಮಿತಿ ಸಭೆ ನಡೆಸಿ ಶೀಘ್ರದಲ್ಲಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ಇತ್ಯರ್ಥವಾದಲ್ಲಿ ತಕ್ಷಣ ಕೃಷಿ ಇಲಾಖೆಯಿಂದ 5 ಲಕ್ಷ ರೂ. ಪರಿಹಾರಧನ ನೀಡಲಾಗುತ್ತಿದೆ. ಇದರ ಜೊತೆಗೆ ಕಂದಾಯ ಇಲಾಖೆಯಿಂದ ವಿಧವಾ ವೇತನ, ಶಿಕ್ಷಣ ಇಲಾಖೆಯಿಂದ ಸ್ನಾತಕೋತ್ತರ ಪದವಿ ಹಂತದವರೆಗೆ ಉಚಿತ ಶಿಕ್ಷಣ, ಹಾಸ್ಟೆಲ್‌ ಸೌಲಭ್ಯ, ಆರೋಗ್ಯ ಇಲಾಖೆಯಿಂದ ಪರಿಪೂರ್ಣ ಆರೋಗ್ಯ ಸೇವೆ ಸೌಲಭ್ಯಗಳನ್ನು ಒದಗಿಸಲು ಇಂದಿರಾ ಸುರಕ್ಷಾ  ಯೋಜನೆ ಕಾರ್ಡ್‌ ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಂದಾಯ, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳು ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಸೌಲಭ್ಯಗಳು ತಲುಪಿಸುವ ವ್ಯವಸ್ಥೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

2015-16 ರಿಂದ ಹಿಡಿದು ಇಲ್ಲಿಯವರೆಗೆ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು ದೊರೆಯಬೇಕು. ನೊಂದ ರೈತರ ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು.
ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಪ್ರಕರಣ ದಾಖಲಾದ ತಕ್ಷಣ ಮಾಹಿತಿ ಪಡೆದುಕೊಂಡು ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಕೆಲಸವಾಗಬೇಕೆಂದು ಸೂಚಿಸಿದರು. ಸೌಲಭ್ಯಗಳನ್ನು ನೀಡುವಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದೆಂದರು. ಅಲ್ಲದೇ ಈಗಾಗಲೇ ನೊಂದ ರೈತರ
ಕುಟುಂಬಗಳಿಗೆ ನೀಡಿರುವ ಸೌಲಭ್ಯಗಳ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಾಗಲಕೋಟೆ ಉಪವಿಭಾಗಾಧಿಕಾರಿ ಎಚ್‌.ಜಯಾ, ಜಮಖಂಡಿಯ ಎಂ.ಮೂರ್ತಿ, ಜಿಲ್ಲಾ ಜಂಟಿ ನಿರ್ದೇಶಕ ರಮೇಶಕುಮಾರ, ಕೃಷಿ ಇಲಾಖೆಯ ಉಪನಿರ್ದೇಶಕ ಕೊಂಗವಾಡ, ಆರೋಗ್ಯ ಇಲಾಖೆಯ ಡಾ.ಎಂ.ಕೆ.ಪಟ್ಟಣಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಸ್‌.ಅಂಗಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.