ಸಮ್ಮಿಶ್ರ ಸರಕಾರದ ಬಜೆಟ್ ಮಂಡನೆಗೆ ಶೀಘ್ರ ಸಿದ್ಧತೆ: ಕುಮಾರಸ್ವಾಮಿ
Team Udayavani, Jun 2, 2018, 6:55 PM IST
ಬೆಂಗಳೂರು : ಮುಂದಿನ ಮೂರು ಅಥವಾ ನಾಲ್ಕು ದಿನಗಳೊಳಗೆ ರಾಜ್ಯದ ನೂತನ ಸಮ್ಮಿಶ್ರ ಸರಕಾರದ ಬಜೆಟ್ ಮಂಡನೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಿದ್ಧತೆಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯ ಆಯವ್ಯಯದ ಲೇಖಾನುದಾನ ಅವಧಿಯು ಜುಲೈ 31ಕ್ಕೆ ಮುಕ್ತಾಯವಾಗಲಿದೆ. ಅಷ್ಟರೊಳಗೆ ಹೊಸ ಬಜೆಟ್ ಮಂಡನೆಯಾಗಬೇಕಿದೆ. ಹಿಂದಿನ ಕಾಂಗ್ರೆಸ್ ಸರಕಾರ ತನ್ನಅಧಿಕಾರಾವಧಿಯಲ್ಲಿ ಘೋಷಿಸಿದ್ದ ಪ್ರಮುಖ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಮತ್ತು ನೂತನ ಸಮ್ಮಿಶ್ರ ಸರಕಾರದ ಹೊಸ ಯೋಜನೆಗಳ ಬಗ್ಗೆ ವಿಸ್ತೃತ ಚಿಂತನೆ ನಡೆಯಲಿದೆ ಎಂದು ಸಿಎಂ ಹೇಳಿದ್ದಾರೆ.
ಸಮ್ಮಿಶ್ರ ಸರಕಾರದ ದಲ್ಲಿ ಕೊಟ್ಟು ತೆಗೆದುಕೊಳ್ಳುವ ಸೌಹಾರ್ದದ ನೀತಿಯನ್ನು ಅನುಸರಿಸಬೇಕಾಗುತ್ತದೆ; ಆ ಪ್ರಕಾರ ಪರಸ್ಪರ ತಿಳಿವಳಿಕೆಯ ನೆಲೆಯಲ್ಲಿ ಖಾತೆಗಳು ಹಂಚಿಕೆಯಾಗಿವೆ. ಈ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹಮತವನ್ನು ಪಡೆಯಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಕೇಂದ್ರ ಸರಕಾರ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವನ್ನು ರಚಿಸಿದೆ. ಆ ಕುರಿತ ಗಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಅಂತೆಯೇ ರಾಜ್ಯಕ್ಕೆ ಆಗುವ ಅನುಕೂಲ ಅಥವಾ ಅನನುಕೂಲದ ಬಗ್ಗೆ ಕಾನೂನು ತಜ್ಞರೊಂದಿಗೆ ಮತ್ತು ಜಲಸಂಪನ್ಮೂಲ ಪರಿಣತರೊಂದಿಗೆ ಸಮಾಲೋಚಿಸಿ ಮುಂದಡಿ ಇಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.