ಆನೆ ದಂತ ನಾಪತ್ತೆ ಪ್ರಕರಣ:ಕಡೆಗೂ ದೂರು ದಾಖಲು
Team Udayavani, Jun 3, 2018, 7:05 AM IST
ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ನಗರದ ಎಸ್‌ಪಿ ಕಚೇರಿಯ ಜೋಡಿ ಆನೆ ದಂತ ನಾಪತ್ತೆ ಪ್ರಕರಣದ ಕುರಿತು ಯಾವುದೇ ಸುಳಿವು ಇದುವರೆಗೆ ಪೊಲೀಸರಿಗೆ ಸಿಕ್ಕಿಲ್ಲ.
ಹೀಗಾಗಿ ಸುಮಾರು ಒಂದು ವರ್ಷದ ಬಳಿಕ ಈ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು
ದಾಖಲಿಸಿಕೊಂಡಿದ್ದಾರೆ.
ಎಸ್‌ಪಿ ಕಚೇರಿಯ ರಹಸ್ಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟೆನೋಗ್ರಾಫರ್ ಎ.ಬಿ. ಶ್ರೀನಾಥ್ ಎಂಬುವವರು ದೂರು ದಾಖಲಿಸಿದ್ದಾರೆ.
ಈ ಜೋಡಿ ದಂತಗಳು 2015ರಲ್ಲಿ ನಾಪತ್ತೆಯಾಗಿರಬಹುದು ಎನ್ನಲಾಗಿದ್ದು, ಕಳೆದ ವರ್ಷ ಅಂದರೆ 2017ರ ಜೂನ್ 28ರಂದು ಹೊರ ಜಗತ್ತಿಗೆ ಗೊತ್ತಾಗಿತ್ತು. ಆದರೆ ಪೊಲೀಸ್ ಇಲಾಖೆಗೆ ಜೂನ್ 28ಕ್ಕೆ ಒಂದು ತಿಂಗಳ ಮೊದಲೇ ಗೊತ್ತಾಗಿದ್ದು, ಈ ಸಂಬಂಧ ಮಾಹಿತಿ ಸಂಗ್ರಹಿಸುವಷ್ಟರಲ್ಲಿ ಪತ್ರಿಕೆ ಗಳಲ್ಲಿ ಇದು ಪ್ರಕಟ ಗೊಂಡಿದ್ದರಿಂದ ಇಲಾಖೆ
ಅಧಿಕೃತವಾಗಿ ನಾಪತ್ತೆಯಾಗಿರುವುದನ್ನು ಒಪ್ಪಿಕೊಂಡು ಇಲಾಖಾ ವಿಚಾರಣೆ ಆರಂಭಿಸಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ತನಿಖೆ ನಡೆಸಿದ್ದರು. ಆದರೆ ಯಾವುದೇ ಪ್ರಯೋಜನವಾಗದೆ ಕೈ ಚೆಲ್ಲಿದರು.
ಈ ಸಂಬಂಧ ಯಾವುದೇ ಮಾಹಿತಿ ಕೂಡ ಸಿಗಲಿಲ್ಲ. ಹೀಗಾಗಿ ಅಂತಿಮವಾಗಿ 22-5-2018ರಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ದಂತ ಕಳವು ಪ್ರಕರಣದ ಕುರಿತು ಅಧಿಕೃತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.