ಬೀಗಮುದ್ರೆ ಕಂಡ ಉಡುಪಿಯ ಮೊದಲ ಶಾಲೆ
Team Udayavani, Jun 3, 2018, 6:00 AM IST
ಕುಂದಾಪುರ: ಸಕಲ ಸೌಲಭ್ಯಗಳಿದ್ದರೂ ಮಕ್ಕಳ ಸಂಖ್ಯೆಯ ಕೊರತೆಯಿಂದಾಗಿ ಈ ವರ್ಷ ಕುಂದಾಪುರ ವಲಯದ ಸಿದ್ದಾಪುರ ಬಳಿಯ ಹರ್ಕೆಬಾಳು ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲಾಗಿದ್ದು, ಇಲ್ಲಿರುವ ವಿದ್ಯಾರ್ಥಿಗಳನ್ನು ಸಮೀಪದ ಸಿದ್ದಾಪುರ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳಾಂತರಿಸಲಾಗಿದೆ. ಅರ್ಧ ಶತಮಾನ ಇತಿಹಾಸವಿರುವ ಈ ಶಾಲೆ ಈಗ ಉಡುಪಿ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಬೀಗಮುದ್ರೆ ಕಂಡ ಮೊದಲ ಶಾಲೆ ಎಂಬ ಅಪವಾದಕ್ಕೆ ಗುರಿಯಾಗಿದೆ.
ತರಗತಿಗೊಬ್ಬ ವಿದ್ಯಾರ್ಥಿ
ಒಂದರಿಂದ 5ನೇ ತರಗತಿವರೆಗೆ ಇದ್ದು, ಕಳೆದ ಶೈಕ್ಷಣಿಕ ವರ್ಷದಲ್ಲಿ ತರಗತಿಗೊಬ್ಬರಂತೆ ಐವರು ವಿದ್ಯಾರ್ಥಿಗಳು ಕಲಿಯುತ್ತಿದ್ದರು. ಆದರೆ 2018-19ನೇ ಸಾಲಿಗೆ ಇಬ್ಬರು ವಿದ್ಯಾರ್ಥಿಗಳು ಸಿದ್ದಾಪುರದ ಶಾಲೆಗೆ ದಾಖಲಾಗಿದ್ದು, ಕೊನೆಗೆ ಉಳಿದವರು ಕೇವಲ ಮೂವರು. ಹೀಗಾಗಿ ಒಬ್ಬನಿಗಾಗಿ ಶಾಲೆಯನ್ನು ಮುಚ್ಚಲಾಗಿದೆ. ಈ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಹಿಂದೆ 50ರಿಂದ 60 ವಿದ್ಯಾರ್ಥಿಗಳು ಕಲಿಯುತ್ತಿದ್ದರು. ಆದರೆ 2000-01ರ ಬಳಿಕ ಸಿದ್ದಾಪುರದಲ್ಲಿ ಆಂಗ್ಲ ಮಾಧ್ಯಮ ಮತ್ತು ಖಾಸಗಿ ಶಾಲೆಗಳ ಸಂಖ್ಯೆ ಹೆಚ್ಚಾದದ್ದು ಇಲ್ಲಿನ ದಾಖಲಾತಿ ಮೇಲೆ ಪರಿಣಾಮ ಬೀರಿತು.
ಇಂಗ್ಲಿಷ್ ವ್ಯಾಮೋಹ
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರಕಾರ ಈಗ ಎಲ್ಲ ವ್ಯವಸ್ಥೆ ಕಲ್ಪಿಸುತ್ತಿದೆ. ಆದರೆ ಈ ಶಾಲೆಯಲ್ಲಿ 3 ವರ್ಷಗಳಿಂದ ಮಕ್ಕಳ ಸಂಖ್ಯೆ 5ಕ್ಕಿಂತ ಹೆಚ್ಚಾಗಿಲ್ಲ. ನಾನು ಬಂದ ಮೊದಲ ವರ್ಷ 18 ಮಂದಿ ಇದ್ದರು. ಕ್ರಮೇಣ ಕಡಿಮೆಯಾಗುತ್ತಿದೆ. ಇಲ್ಲಿ ಮನೆಗಳು ಕಡಿಮೆ ಇದ್ದು, ಇರುವ ಕೆಲವೇ ಮಕ್ಕಳನ್ನೂ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸಲಾಗುತ್ತಿದೆ ಎಂದು ಶಾಲೆಯ ಏಕೈಕ ಶಿಕ್ಷಕ ಪ್ರದೀಪ್ ಕುಮಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.
50 ವರ್ಷಗಳ ಇತಿಹಾಸವಿರುವ ಈ ಶಾಲೆಯನ್ನು ಉಳಿಸಿಕೊಳ್ಳಲು ಇಲಾಖೆಯ ಕಡೆಯಿಂದ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗಿತ್ತು. ಪ್ರಸಕ್ತ ವರ್ಷ ಯಾವುದೇ ವಿದ್ಯಾರ್ಥಿಗಳು ದಾಖಲಾಗಿಲ್ಲ. ಇರುವ ಮೂವರು ವಿದ್ಯಾರ್ಥಿಗಳಿಗಾಗಿ ಶಾಲೆ ನಡೆಸುವುದು ಕಷ್ಟಕರವಾದ್ದರಿಂದ ತಾತ್ಕಾಲಿಕ ವಾಗಿ ಮುಚ್ಚುವ ನಿರ್ಧಾರಕ್ಕೆ ಬರಲಾಗಿದೆ. ಇರುವ ಮೂವರನ್ನು ಸಿದ್ದಾಪುರ ಶಾಲೆಗೆ ಸ್ಥಳಾಂತರಿಸಲಾಗಿದೆ.
ಅಶೋಕ ಕಾಮತ್ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ
ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.