2030ರ ಏಶ್ಯಾಡ್, 2032ರ ಒಲಿಂಪಿಕ್ಸ್: ಭಾರತ ಆಸಕ್ತಿ
Team Udayavani, Jun 3, 2018, 11:51 AM IST
ಹೊಸದಿಲ್ಲಿ: ವಿಶ್ವ ದರ್ಜೆಯ ಕ್ರೀಡಾಕೂಟಗಳನ್ನು ಆಯೋಜಿಸುವಲ್ಲಿ ಸದಾ ಮುಂದಿರುವ ಭಾರತವೀಗ 2030ರ ಏಶ್ಯನ್ ಗೇಮ್ಸ್ ಹಾಗೂ 2032ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲು ಆಸಕ್ತಿ ವ್ಯಕ್ತಪಡಿಸಿದೆ. ಜತೆಗೆ 2016ರ ಯುತ್ ಒಲಿಂಪಿಕ್ಸ್ ಗೇಮ್ಸ್ ಆತಿಥ್ಯಕ್ಕೂ ಮುಂದಾಗಿದೆ. ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ (ಐಒಎ) ಶನಿವಾರ ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.
“ಶನಿವಾರದ ಐಒಎ ಸಭೆಯಲ್ಲಿ ನಾವು ಕೆಲವು ದಿಟ್ಟ ನಿರ್ಧಾರಗಳ ಬಗ್ಗೆ ಚರ್ಚಿಸಿದೆವು. ವಿಶ್ವ ದರ್ಜೆಯ ಕ್ರೀಡಾಕೂಟಗಳ ಆತಿಥ್ಯ ವಹಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ನೂತನ ಕಮಿಟಿ ಹಾಗೂ ಕಮಿಶನ್ಸ್ ನೇಮಕಗಳ ಬಗ್ಗೆ ಸೂಕ್ತ ನಿರ್ಣಯಕ್ಕೆ ಬರಲಾಗಿದೆ. ಇದು ನಮ್ಮ ಭವಿಷ್ಯದ ಕ್ರೀಡಾ ಯೋಜನೆಗಳಿಗೆ ಹೊಸ ದಾರಿಯನ್ನು ಕಲ್ಪಿಸಲಿದೆ’ ಎಂದು ಐಒಎ ಅಧ್ಯಕ್ಷ ನರೀಂದರ್ ಬಾತ್ರಾ ಹೇಳಿದರು.
ಭಾರತದ ದೊಡ್ಡ ಕೂಟಗಳು
ಭಾರತದಲ್ಲಿ ನಡೆದ ಕೊನೆಯ ವಿಶ್ವ ಮಟ್ಟದ ದೊಡ್ಡ ಕ್ರೀಡಾಕೂಟವೆಂದರೆ 2010ರ ಕಾಮನ್ವೆಲ್ತ್ ಗೇಮ್ಸ್. ಈವರೆಗೆ 2 ಏಶ್ಯಾಡ್ ಕ್ರೀಡಾಕೂಟಗಳನ್ನೂ ಭಾರತ ಯಶಸ್ವಿಯಾಗಿ ನಡೆಸಿಕೊಟ್ಟಿದೆ (1951 ಹಾಗೂ 1984).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.