ಅಕ್ಷರ ಕೈತೋಟ ನಿರ್ಮಾಣ ಕಡ್ಡಾಯ: ಶಾಲೆಗಳಿಗೆ ಸುತ್ತೋಲೆ

Team Udayavani, Jun 3, 2018, 11:59 AM IST

3-june-8.jpg

ಬಂಟ್ವಾಳ : ಜಿಲ್ಲೆಯ ಎಲ್ಲ ಶಾಲೆಗಳಲ್ಲೂ ಅಕ್ಷರ ಕೈತೋಟ ನಿರ್ಮಿಸುವಂತೆ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ. ಆದೇಶಿಸಿದ್ದು, ಈ ಬಗ್ಗೆ ಶಾಲೆಗಳಿಗೆ ಸುತ್ತೋಲೆ ರವಾನೆಯಾಗಿದೆ.

ತರಗತಿಯೊಳಗೆ ಶಿಕ್ಷಣ ನೀಡುವ ಜತೆಗೆ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಾಗಿ ಶಾಲಾ ಕೈತೋಟ ಮಾಡಿ ತರಕಾರಿ ಬೆಳೆಸುವ ಪ್ರಾತ್ಯಕ್ಷಿಕೆ ನೀಡುವ ಅನೇಕ ಯಶಸ್ವಿ ಶಾಲೆಗಳಿವೆ. ಅಡಿಕೆ ತೋಟ ಬೆಳೆದು ಕೃಷಿ ಪಾಠ ಬೋಧಿಸುವ, ಆದಾಯ ಪಡೆಯುವ, ತರಕಾರಿ ಬೆಳೆದು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಿ ಸ್ವಾವಲಂಬಿಯಾಗಿರುವ ಶಾಲೆಗಳನ್ನು ಉದಾಹರಿಸಿ ಮುಂದಕ್ಕೆ ಎಲ್ಲ ಶಾಲೆಗಳು ಇಂತಹ ಮಾದರಿ ಅನುಸರಿಸಲು ಸೂಚಿಸಿದೆ.

ವಿದ್ಯಾರ್ಥಿಗಳಿಗೆ ಕೃಷಿ ಕಲಿಕೆ
ಮಧ್ಯಾಹ್ನದ ಬಿಸಿಯೂಟಕ್ಕೆ ಅಂಗಡಿಗಳಿಂದ ತರಕಾರಿ ಕೊಂಡು ತರುವ ಬದಲು, ವಿದ್ಯಾರ್ಥಿಗಳನ್ನೇ ರೈತರನ್ನಾಗಿಸಿ ಶಾಲೆಯಲ್ಲಿಯೇ ತರಕಾರಿ ಬೆಳೆಯುವ ಹಾಗೂ ಕೃಷಿ ಕಲಿಕೆಯನ್ನು ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಕರಗತಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇನ್ನು ಮುಂದೆ ದ.ಕ. ಜಿಲ್ಲೆಯ ಎಲ್ಲ ಶಾಲೆಗಳಲ್ಲೂ ಕೈತೋಟ ಕಡ್ಡಾಯ. ಶಿಕ್ಷಣ ಇಲಾಖೆ ಮೂಲಕ ಇಂತಹ ವಿಶಿಷ್ಟ ಪ್ರಯೋಗಕ್ಕೆ ದ.ಕ. ಜಿ.ಪಂ. ಮುಂದಾಗಿದೆ. ಶಾಲೆಗಳಲ್ಲಿ ಶಿಕ್ಷಕರ ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳಿಂದಲೇ ಕೈತೋಟ ನಿರ್ಮಿಸಿದರೆ ಮಕ್ಕಳಿಗೆ ಅನುಭವದ ಪಾಠ ನೀಡಿದಂತಾಗುತ್ತದೆ ಎಂಬುದು ಇದರ ಹಿನ್ನೆಲೆ.

ಶಾಲಾ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ಆಸಕ್ತಿ ಹುಟ್ಟಿಸುವ ಈ ಕಾರ್ಯ ಈಗಾಗಲೇ ಕೆಲವು ಶಾಲೆಗಳಲ್ಲಿ ನಡೆಯುತ್ತಿದೆ. ದ.ಕ. ಜಿಲ್ಲೆಯ 1,423 ಶಾಲೆ ಗಳ ಪೈಕಿ 401 ಶಾಲೆಗಳು ತರಕಾರಿ ತೋಟಗಳನ್ನು ಮಾಡಿ ಗಮನ ಸೆಳೆದಿವೆ.

ಆರೋಗ್ಯ ವರ್ಧನೆ
ವಿದ್ಯಾರ್ಥಿಗಳಿಗೆ ರಾಸಾಯನಿಕ ಬಳಸದೆ ಪೌಷ್ಟಿಕಾಂಶವುಳ್ಳ ತರಕಾರಿ ನೀಡುವುದರಿಂದ ಮಕ್ಕಳ ಆರೋಗ್ಯ ವರ್ಧನೆಯಾಗುತ್ತದೆ. ಜತೆಗೆ ವೃತ್ತಿ ಕೌಶಲದತ್ತ ಆಕರ್ಷಿಸುವ ನಿಟ್ಟಿನಲ್ಲಿ ಕೈತೋಟ ನಿರ್ಮಿಸಿದರೆ ಒಳಿತು ಎನ್ನುವ ಚಿಂತನೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ಅವರದ್ದಾಗಿದೆ.

ಅಕ್ಷರ ಕೈತೋಟ ನಿರ್ಮಿಸಲು ಪೂರಕ ನೆರವನ್ನು ಜಿ.ಪಂ. ಸಂಬಂಧಪಟ್ಟ ಇಲಾಖೆ ಗಳ ಮೂಲಕ ನೀಡಲಿದೆ. ಸಮಸ್ಯೆಗಳಿದ್ದಲ್ಲಿ ಲಿಖಿತವಾಗಿ ತಿಳಿಸುವಂತೆ ಶಾಲಾ ಶಿಕ್ಷಕರಿಗೆ ಸೂಚಿಸಲಾಗಿದೆ.

ಏನಿದು ಅಕರ ಕೈ ತೋಟ?
ಶಿಕ್ಷಣದ ಜತೆಗೆ ಸರಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಯೋಜನೆ ಅಕ್ಷರ ದಾಸೋಹ. ಮಧ್ಯಾಹ್ನದ ಬಿಸಿಯೂಟಕ್ಕೆ ಬೇಕಾದ ತರಕಾರಿಗಳನ್ನು ಅಂಗಡಿಯಿಂದ ಕೊಂಡು ತರುವ ಬದಲು ಶಾಲೆಯಲ್ಲಿಯೇ ಬೆಳೆದು ಅಡುಗೆಗೆ ತಾಜಾ ತರಕಾರಿಗಳನ್ನು ಬಳಸಿಕೊಳ್ಳುವ ಯೋಜನೆಯೇ ಅಕ್ಷರ ಕೈತೋಟ. ಬಂಟ್ವಾಳ ತಾಲೂಕಿನ ಕೆದ್ದಳಿಕೆ, ಮಧ್ವ, ಬೊಳಂತಿಮೊಗರು ಸರಕಾರಿ ಶಾಲೆಗಳಲ್ಲಿ ಅತ್ಯುತ್ತಮವಾದ ಕೈತೋಟ ನಿರ್ಮಿಸಿದ್ದು, ಈ ಶಾಲೆಗಳ ಕೃಷಿ ಸಾಧನೆಯ ಕೈಪಿಡಿಯನ್ನು ಜಿ.ಪಂ.ನ ಅಕ್ಷರ ದಾಸೋಹ ಕಚೇರಿ ಹೊರತಂದಿದೆ. ಇದೇ ಸ್ಫೂರ್ತಿಯಿಂದ ಜಿ.ಪಂ. ಕಾರ್ಯ ನಿರ್ವ ಹಣಾಧಿಕಾರಿ ಅಕ್ಷರ ಕೈತೋಟಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ಮಕ್ಕಳಲ್ಲಿ ಆಸಕ್ತಿ
ಈಗಾಗಲೇ ಕೆಲವು ಶಾಲೆಗಳು ಕೈತೋಟ ಮಾಡಿ ಯಶಸ್ವಿಯಾಗಿವೆ. ಈ ವರ್ಷದಿಂದ ಜಿಲ್ಲೆಯ ಎಲ್ಲ ಶಾಲೆಗಳಲ್ಲೂ ಅಕ್ಷರ ಕೈತೋಟ ಮಾಡುವಂತೆ ತಿಳಿಸಲಾಗಿದೆ. ಇದರಿಂದಾಗಿ ತಾಜಾ ಹಾಗೂ ಆರೋಗ್ಯಕರ ಆಹಾರ ಸಿಗುವುದರ ಜತೆಗೆ ಮಕ್ಕಳಿಗೆ ಕೃಷಿ ತೋಟಗಾರಿಕೆಯಲ್ಲಿ ಆಸಕ್ತಿ ಮೂಡುತ್ತದೆ. ಜೀವನ ಶಿಕ್ಷಣದ ಕಲಿಕೆಗೂ ಅವಕಾಶವಾಗುತ್ತದೆ. 
 -  ಡಾ| ಎಂ.ಆರ್‌. ರವಿ
     ಸಿಇಒ, ದ.ಕ. ಜಿ.ಪಂ.

 ಬಂಟ್ವಾಳ ಮಾದರಿ
ಎಲ್ಲ ಶಾಲೆಗಳು ಕಡ್ಡಾಯವಾಗಿ ಕೈತೋಟ ಬೆಳೆಸಬೇಕು. ಸಾಕಷ್ಟು ಸ್ಥಳ ಇಲ್ಲದ ಶಾಲೆಗಳು ವರಾಂಡದಲ್ಲಿ, ಟೆರೆಸ್‌ನಲ್ಲಿ ಚಟ್ಟಿ ಮೂಲಕವೂ ಬೆಳೆಸಬಹುದು. ತೋಟಗಾರಿಕೆ, ಕೃಷಿ ಇಲಾಖೆ ಮೂಲಕ ತರಕಾರಿ ಬೀಜ ಒದಗಿಸುವ ವ್ಯವಸ್ಥೆ ಆಗಿದೆ. ಶಿಕ್ಷಣ ಇಲಾಖೆಯ ಪ್ರಿನ್ಸಿಪಾಲ್‌ ಸೆಕ್ರೆಟರಿ ಅವರು ರಾಜ್ಯ ಸರಕಾರಕ್ಕೆ ಬರೆದ ಪತ್ರದಲ್ಲಿ ಬಂಟ್ವಾಳವನ್ನು ಮಾದರಿ ಎಂದು ವಿಶೇಷವಾಗಿ ಉಲ್ಲೇಖೀಸಿ ಪತ್ರ ಬರೆದಿದ್ದಾರೆ.
 - ಎನ್‌. ಶಿವಪ್ರಕಾಶ್‌
     ಕ್ಷೇತ್ರ ಶಿಕ್ಷಣಾಧಿಕಾರಿ, ಬಂಟ್ವಾಳ

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.