ನಿಗಮಾಧ್ಯಕ್ಷ ಸ್ಥಾನ ನೀಡಲು ಆಗ್ರಹ

Team Udayavani, Jun 3, 2018, 1:23 PM IST

Belman tollgate protest 1.jpg

ಕೋಲಾರ: ರಾಜ್ಯದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್‌ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಹಾರೋಹಳ್ಳಿ ಎಚ್‌.ವೆಂಕಟೇಶಪ್ಪರಿಗೆ ಯಾವುದಾದರೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಸಮಿತಿ ಆಗ್ರಹಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಿಗ ದಂಡೋರ ಜಿಲ್ಲಾ ಸಮಿತಿ ಮುಖಂಡ ಸಾಹುಕಾರ್‌ ಶಂಕರಪ್ಪ ಇತರರು, ಎಚ್‌.ವೆಂಕಟೇಶಪ್ಪರಿಗೆ ಯಾವುದಾದರೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಸರಕಾರವನ್ನು ಆಗ್ರಹಿಸಿದರು.

ಹಾರೋಹಳ್ಳಿ ಎಚ್‌.ವೆಂಕಟೇಶಪ್ಪರಿಗೆ ನಿಗಮ ಮಂಡಳಿ ಜೊತೆಗೆ ಕೆಜಿಎಫ್ ಶಾಸಕಿ ರೂಪಕಲಾ, ವಿಧಾನ ಪರಿಷತ್‌ ಸದಸ್ಯರಾದ ಧರ್ಮಸೇನ, ಆರ್‌.ಬಿ.ತಿಮ್ಮಾಪುರ್‌ರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ  ಯಾವುದೇ ರಾಜಕೀಯ ಪಕ್ಷಕ್ಕೂ ಮಾದಿಗ ಸಮಾಜದವರ ಮೇಲೆ ಕಳಕಳಿ ಇಲ್ಲದಿರುವುದು ಕಂಡು ಬರುತ್ತಿದೆ, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಮಾದಿಗ ಸಮಾಜದ ಮತ ಬ್ಯಾಂಕುಗಳಾಗಿ ಮಾಡಿಕೊಂಡಿದ್ದಾರೆಯೇ ಹೊರತು ಅಭಿವೃದ್ಧಿಯ ಹೆಸರಿನಲ್ಲಿ ವಂಚಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ದಲಿತರಲ್ಲೇ ಅತಿ ಹಿಂದುಳಿದ ಸಮಾಜಕ್ಕೆ ಸೇರಿದ ಮಾದಿಗ ಜನಾಂಗವನ್ನು ಕಡೆಗಣಿಸುತ್ತಿರುವುದು ಎದ್ದುಕಾಣುತ್ತಿದೆ. ಮಾದಿಗ ಸಮಾಜಕ್ಕೆ ಸಿಗಬೇಕಾದ ಎಂಎಲ್‌ಎ, ಎಂಎಲ್‌ಸಿ ಹಾಗೂ ನಿಗಮ ಮಂಡಳಿ ಸ್ಥಾನಮಾನಗಳು ಸಂಪೂರ್ಣವಾಗಿ ಕೈತಪ್ಪಿ ಹೋಗಿ ಪರಿಶಿಷ್ಟ ಜಾತಿಯ ಬೇರೆ ಸಮುದಾಯಗಳ ಪಾಲಾಗುತ್ತಿವೆ ಎಂದು ದೂರಿದರು.

ಹಾರೋಹಳ್ಳಿ ಎಚ್‌.ವೆಂಕಟೇಶಪ್ಪ ಮಾತನಾಡಿ, ತಾವು ಜೆಡಿಎಸ್‌ನ ನಿಷ್ಠಾವಂತರಾಗಿದ್ದು, ಹಿಂದೆಯೂ ಮುಖಂಡರು ಅನೇಕ ಹುದ್ದೆಗಳ ವಾಗ್ಧಾನ ಮಾಡಿದ್ದರು. ಈ ಬಾರಿ ಸಮ್ಮಿಶ್ರ ಸರಕಾರದಲ್ಲಿ ಅವಕಾಶ ಕಲ್ಪಿಸಬೇಕೆಂದರು. ಮುಖಂಡರಾದ ಪ್ರದೀಪ್‌ಕುಮಾರ್‌, ಚನ್ನಸಂಗ್ರ ವೆಂಕಟೇಶಪ್ಪ, ಜಯಚಂದ್ರ, ವಿ.ರಾಜೇಶ್‌, ಚಂಜಿಮಲೆ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.