ಸಾಂಸ್ಕೃತಿಕ ನಗರಿಯಲ್ಲಿ ಸಂಜೆ ಮಳೆಯಬ್ಬರ
Team Udayavani, Jun 3, 2018, 1:24 PM IST
ಮೈಸೂರು: ನಗರದಲ್ಲಿ ಶನಿವಾರ ಸಂಜೆ ಸುರಿದ ಭಾರೀ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡ ಪರಿಣಾಮ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಕೆಲವು ದಿನಗಳಿಂದ ಸಂಜೆ ವೇಳೆಯಲ್ಲಿ ಸುರಿಯುತ್ತಿದ್ದ ಮಳೆರಾಯನ ಆರ್ಭಟ ಕಳೆದೆರಡು ದಿನಗಳಿಂದ ತಣ್ಣಗಾಗಿತ್ತು.
ಆದರೆ ಶನಿವಾರ ಸಂಜೆ ಸುರಿದ ಮಳೆಯ ಅಬ್ಬರಕ್ಕೆ ಸಾಂಸ್ಕೃತಿಕ ನಗರಿಯ ಜನತೆ ತತ್ತರಿಸಿದರು. ನಗರದಲ್ಲಿ ಬೆಳಗ್ಗಿನಿಂದಲೂ ಬಿಸಿಲಿನ ತಾಪಮಾನ ಹೆಚ್ಚಾಗಿತ್ತಾದರೂ, ಮಧ್ಯಾಹ್ನ 3 ಗಂಟೆ ನಂತರ ಮೋಡ ಕವಿದ ವಾತಾವರಣದಿಂದಾಗಿ ಸ್ವಲ್ಪಮಟ್ಟಿಗೆ ತಂಪಾದ ವಾತಾವರಣವಿತ್ತು. ಆದರೆ ಸಂಜೆ 4.30ರ ವೇಳೆಗೆ ಶುರುವಾದ ವರುಣನ ಆರ್ಭಟಕ್ಕೆ ನಗರದ ಜನತೆ ತೊಂದರೆ ಅನುಭವಿಸಬೇಕಾಯಿತು.
ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿದ್ದರಿಂದ ಮಳೆ ನೀರು ಹೊರ ಹಾಕಲು ಅಂಗಡಿ ಮಾಲಿಕರು ಹಾಗೂ ಸಿಬ್ಬಂದಿ ಸಾಕಷ್ಟು ಪರದಾಡಿದರು. ಇನ್ನೂ ಮಳೆ ನೀರಿನಲ್ಲಿ ಮುಳುಗಿದ ಬೈಕ್ ಎತ್ತಲು ಬೈಕ್ ಸವಾರರು ಹರಸಾಹಸಪಡಬೇಕಾಯಿತು. ಅಲ್ಲದೆ ನಗರದ ಹಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು.
ರಸ್ತೆಗಳು ಜಲಾವೃತ: ಸತತ ಒಂದೂವರೆ ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿದ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿತು. ಪ್ರಮುಖವಾಗಿ ದೊಡ್ಡಗಡಿಯಾರ ವೃತ್ತ, ಚಾಮರಾಜ ಜೋಡಿ ರಸ್ತೆ, ಅಗ್ರಹಾರದ ಎಂ.ಜಿ.ರಸ್ತೆ, ಜೆಎಸ್‌ಎಸ್ ಆಸ್ಪತ್ರೆ ಮುಂಭಾಗದ ರಸ್ತೆ, ವಾಲ್ಮೀಕಿ ರಸ್ತೆ,
ಲಿಡೋ ಚಿತ್ರಮಂದಿರ ಸಮೀಪದ ಬಿ.ಎನ್. ರಸ್ತೆ, ಅಶೋಕರಸ್ತೆ ಸೇರಿದಂತೆ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಭಾರೀ ಪ್ರಮಾಣದ ನೀರು ಹರಿದ ಪರಿಣಾಮ ಸಾಕಷ್ಟು ತೊಂದರೆ ಉಂಟಾಗಿತ್ತು. ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿದ್ದರಿಂದಾಗಿ ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಹೈರಾಣಾದರು.
ತಗ್ಗು ಪ್ರದೇಶಗಳಿಗೆ ನೀರು: ನಗರದಲ್ಲಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಅಲ್ಲಿನ ನಿವಾಸಿಗಳು ತೊಂದರೆ ಅನುಭವಿಸಿದರು. ಮೇದರ್ ಬ್ಲಾಕ್, ರಾಮಾನುಜ ರಸ್ತೆಯ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆ ನುಗ್ಗಿದ ಪರಿಣಾಮ ಎಲ್ಲಾ ಮನೆಗಳು ಜಲಾವೃತಗೊಂಡಿತ್ತು. ಈ ವೇಳೆ ಸ್ಥಳೀಯ ನಿವಾಸಿಗಳು ಮಳೆಯನ್ನು ಲೆಕ್ಕಿಸದೆ ಮನೆಯಿಂದ ನೀರನ್ನು ಹೊರಹಾಕಲು ಪರಾದಾಡಿದರು.
ನಗರ ಪಾಲಿಕೆಗೆ ಹಲವಾರು ಬಾರಿ ಮನವಿ ನೀಡಿ ಮಳೆ ನೀರು ಚರಂಡಿಯಲ್ಲಿ ಹರಿದುಹೋಗುವಂತೆ ವ್ಯವಸ್ಥೆಗೊಳಿಸಿ ಎಂದರೂ ಪಾಲಿಕೆ ಇತ್ತ ಗಮನ ಹರಿಸುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪಾಲಿಕೆ ಸದಸ್ಯ ಸುನೀಲ್ ಅವರನ್ನು ತರಾಟೆಗೆ ತೆಗೆದುಕೊಂಡ ನಿವಾಸಿಗಳು ತಮ್ಮ ಅಳಲು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.