ಶಾಲಾ ಮಕ್ಕಳಿಗೆ ಪಾಠ ಮಾಡಿದ ಕುಂದಾಪುರ ಎಸಿ!
Team Udayavani, Jun 4, 2018, 6:00 AM IST
ಕುಂದಾಪುರ: ದೇಶದಲ್ಲಿ ಶೇ.26ರಷ್ಟು ಅನಕ್ಷರತೆ ಇದೆ. ಆದರೆ ದ.ಕ., ಉಡುಪಿಯಲ್ಲಿ ಎಲ್ಲರೂ ಸಾಕ್ಷರರಾಗಿದ್ದಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಈ ಮೂಲಕ ಸಾಮರಸ್ಯದ ಬದುಕು, ಪ್ರಾದೇಶಿಕ ಅಸಮತೋಲನ, ಭ್ರಷ್ಟಾಚಾರ, ಕೋಮು ಸಾಮರಸ್ಯದ ಮೂಲಕ ದೇಶದ ಅಭಿವೃದ್ಧಿ ಸಾಧ್ಯ ಎಂದು ಕುಂದಾಪುರ ವಿಭಾಗ ಸಹಾಯಕ ಆಯುಕ್ತ ಟಿ. ಭೂಬಾಲನ್ ಹೇಳಿದರು.
ಅವರು ತಾಲೂಕಿನ ವಕ್ವಾಡಿ ಹಾಗೂ ಹಕ್ಲಾಡಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ 10ನೇ ತರಗತಿ ಮಕ್ಕಳಿಗೆ ಪಾಠ ಮಾಡಿ, ಸಂವಾದ ನಡೆಸಿದರು.
ದೇಶದ ಒಗ್ಗಟ್ಟು ಒಡೆದು ಆಳುವ ಡಿವೈಡಿಂಗ್ ಪಾಲಿಸಿ ಬ್ರಿಟಿಷರ ಕೊಡುಗೆ. ಅದನ್ನೆ ಇಂದು ರಾಜಕೀಯ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ. ಭಾಷೆಗಳ ನಡುವಿನ ಕಿತ್ತಾಟ, ಪ್ರಾದೇಶಿಕ ಅಸಮಾನತೆ, ಭ್ರಷ್ಟಾಚಾರ, ಅನಕ್ಷರತೆಗಳು ದೇಶದ ಅಭಿವೃದ್ಧಿಗೆ ತೊಡಕಾಗಿವೆ ಎಂದರು.
ಎಸಿ ಅವರು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸಮಾಜಶಾಸ್ತ್ರ ಪಾಠ ಬೋಧಿಸಿದರು.
ಹಕ್ಲಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಡಾ| ಕಿಶೋರ್ ಕುಮಾರ್ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿಯ ಬಾಳೆಮನೆ ಗಣಪಯ್ಯ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸಮೃದ್ಧಿ, ರಂಜಿತ್, ದೀಕ್ಷಿತ್, ಸೌರಭ, ನೇಹಾ, ಶ್ರೀಜಿತ್ ಸಂವಾದ ನಡೆಸಿದರು.
ವಕ್ವಾಡಿ ಶಾಲೆಯಲ್ಲಿ ಜೀವನ ಪಾಠ
ವಕ್ವಾಡಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಜೀವನ ಪಾಠ ಮಾಡಿದರು. ಶಾಲೆಗೆ ದಿಢೀರ್ ಭೇಟಿ ನೀಡಿದ ಎಸಿ ಅವರು 8ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಮನುಷ್ಯನ ಜೀವನ ಉತ್ತಮವಾಗಿ ಹಾಗೂ ಉನ್ನತಿಯೆಡೆಗೆ ಸಾಗಲು ಶಿಕ್ಷಣ ಅಗತ್ಯ. ಶೈಕ್ಷಣಿಕ ಬದುಕಿನ ಜತೆಗೆ ಜೀವನ ಮೌಲ್ಯಗಳನ್ನು ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರು ಹಿರಿಯರಿಗೆ ಗೌರವ ನೀಡುವುದು ಮಾತ್ರವಲ್ಲ, ಅಶಕ್ತರಿಗೆ ಉಪಕಾರ ಮಾಡುವ ಸಹೃದಯಿ ಮನೋಭಾವ ಮೂಡಿಸಿಕೊಳ್ಳಬೇಕು ಎಂದರು.
ಶಾಲಾ ಮೂಲ ಸೌಕರ್ಯದ ಕುರಿತು ಶಿಕ್ಷಕರ ಬಳಿ ಮಾಹಿತಿ ಪಡೆದುಕೊಂಡರು.ನೂತನ ಪಠ್ಯಪುಸ್ತಕಗಳನ್ನು ಪರಿಶೀಲಿಸಿದರು.ಬಳಿಕ ಮಕ್ಕಳಿಗೆ ಸಾಂಕೇತಿಕವಾಗಿ ಪುಸ್ತಕ ವಿತರಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಭಾರತಿ, ಶಿಕ್ಷಕರಾದ ಗಣೇಶ್ ಕಾಂಚನ್, ಕೃಷ್ಣ ದೇವಾಡಿಗ, ಸತ್ಯಾನಂದ ಸಾಲಿನ್ಸ್, ಶಶಿಧರ ಶೆಟ್ಟಿ, ಧರ್ಮ ನಾಯ್ಕ, ಮಧುಕರ ಶಿಂಘೆ, ಕುಪ್ಪಯ್ಯ ಪಟಗಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.