3ನೇ ದಿನ ಪೂರೈಸಿದ ರೈತರ ಪ್ರತಿಭಟನೆ
Team Udayavani, Jun 4, 2018, 6:42 AM IST
ಹೊಸದಿಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತದ ರೈತರು ನಡೆಸುತ್ತಿರುವ ಪ್ರತಿಭಟನೆ ರವಿವಾರ 3ನೇ ದಿನ ಪೂರೈಸಿದ್ದು, ಜನತೆಗೆ ಈ ಪ್ರತಿಭಟನೆಯ ಬಿಸಿ ಕ್ರಮೇಣವಾಗಿ ತಟ್ಟತೊಡಗಿದೆ. ಪಂಜಾಬ್, ಹರಿಯಾಣಗಳಲ್ಲಿ ರೈತರ ಪ್ರತಿಭಟನೆ ತುಸು ಹೆಚ್ಚೇ ತೀವ್ರವಾಗಿದೆ. ರವಿವಾರವೂ ಇಲ್ಲಿನ ರೈತರು ತಾವು ಬೆಳೆದ ಬೆಳೆಗಳನ್ನೆಲ್ಲ ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಣಾಮ, ಈ ರಾಜ್ಯಗಳಲ್ಲಿ ತರಕಾರಿ, ಹಾಲು, ಹಣ್ಣುಗಳ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಮಾತ್ರವಲ್ಲ, ಬೆಲೆ ಯಲ್ಲೂ ಏರಿಕೆ ಕಂಡುಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹರಿಯಾಣ ಸಿಎಂ ಖಟ್ಟರ್, ಸರಕಾರದ ವಿರುದ್ಧ ಪ್ರತಿಭಟನೆ ಮಾಡುವು ದರಿಂದ ಯಾವುದೇ ಪ್ರಯೋಜನವಿಲ್ಲ ಎಂದಿ ದ್ದಾರೆ. ಜತೆಗೆ, ತಮ್ಮ ಬೆಳೆಗಳನ್ನು ರಸ್ತೆಯ ಮೇಲೆ ಸುರಿಯುವಂತೆ ಒತ್ತಡ ಹೇರುವವರನ್ನು ರೈತರು ಯಾವತ್ತೂ ಕ್ಷಮಿಸುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.