ಜನ ಬಿಜೆಪಿ ಸರ್ಕಾರ ಬರಲೆಂದು ಮತ ಹಾಕಿದ್ದರು
Team Udayavani, Jun 4, 2018, 2:46 PM IST
ದಾವಣಗೆರೆ: ಜನರ ಆಶಯದಂತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕಿತ್ತು, ಆದರೆ, ಕೇವಲ 10 ಸೀಟುಗಳಿಂದ ನಾವು ಅಧಿಕಾರದಿಂದ ದೂರ ಇರಬೇಕಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.
ಭಾನುವಾರ ಬಾಡಾ ಕ್ರಾಸ್‌ನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಯುವ ಘಟಕದಿಂದ ಹಮ್ಮಿಕೊಂಡಿದ್ದ ಮಾಯಕೊಂಡ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರ ಸನ್ಮಾನ ಸಮಾರಂಭ ಉದ್ಘಾಟಿಸಿ, ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಬರಬೇಕೆಂಬ ಉದ್ದೇಶದಿಂದ ಜನ ಮತ ಚಲಾಯಿಸಿದ್ದರು. ಆದರೆ, ಕೇವಲ 10 ಸೀಟುಗಳು ಕಡಮೆಯಾಗಿದ್ದರಿಂದ ನಾವು ಅಧಿಕಾರದಿಂದ ದೂರ ಇರಬೇಕಾಯಿತು ಎಂದರು.
ಈ ಬಾರಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ಅಸಾಧ್ಯದ ಮಾತು. ಯಾವುದೇ ಶಾಸಕರು ತಮ್ಮ ಪಕ್ಷ ಬಿಟ್ಟು ನಮ್ಮ ಪಕ್ಷಕ್ಕೆ ಬರಲ್ಲ. ಪಕ್ಷಾಂತರ ಕಾಯ್ದೆಯ ಭಯದಿಂದ ಯಾರೂ ಸಹ ತಮ್ಮ ಪಕ್ಷ ಬಿಡಲು ಆಗಲ್ಲ. ಇದೇ ಕಾರಣಕ್ಕೆ ನಾವು ಮುಂದೆ ಮತ್ತೆ ಚುನಾವಣೆ ಎದುರಿಸಿಯೇ ಅಧಿಕಾರಕ್ಕೆ ಬರಬೇಕಿದೆ ಎಂದು ಅವರು ತಿಳಿಸಿದರು.
ಚುನಾವಣೆಗೂ ಮುನ್ನ ಹಾದಿ, ಬೀದಿಯಲ್ಲಿ ಜಗಳ ಮಾಡಿಕೊಂಡಿದ್ದ ಕಾಂಗ್ರೆಸ್, ಜೆಡಿಎಸ್ ಪಕ್ಷದವರು ಚುನಾವಣೆ ನಂತರ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಪ್ಪನಾಣೆಗೂ ಮುಖ್ಯಮಂತ್ರಿ ಆಗಲ್ಲ ಅಂದರೆ, ಕುಮಾರಸ್ವಾಮಿ ಸಹ ಅಪ್ಪನಾಣೆ ಹಾಕಿದ್ದರು. ಆದರೆ, ಚುನಾವಣೆ ನಂತರ ಆಗಿದ್ದೇ ಬೇರೆ. ಕೇವಲ ಅಧಿಕಾರಕ್ಕಾಗಿ ಈ ಮೈತ್ರಿ ಮಾಡಿಕೊಂಡಿದ್ದಾರೆ. ಇದು ರಾಜ್ಯದ ಜನರಿಗೆ ಗೊತ್ತಾಗಿದೆ. ಈಗ ಚುನಾವಣೆ ನಡೆದರೆ ಬಿಜೆಪಿಯ 150 ಸೀಟು ಗೆಲ್ಲಿಸಲು
ರಾಜ್ಯದ ಜನ ಮಾತನಾಡಿಕೊಳ್ಳುತ್ತಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆದರೆ ಇದು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.
ಮುಂದೆ ಪಾಲಿಕೆ, ಲೋಕಸಭೆ ಚುನಾವಣೆ ಬರಲಿದೆ. ನರೇಂದ್ರ ಮೋದಿಯವರು ವಿದೇಶದಲ್ಲೂ ಸಹ ಉತ್ತಮ ಹೆಸರು ಮಾಡುವಂತಹ ಆಡಳಿತ ನೀಡಿದ್ದಾರೆ. ಅವರಿಲ್ಲದೇ ಹೋದರೆ ದೇಶಕ್ಕೆ ರಕ್ಷಣೆ ಇಲ್ಲ ಎಂದು ಜನ ಭಾವಿಸಿದ್ದಾರೆ. ಮುಂದಿನ ಚುನಾವಣೆ ನಂತರ ಮತ್ತೂಮ್ಮೆ ಮೋದಿಯವರನ್ನು ಅಧಿಕಾರಕ್ಕೆ ತರಬೇಕೆಂದು ಮಾತನಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯದ 28 ಸೀಟುಗಳಲ್ಲಿ ಎಲ್ಲಾ ಗೆಲ್ಲಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಎಸ್.ಎ. ರವೀಂದ್ರನಾಥ, ಪ್ರೊ| ಎನ್. ಲಿಂಗಣ್ಣ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮಾಜಿ ಅಧ್ಯಕ್ಷ ಅಣಬೇರು ಜೀವನಮೂರ್ತಿ, ಮುಖಂಡರಾದ ಮಳ್ಳೇಕಟ್ಟೆ ನಾಗರಾಜ, ಮುಕುಂದಪ್ಪ, ಎಚ್.ಕೆ. ಬಸವರಾಜ, ದೇವನಗರಿ ಮನು ಇತರರು ವೇದಿಕೆಯಲ್ಲಿದ್ದರು.
ಬಿಜೆಪಿ ಅಧಿಕಾರಕ್ಕೆ ಬರಬೇಕಿತ್ತು
ರಾಜ್ಯದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ಬಿಜೆಪಿ ಅಧಿಕಾರಕ್ಕೆ ಬರಬೇಕಿತ್ತು. ಆದರೆ, ಇದು ಸಾಧ್ಯವಾಗಿಲ್ಲ. ಚುನಾವಣೆಯಲ್ಲಿ ಕೆಲವರು ನಂಬಿಸಿ, ಮೋಸ ಮಾಡಿದ್ದರ ಫಲವಾಗಿ ಬಿಜೆಪಿ ಅಧಿಕಾರಕ್ಕೆ ಬರಲಾಗಿಲ್ಲ. ಈ ರೀತಿ ನಂಬಿಸಿ, ಮೋಸ ಮಾಡುವವರು ರಾಜಕೀಯಕ್ಕೆ ಬರಬಾರದು. ನಿಸ್ವಾರ್ಥವಾಗಿ ಜನರ ಸೇವೆ ಮಾಡುವವರು ಮಾತ್ರ ರಾಜಕೀಯಕ್ಕೆ ಬರಬೇಕು.
ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.