ಸಸ್ಯ ಸಂಕುಲ ಉಳಿಸಲು ಟ್ಯಾಂಕರ್ ನೀರು!
Team Udayavani, Jun 4, 2018, 3:46 PM IST
ಸಿರುಗುಪ್ಪ: ತಾಲೂಕಿನ ದೇಶನೂರು ಸಮೀಪವಿರುವ ತೋಟಗಾರಿಕೆ ಇಲಾಖೆಗೆ ಸೇರಿದ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆದಿದ್ದ ವಿವಿಧ ಜಾತಿಯ ಮರಗಳು ಮತ್ತು ಸಸಿಗಳು ಕಳೆದ ಮೂರು ತಿಂಗಳಿನಿಂದ ನದಿಯಲ್ಲಿ ನೀರಿಲ್ಲದೆ ಒಣಗುತ್ತಿರುವುದನ್ನು ತಡೆಯಲು ಇಲಾಖೆಯ ಅಧಿಕಾರಿಗಳು
ಟ್ಯಾಂಕರ್ ಮೂಲಕ ಒಂದು ತಿಂಗಳಿನಿಂದ ನೀರು ಪೂರೈಸುತ್ತಿದ್ದರಿಂದ ಮರ ಹಾಗೂ ಸಸಿಗಳು ಹಸಿರಿನಿಂದ ಕಂಗೊಳಿಸುತ್ತಿವೆ.
ತೋಟಗಾರಿಕೆ ಕ್ಷೇತ್ರಕ್ಕೆ ಬೇಕಾದ ನೀರಿನ ಮೂಲ ತುಂಗಭದ್ರಾ ನದಿಯಿಂದ ಬಳಸಿಕೊಂಡು ಮಾವು, ತೆಂಗು, ಸಫೋಟ, ಹಲಸು, ಪೇರಲ, ನೇರಳೆ, ಕರಿಬೇವು, ನಿಂಬೆ, ಮಾವಿನ ಸಸಿ ಸೇರಿದಂತೆ ವಿವಿಧ ಅಲಂಕಾರಿಕ ಸಸಿಗಳು ಮತ್ತು ಗಿಡಗಳನ್ನು ಇಲ್ಲಿ ಬೆಳೆಯಲಾಗಿದೆ.
ಕಳೆದ ಮೂರು ತಿಂಗಳಿನಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಸಂಪೂರ್ಣ ಬತ್ತಿ ಹೋಗಿದ್ದರಿಂದ ಇಲ್ಲಿರುವ ಗಿಡಗಳಿಗೆ ನೀರುಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಗಿಡಗಳು ಮತ್ತು ಸಣ್ಣ ಸಸಿಗಳು ಒಣಗಲು ಆರಂಭಿಸಿದ್ದವು. ಸುಮಾರು 15 ಸಾವಿರ ಸಸಿ ಮತ್ತು ಮರಗಳು ಇಲ್ಲಿದ್ದು, ಬೇಸಿಗೆಯ ಬಿರುಬಿಸಿಲು ಒಂದು ಕಡೆಯಾದರೆ ಮತ್ತೂಂದು ಕಡೆ ನದಿಯಲ್ಲಿ ನೀರು ಬತ್ತಿ ಹೋಗಿತ್ತು. ದಿನದಿಂದ ದಿನಕ್ಕೆ ಗಿಡಗಳು ಮತ್ತು ಸಸಿಗಳು ಒಣಗಲು ಆರಂಭಿಸಿದ್ದವು.
ಹೇಗಾದರೂ ಮಾಡಿ ಬೆಳೆದಿರುವ ಗಿಡ ಮತ್ತು ಬೆಳೆಸಿದ ಸಸಿಗಳನ್ನು ಉಳಿಸಿಕೊಳ್ಳಬೇಕೆನ್ನುವ ಉದ್ದೇಶದಿಂದ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕರು ತಮ್ಮ ಕಚೇರಿಯ ಮೇಲಧಿಕಾರಿಗಳನ್ನು ಸಂಪರ್ಕಿಸಿದರು. ಟ್ಯಾಂಕರ್ ಮೂಲಕ ತೋಟಗಾರಿಕೆ ಕ್ಷೇತ್ರದಲ್ಲಿರುವ ಗಿಡಗಳಿಗೆ ನೀರುಣಿಸಲು ಅನುಮತಿ ಪಡೆದುಕೊಂಡರು.
ಮಳೆಗಾಲ ಆರಂಭವಾಗಿದ್ದರೂ ಈ ಭಾಗದಲ್ಲಿ ಸರಿಯಾದ ಮಳೆಯಾಗಿಲ್ಲ. ತುಂಗಭದ್ರಾ ನದಿಯಲ್ಲಿ ಈಗ ನೀರು ಹರಿಯುತ್ತಿದ್ದರೂ ತೋಟಕ್ಕೆ ನೀರು ಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನದಿ ತೀರದ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಇದರಿಂದ ಇಂದಿಗೂ ಸಮರ್ಪಕವಾಗಿ ನೀರು ಹರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅನಿವಾರ್ಯವಾಗಿ ಟ್ಯಾಂಕರ್ ಮೂಲಕ ನೀರನ್ನು ತಂದು ಗಿಡಗಳಿಗೆ ಹಾಕಲಾಗುತ್ತಿದೆ.
ಇಲ್ಲಿನ ಅಧಿಕಾರಿಗಳ ಕಾಳಜಿಯಿಂದ ಒಣಗುತ್ತಿರುವ ಸಸಿ ಮತ್ತು ಮರಗಳು ಜೀವ ಹಿಡಿದುಕೊಂಡಿವೆ. ಅಧಿಕಾರಿಗಳು ಟ್ಯಾಂಕರ್ ಮೂಲಕ ತೋಟಕ್ಕೆ ನೀರು ಪೂರೈಸುವ ಕ್ರಮ ಕೈಗೊಳ್ಳದೆ ಹೋಗಿದ್ದರೆ ತೋಟದಲ್ಲಿರುವ ಸಸ್ಯ ಸಂಕುಲ ಒಣಗಿ ಹೋಗುತ್ತಿತ್ತು. ಪ್ರತಿನಿತ್ಯ ನಾಲ್ಕರಿಂದ ಐದು ಟ್ಯಾಂಕರ್ ನೀರನ್ನು ಸಸಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ರುಣಿಸಲಾಗುತ್ತಿದೆ. ಗಿಡಗಳಿಗೆ ಸರದಿಯ ಪ್ರಕಾರ ನೀರು ಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.