ಜಲ ವಿದ್ಯುತ್‌ ಯೋಜನೆಗೆ ವಿರೋಧ


Team Udayavani, Jun 4, 2018, 4:19 PM IST

chikk.jpg

ಶಿವಮೊಗ್ಗ: ಶರಾವತಿ ಕಣಿವೆಯಲ್ಲಿ ಬೃಹತ್‌ ಭೂಗತ ಜಲವಿದ್ಯುತ್‌ ಯೋಜನೆ ಸರ್ವೇ ಕಾಮಗಾರಿಗೆ ಅರಣ್ಯ ಇಲಾಖೆ ಅನುಮತಿ ನೀಡಬಾರದೆಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವೃಕ್ಷಲಕ್ಷ ಆಂದೋಲನ ಕರ್ನಾಟಕ ವತಿಯಿಂದ ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಶರಾವತಿ ಕಣಿವೆಯಲ್ಲಿ ಕರ್ನಾಟಕ ಪವರ್‌ ಕಾರ್ಪೋರೇಷನ್‌ ನಿರ್ಮಿಸಲು ಉದ್ದೇಶಿರುವ ಭೂಗತ ಜಲವಿದ್ಯುತ್‌ ಯೋಜನೆಯ ಸಮೀಕ್ಷಾ ಕಾಮಗಾರಿ ಆರಂಭಿಸಲು ತಯಾರಿ ನಡೆದಿದೆ. ಯೋಜನೆ ಜಾರಿಯಾದರೆ ವನ್ಯ ಜೀವಿ, ಪರಿಸರ, ಜನಜೀವನದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು. 

ಯೋಜನೆಗೆ ಅವಕಾಶ ನೀಡಿದಲ್ಲಿ ಶರಾವತಿ ಕಣಿವೆಯ ವನ್ಯಜೀವಿ ಹಾಗೂ ಅರಣ್ಯದ ಮೇಲೆ ನೇರವಾಗಿ ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಭೂಗತ ಜಲವಿದ್ಯುತ್‌ ಯೋಜನೆಯ ಸಮೀಕ್ಷಾ ಕಾಮಗಾರಿಗಾಗಲೀ ಅಥವಾ ಡ್ರಿಲ್ಲಿಂಗ್‌ ಕಾಮಗಾರಿಗಾಗಲೀ ಅವಕಾಶ ಅಥವಾ ಒಪ್ಪಿಗೆ
ನೀಡಬಾರದು ಎಂದು ಒತ್ತಾಯಿಸಿದರು.

ಜೋಗ ಜಲಪಾತದ ಬಳಿ ಪರಿಸರ ವನ್ಯಜೀವಿ ಅರಣ್ಯ ಕಾಯ್ದೆ ಪರವಾನಗಿ ಇಲ್ಲದೇ ಅಣೆಕಟ್ಟು ನಿರ್ಮಾಣ ಮಾಡಬಾರದು. ಸರ್ವಋತು ಜೋಗ ಜಲಪಾತ ಯೋಜನೆ ಕುರಿತಂತೆ ಜನತೆಗೆ ಸರಿಯಾದ ಮಾಹಿತಿ ನೀಡಿಲ್ಲ. ಪ್ರವಾಸೋದ್ಯಮ ಇಲಾಖೆ ಯೋಜನೆ ರೂಪಿಸುವಾಗ ಸ್ಥಳೀಯ ಗ್ರಾಪಂನೊಂದಿಗೆ ಮಾತುಕತೆ ನಡೆಸಿಲ್ಲ.

ಯೋಜನೆ ಉದ್ದೇಶಿತ ಸ್ಥಳದ ಪಕ್ಕದಲ್ಲಿ ಶರಾವತಿ ಅಭಯಾರಣ್ಯವಿದೆ. ನದಿಯ ಎರಡೂ ದಂಡೆಗಳಲ್ಲಿ ಅರಣ್ಯ ಭೂಮಿ ಇದೆ. ಅರಣ್ಯ ಹಾಗೂ ಪರಿಸರ ಪರವಾನಗಿ ಇಲ್ಲದೇ ಯೋಜನೆ ಜಾರಿ ಮಾಡಿದರೆ ಅದು ಅಕ್ರಮವಾಗಿ ನಿರ್ಮಾಣಗೊಳ್ಳುವ ಯೋಜನೆಯಾಗುತ್ತದೆ. ಅಲ್ಲದೆ, ಪರಿಸರಕ್ಕೆ, ವನ್ಯಜೀವಿಗಳಿಗೆ, ಸುತ್ತಮುತ್ತಲಿನ ಜನರಿಗೆ ದುಷ್ಪರಿಣಾಮ ಬೀರಲಿದೆ. ಹೀಗಾಗಿ ಯೋಜನೆ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು. ಪಶ್ಚಿಮಘಟ್ಟ ಕಾರ್ಯಪಡೆ ನಿಕಟಪೂರ್ವ
ಅಧ್ಯಕ್ಷ ಹಾಗೂ ವೃಕ್ಷಲಕ್ಷ ಆಂದೋಲನ ಅಧ್ಯಕ್ಷ ಅನಂತ ಹೆಗಡೆ ಆಶೀಸರ, ಪರಿಸರ ಚಿಂತಕ ಪ್ರೊ| ಬಿ.ಎಂ. ಕುಮಾರಸ್ವಾಮಿ ಮತ್ತಿತರರಿದ್ದರು. 

ಡೀಮ್ಡ್ ಅರಣ್ಯ ರಕ್ಷಣೆಗೆ ಒತ್ತಾಯ ಜಿಲ್ಲೆಯ ಕಾನು ಅರಣ್ಯ, ಡೀಮ್ಡ್ ಅರಣ್ಯ, ರೆವೆನ್ಯೂ ಅರಣ್ಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರೆವೆನ್ಯೂ ಹಾಗೂ ಅರಣ್ಯ ಅಧಿಕಾರಿಗಳ ಸಭೆ ಏರ್ಪಡಿಸಬೇಕು ಎಂದು ವೃಕ್ಷಲಕ್ಷ ಆಂದೋಲನ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಒತ್ತಾಯಿಸಿದರು. ಕಾನುಗಳ ಹೊಸ
ಅತಿಕ್ರಮಣ ತಡೆಯುವುದು, ಅತಿಕ್ರಮಣ ಆಗದೇ ಉಳಿದಿರುವ ಡೀಮ್ಡ್ ಅರಣ ರಕ್ಷಣೆಗೆ ನಾಮಫಲಕ, ಕಂದಕ ನಿರ್ಮಾಣ, ವನೀಕರಣ ಯೋಜನೆ ಜಾರಿಗೊಳಿಸಿದಲ್ಲಿ ಜಿಲ್ಲೆಯ ಒಂದು ಲಕ್ಷ ಎಕರೆ ಡೀಮ್ಡ್ ಅರಣ್ಯ ಉಳಿಸಲು ಸಾಧ್ಯವಾಗುತ್ತದೆ ಎಂದರು. ಜಾಗತಿಕ ಪರಿಸರ ದಿನವಾದ ಜೂ. 5 ರಂದು ಜಿಲ್ಲೆಯ ಕಾನು ಇತ್ಯಾದಿ ಡೀಮ್ಡ್ ಅರಣ್ಯ ರಕ್ಷಿಸುವ ವಿಶೇಷ ಅಭಿಯಾನವನ್ನು ಜಿಲ್ಲಾಡಳಿತ ಆರಂಭಿಸಬೇಕು ಎಂದು ಮನವಿ ಮಾಡಿದರು.

ಪರಿಸರ ದಿನಾಚರಣೆ ಅಂಗವಾಗಿ ಕಾನು ಉಳಿಸಿ ಹೋರಾಟ ಸಮಿತಿ ವತಿಯಿಂದ ಜೂ.5 ರಂದು ಸಾಗರ ತಾಲ್ಲೂಕು ನಾರಗೊಡು ಗ್ರಾಮದ ಕೊಪ್ಪದ ಕಾನುವಿನಲ್ಲಿ ವೃಕ್ಷಾರೋಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನಂತ ಹೆಗಡೆ ಆಶೀಸರ

ಟಾಪ್ ನ್ಯೂಸ್

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.