ಕಾಂಗ್ರೆಸ್‌ನಿಂದ ಮಾದಿಗ ಸಮಾಜಕ್ಕೆ  ಅನ್ಯಾಯ: ಕಾರಜೋಳ 


Team Udayavani, Jun 4, 2018, 5:31 PM IST

4june-25.jpg

ಇಳಕಲ್ಲ: ಮಾದಿಗ ಸಮಾಜ ಶರಣ ಸಂಸ್ಕೃತಿಯಿಂದ ಬಂದಂತಹ ಸಮಾಜ. ಅಣ್ಣ ಬಸವಣ್ಣನವರ ಅತ್ಯಂತ ಆತ್ಮೀಯತೆಯಿಂದ ಅಪ್ಪ ಎಂದು ಕರೆದಿದ್ದು ನಮ್ಮ ಸಮಾಜದ ಮಾದಾರ ಚನ್ನಯ್ಯನವರನ್ನು ಮಾತ್ರ ಎನ್ನುವುದು ನಾವೆಲ್ಲರೂ ಹೆಮ್ಮೆಪಡುವ ಸಂಗತಿಯಾಗಿದೆ ಎಂದು ವಿರೋಧ ಪಕ್ಷದ ಉಪನಾಯಕ, ಮುಧೋಳ ಶಾಸಕ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಮಾದಿಗ ಸಮಾಜದ ವತಿಯಿಂದ ಜಿಲ್ಲೆಯಲ್ಲಿ ಆಯ್ಕೆಯಾದ ಹಾಗೂ ಇಳಕಲ್ಲ ನಗರದವರೇ ಆದ ಲಿಂಗಸುಗೂರು ಶಾಸಕರಿಗೆ ಹಮ್ಮಿಕೊಳ್ಳಲಾದ ಸತ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶವನ್ನು ಸುಮಾರು 60 ವರ್ಷಗಳ ಕಾಲ ಆಳಿದ ಕಾಂಗ್ರೆಸ್‌ ಪಕ್ಷದಿಂದ ಸಮುದಾಯಕ್ಕೆ ಆದಷ್ಟು ಅನ್ಯಾಯ ಬೇರಾವ ಪಕ್ಷಗಳಿಂದಲೂ ಆಗಿಲ್ಲ, ಸಮಾಜದ ಡಾ. ಬಾಬು ಜಗಜೀವನರಾಂ ಅವರನ್ನು ಈ ದೇಶದ ಪ್ರಧಾನ ಮಂತ್ರಿಗಳನ್ನಾಗಿ ಮಾಡಬೇಕು ಎಂಬ ಮಹತ್ತರ ಕನಸು ಅಟಲಜೀ ವಾಜಪೇಯ ಅವರಿಗಿತ್ತು. ಆದರೆ ಇಂದಿರಾ ಗಾಂಧಿ, ರಾಜೀವ ಗಾಂಧಿಯವರು ಇದಕ್ಕೆ ಅವಕಾಶ ಕೊಡದೆ ಅನ್ಯಾಯವೆಸಗಿದರು. ಕೇವಲ 6ಜಾತಿಗಳಿಗೆ ಮಾತ್ರ ಮೀಸಲಾತಿಯಿದ್ದ ವ್ಯವಸ್ಥೆಯನ್ನು ತಮ್ಮ ವೋಟ್‌ ಬ್ಯಾಂಕ್‌ ಆಸೆಗೆ ಇಂದು 100 ಜಾತಿಗೆ ವಿಸ್ತರಿಸಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಚುನಾವಣೆಯಲ್ಲಿ ಬಿಜೆಪಿ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ನಾವು ನಿರೀಕ್ಷಿಸದಷ್ಟು ಫಲಿತಾಂಶ ಬರಲಿಲ್ಲ. ಇದರಿಂದಾಗಿ ನಾವು ಆಡಳಿತದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಲಿಲ್ಲವಾದರೂ ನಿರಾಶೆಪಡುವ ಅವಶ್ಯಕತೆ ಇಲ್ಲ. ಇನ್ನು ಕೆಲವೇ ದಿನಗಳಲ್ಲಿ ನಮ್ಮ ಪಕ್ಷ ಅಧಿ ಕಾರಕ್ಕೆ ಬಂದೆ ಬರುತ್ತೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗುತ್ತಾರೆ. ಹುನಗುಂದ ಮತಕ್ಷೇತ್ರದಿಂದ ದೊಡ್ಡನಗೌಡ ಪಾಟೀಲರಂಥ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಿರಿ. ಮುಂಬರುವ ಜಿಪಂ ಚುನಾವಣೆಯಲ್ಲಿ ನಮ್ಮ ಸಮುದಾಯದ ವ್ಯಕ್ತಿ ಜಿಪಂ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಜವಾಬ್ದಾರಿ ದೊಡ್ಡನಗೌಡ ಪಾಟೀಲರದು ಎಂದು ಹೇಳಿದರು.

ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಹಿಂದಿನ ಚುನಾವಣೆಯಲ್ಲಿ ಹಿರಿಯರ ಗೊಂದಲದ ನಡವಳಿಕೆಯಿಂದಾಗಿ ನಾವು ಸೋತಿದ್ದೇವೆ ಹೊರತು ಮತದಾರರು ನಮ್ಮನ್ನು ಸೋಲಿಸಲಿಲ್ಲ. ಐವರು ಶಾಸಕರು ಜಿಲ್ಲೆಯ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತೇವೆ. ಕಾರಜೋಳ ಅವರ ಮಾರ್ಗದರ್ಶನದಲ್ಲಿ ನೀವೆಲ್ಲರೂ ನಡೆದುಕೊಂಡರೆ ಸಾಕು ನಿಮ್ಮ ಸಮುದಾಯದ ಅಭಿವೃದ್ಧಿ ಖಂಡಿತವಾಗಿಯೂ ಆಗುತ್ತದೆ ಎಂದರು.

ದೊಡ್ಡನಗೌಡ ಪಾಟೀಲ ಮಾತನಾಡಿ, ಹಿಂದಿನ ಒಂಬತ್ತು ವರ್ಷದ ಅವಧಿ ಯ ನನ್ನ ಅಭಿವೃದ್ಧಿ ಕಾರ್ಯಗಳನ್ನು ಹಿರಿಯರಾದ ಗೋವಿಂದ ಕಾರಜೋಳ ಅವರ ಮಾರ್ಗದರ್ಶನದಲ್ಲೇ ಮಾಡಿದ್ದೇನೆ. ಮುಂಬರುವ ದಿನಗಳಲ್ಲೂ ಇಂತಹ ಹಿರಿಯರ ಮಾರ್ಗದರ್ಶನದಲ್ಲೇ ಕಾರ್ಯ ನಿರ್ವಹಿಸುತ್ತೇನೆ. ಈಗ ನಡೆಯುತ್ತಿರುವ ಸತ್ಕಾರ ನನಗಲ್ಲ, ಅದು ನಿಮಗೆ ಸಲ್ಲಬೇಕು ಎಂದು ಹೇಳಿದರು.

ಇದೇ ವೇಳೆ ಶಾಸಕರಾದ ವೀರಣ್ಣ ಚರಂತಿಮಠ, ಗೋವಿಂದ ಕಾರಜೋಳ, ದೊಡ್ಡನಗೌಡ ಪಾಟೀಲ ಹಾಗೂ ಡಿ.ಎಸ್‌. ಹೂಲಗೇರಿ ಅವರನ್ನು ಮಾದಿಗ ಸಮಾಜದ ವತಿಯಿಂದ ಗೌರವಿಸಿ ಸತ್ಕರಿಸಲಾಯಿತು. ಬಿಜೆಪಿ ರಾಜ್ಯಘಟಕದ ಕಾರ್ಯದರ್ಶಿ ಆರ್‌.ಟಿ. ಪಾಟೀಲ, ನಗರಸಭೆ ಸದಸ್ಯರಾದ ಶೋಭಾ ಆಮದಿಹಾಳ, ಮಂಜುನಾಥ ಹೊಸಮನಿ, ಮುಖಂಡರಾದ ಮೋಹನ ಹೊಸಮನಿ, ಲಕ್ಷ್ಮಣ ಚಂದರಗಿ, ಶ್ರೀಕಾಂತ ಹೊಸಮನಿ ಹಾಜರಿದ್ದರು. ಸಹನಾ ಸಾಕಾ ಪ್ರಾರ್ಥಿಸಿದರು. ಮಂಜುನಾಥ ಮಾದಾರ ಸ್ವಾಗತಿಸಿದರು. ಸಂಗಣ್ಣ ಗದ್ದಿ ನಿರೂಪಿಸಿದರು .

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.