ನಾನು ಏಕಾಂಗಿಯಲ್ಲ:ಡಿಕೆಶಿ
Team Udayavani, Jun 5, 2018, 6:30 AM IST
ಬೆಂಗಳೂರು:ನಾನು ಪಕ್ಷದಲ್ಲಿ ಯಾವತ್ತೂ ಏಕಾಂಗಿಯಲ್ಲ. ಅದು ನನ್ನ ಜಾಯಮಾನವಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಪುಟದಲ್ಲಿ ಇರಬೇಕೋ ಅಥವಾ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಬೇಕೊ ಎನ್ನುವುದನ್ನು ಪಕ್ಷ ತೀರ್ಮಾನ ಮಾಡಲಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿದ್ದೆ. ಅದಕ್ಕೆ ನಾನು ಕಾಣುತ್ತಿಲ್ಲ ಎನ್ನುವುದು ಸರಿಯಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ಯಾಕೆ ರಾಜಿನಾಮೆ ನೀಡಿದರು ಎನ್ನುವುದು ಗೊತ್ತಿಲ್ಲ. ಅವರು ಪ್ರಮುಖ ನಾಯಕರು. ದಕ್ಷಿಣ ಕರ್ನಾಟಕ ಭಾಗದಲ್ಲಿ ಒಕ್ಕಲಿಗರು ಉತ್ತರ ಕರ್ನಾಟಕ ಭಾಗದಲ್ಲಿ ವೀರಶೈವ ಸಮುದಾಯ ಇದೆ. ಚುನಾವಣೆಯಲ್ಲಿ ನಮಗೆ ಮತ ಹಾಕಿದ ಜನ ರಾಜ್ಯದಲ್ಲಿದ್ದಾರೆ. ಎಲ್ಲರ ಬಗ್ಗೆ ಹೈ ಕಮಾಂಡ್ ಯೋಚನೆ ಮಾಡಲಿದೆ ಎಂದರು.
ಸಂಪುಟ ವಿಸ್ತರಣೆ ವೇಳೆ ವೀರಶೈವರನ್ನು ಕಡೆಗಣಿಸಲು ಸಾಧ್ಯವಿಲ್ಲ. ಮೇಲ್ವರ್ಗದವರ ನಿರ್ಲಕ್ಷದಿಂದ ನಮಗೆ ಹಿನ್ನೆಡೆಯಾಗಿದೆ ಎಂಬ ಭಾವನೆ ಇದೆ. ಅದು ಪರೋಕ್ಷವಾಗಿ ಎಚ್ಚರಿಕೆಯೂ ಹೌದು ಎಂದು ಹೇಳಿದರು. ಇನ್ನು ಇಂಧನ ಇಲಾಖೆಯ ಬಗ್ಗೆ ಕುಮಾರಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.