ಅಕ್ರಮ ಆಹಾರ ಘಟಕ ಮೇಲೆ ದಾಳಿ
Team Udayavani, Jun 5, 2018, 11:06 AM IST
ಬೀದರ: ತಾಲೂಕಿನ ಗುನ್ನಳ್ಳಿ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಆಹಾರ ತಯಾರಿಕಾ ಘಟಕದ ಮೇಲೆ ದಾಳಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಾಳಿನಡೆಸಿ, ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಘಟಕವನ್ನು ಸೀಲ್ ಮಾಡಿದ್ದಾರೆ.
ಜಿಲ್ಲಾ ಅಂಕಿತ ಅಧಿಕಾರಿ ಡಾ| ಶಿವಶಂಕರ ಬಿ. ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಘಟಕದಲ್ಲಿ ಆಕಾಶ ಹೆಸರಿನ ಸೋನ್ ಪಾಪಡಿ ತಯಾರಿಸಲಾಗುತ್ತಿದೆ. ಆದರೆ, ಪ್ಯಾಕೇಜ್ ಗಳ ಮೇಲೆ ಹೈದ್ರಾಬಾದ್‌ನ ವಿಳಾಸ ನಮೂದಿಸಿರುವುದು ಕಂಡುಬಂದಿದೆ. ಇದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ 52 ನೇ ವಿಧಿಪ್ರಕಾರ ಮಿಸ್ ಬ್ರಾಂಡ್ ಎಂದು ಪರಿಗಣಿಸಬಹುದು ಮತ್ತು 3 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ.
ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಿಬ್ಬಂದಿಯ ವೈದ್ಯಕೀಯ ತಪಾಸಣೆ ಮಾಡಿಸದಿರುವುದು ದಾಳಿ ವೇಳೆ ಕಂಡುಬಂದಿದೆ. ಆದ್ದರಿಂದ ಘಟಕದವರಿಗೆ ನೋಟಿಸ್ ನೀಡಿ ಘಟಕಕ್ಕೆ ಬೀಗ ಹಾಕಲಾಗಿದೆ.
ಕಾರ್ಯಾಚರಣೆಯಲ್ಲಿ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳಾದ ಡಾ| ಪ್ರವೀಣ ಹೂಗಾರ, ರಮೇಶ ಬಿಕ್ಲೆ, ಪ್ರವೀಣಕುಮಾರ ಡಿ.ಎಂ., ಅಜಯ ಪಾಟೀಲ, ಇಸಾಕ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.