ನೂತನ ನ್ಯಾಯಮೂರ್ತಿಗಳಿಗೆ ವಕೀಲರ ಸಂಘದಿಂದ ಸ್ವಾಗತ
Team Udayavani, Jun 5, 2018, 11:50 AM IST
ಬೆಂಗಳೂರು: ರಾಜ್ಯದ ನ್ಯಾಯಾಂಗ ವ್ಯವಸ್ಥೆಯನ್ನು ದೇಶಕ್ಕೆ ಮಾದರಿಯನ್ನಾಗಿ ಮಾಡುವ ಅಭಿಲಾಷೆಯಿದೆ ಎಂದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹೇಳಿದ್ದಾರೆ.
ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ನ್ಯಾ. ಮೊಹಮದ್ ನವಾಜ್ ಹಾಗೂ ಎಚ್.ಟಿ.ನರೇಂದ್ರಪ್ರಸಾದ್ ಅವರಿಗೆ ಸೋಮವಾರ ಬೆಂಗಳೂರು ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.
ನ್ಯಾ.ಮೊಹಮದ್ ನವಾಜ್ ಮಾತನಾಡಿ, ಕಳೆದ 28 ವರ್ಷಗಳಿಂದ ಹೈಕೋರ್ಟ್ ನನಗೆ ಮೊದಲ ಮನೆಯಾಗಿತ್ತು. ವಕೀಲಿಕೆ ಆರಂಭದಲ್ಲಿ ಕೋರ್ಟ್ ಹಾಲ್ನಲ್ಲಿ ಕುಳಿತು ಕಲಾಪಗಳನ್ನು ವೀಕ್ಷಿಸುತ್ತಿದೆ. ಹಿರಿಯ ವಕೀಲರ ವಾದ-ಪ್ರತಿವಾದ ಕೇಳುತ್ತಾ ಎಲ್ಲರ ಸಹಕಾರದೊಂದಿಗೆ ಯಶಸ್ವಿ ವಕೀಲನಾದೆ.
ಇದೀಗ ಇದೇ ಕೋರ್ಟ್ಗೆ ನ್ಯಾಯಮೂರ್ತಿಯಾಗಿರುವುದು ಮರೆಯಲಾರದ ಅನುಭವ ಎಂದರು. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಉಪಾಧ್ಯಕ್ಷ ಆರ್.ಜಿ.ಹಾಲೇಶ್, ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.