ಐದು ಲಕ್ಷ ಯುವಕರಿಗೆ ಉದ್ಯೋಗ


Team Udayavani, Jun 5, 2018, 11:52 AM IST

5laksha.jpg

ಬೆಂಗಳೂರು: “ರಾಜ್ಯದ ಐದು ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದು ನನ್ನ ಗುರಿ. ಅದಕ್ಕೆ ಪೂರಕವಾಗಿ ಕೌಶಲ್ಯ ವಿವಿ ಸ್ಥಾಪಿಸಲು ಉದ್ದೇಶಿಸಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ದಿ. ನ್ಯಾಷನಲ್‌ ಎಜುಕೇಷನ್‌ ಸೊಸೈಟಿ ಆಫ್ ಕರ್ನಾಟಕ ಸ್ಥಾಪಿತ ಜಯನಗರದ ನ್ಯಾಷನಲ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಕನಸಿನ ಯೋಜನೆ ಮತ್ತು ಕಾರ್ಯಕ್ರಮಗಳ ವಿವರಗಳನ್ನು ಹಂಚಿಕೊಂಡರು. ಕಾಲೇಜಿನ ಹಳೆಯ ವಿದ್ಯಾರ್ಥಿ ಎಂಬ ಕಾರಣಕ್ಕೆ ಕುಮಾರಸ್ವಾಮಿಯವರಿಗೆ ಈ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ 65 ವರ್ಷ ದಾಟಿದ ಹಿರಿಯ ನಾಗರೀಕರಿಗೆ ಪಿಂಚಣಿ ಯೋಜನೆ ಜಾರಿಗೆ ತರುತ್ತೇನೆ. ಅದನ್ನು ಬಜೆಟ್‌ನಲ್ಲಿ ಘೋಷಣೆ ಮಾಡುತ್ತೆನೆ. ತರಕಾರಿ ಸೇರಿದಂತೆ ಬೀದಿ ಬದಿ ಸಣ್ಣ ಪುಟ್ಟ ವ್ಯಾಪಾರ ಮಾಡುವವರಿಗೆ ತಕ್ಷಣ ಆರ್ಥಿಕ ನೆರವು ನೀಡಲು ಮೊಬೈಲ್‌ ಬ್ಯಾಂಕಿಂಗ್‌ ವ್ಯವಸ್ಥೆ ತರಬೇಕು ಎಂದು ಆಲೋಚಿಸಿದ್ದೇನೆ.

ವ್ಯಾಪಾರಿಗಳು ತಮ್ಮ ಆಧಾರ ಕಾರ್ಡ್‌ ಕೊಟ್ಟು ಹಣ ಪಡೆದುಕೊಂಡು ವ್ಯಾಪಾರ ಮಾಡಿ ಸಂಜೆ ಹಣ ವಾಪಸ್‌ ಕೊಟ್ಟು ಆಧಾರ್‌ ಕಾರ್ಡ್‌ ತೆಗೆದುಕೊಂಡು ಹೋಗಬೇಕು. ಇದರಿಂದ ಬಡ್ಡಿ ವ್ಯವಹಾರಕ್ಕೆ ಕಡಿವಾಣ ಬೀಳುತ್ತದೆ ಎಂದರು. ಕಳೆದ 10 ವರ್ಷಗಳಲ್ಲಿ ಆಡಳಿತ ಯಂತ್ರ ಕುಸಿದಿದೆ. ಅದರಲ್ಲಿ ಬದಲಾವಣೆ ತರಬೇಕಿದೆ. ಅದೇ ರೀತಿ ಕಳೆದ ಹತ್ತು ವರ್ಷಗಳಲ್ಲಿ ಶಿಕ್ಷಕ ನೇಮಕಾತಿ ಆಗಿಲ್ಲ.

23 ಸಾವಿರ ಶಿಕ್ಷಕ ಕೊರತೆ ಇದೆ. ಕಟ್ಟಡಗಳನ್ನು ಕಟ್ಟಲಾಗಿದೆ. ಆದರೆ, ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ಸರ್ಕಾರಗಳು ಎಡವಿದ್ದಾವೆ. ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ಏರಿಸಬೇಕು. 1ನೇ ತರಗತಿಯಿಂದ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಸಿಗಬೇಕು ಅನ್ನುವುದು ನನ್ನ ಆದ್ಯತೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ. ರೈತರ ರಕ್ಷಣೆ ಅಷ್ಟೇ ಅಲ್ಲ.

ಇನ್ನೂ ಅನೇಕ ವಿಷಯಗಳ ಬಗ್ಗೆ ಗಮನ ಕೊಡಬೇಕಿದೆ. ತೆರಿಗೆ ಹಣದ ಒಂದೊಂದು ಪೈಸೆಯೂ ಸದ್ಬಳಕೆ ಆಗಬೇಕು. ಒಂದು ಕ್ಷಣವೂ ವ್ಯರ್ಥ ಮಾಡದೇ ನಾನು ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಈ ವೇಳೆ ದಿ. ನ್ಯಾಷನಲ್‌ ಎಕುಕೇಷನ್‌ ಸೊಸೈಟಿ ಆಫ್ ಕರ್ನಾಟಕ ಇದರ ಅಧ್ಯಕ್ಷ ಡಾ. ಎ.ಎಚ್‌. ರಾಮರಾವ್‌, ಕಾರ್ಯದರ್ಶಿ ಪ್ರೊ. ಎನ್‌.ಎಸ್‌. ನಾಗರಾಜ ರೆಡ್ಡಿ, ಐಪಿಎಸ್‌ ಅಧಿಕಾರಿ ಭಾಸ್ಕರ್‌ರಾವ್‌ ಮತ್ತಿತರರು ಇದ್ದರು.

ಪ್ರಶ್ನೆಗೆ ಹೆದರಿ ಕೊನೇ ಬೆಂಚಲ್ಲಿ ಕೂರ್ತಿದ್ದೆ!: ಇದೇ ವೇಳೆ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡ ಕುಮಾರಸ್ವಾಮಿ, ಎಚ್‌. ನರಸಿಂಹಯ್ಯ ಅವರ ಪರಿಶ್ರಮದ ಫ‌ಲವಾಗಿರುವ ಈ ಕಾಲೇಜಿನಲ್ಲಿ ನನಗೆ ಸೀಟು ಸಿಕ್ಕದ್ದೇ ಪುಣ್ಯ. ಅವರಿಗೆ ಗೌರವ ತರುವ ಕೆಲಸ ಮಾಡುತ್ತೇನೆ. ಮೇಷ್ಟ್ರು ಎಲ್ಲಿ ಪ್ರಶ್ನೆ ಕೇಳ್ತಾರೊ ಎಂದು ಹೆದರಿ ಲಾಸ್ಟ್‌ ಬೆಂಚ್‌ನಲ್ಲಿ ಕೂರುತ್ತಿದೆ. ಆ ದಿನಗಳಲ್ಲಿ ಕಷ್ಟ ಪಟ್ಟು ಓದಿದ್ದರೆ ಐಎಎಸ್‌ ಆಫಿಸರೋ ಮತ್ತೇನೂ ಆಗುತ್ತಿದೆ.

ಆದರೆ, ಓದದೇ ಇದ್ದಿದ್ದಕ್ಕೆ ಅನುಕೂಲ ಆಯಿತೇನೂ ಎಂದು ಈಗ ಅನಿಸುತ್ತಿದೆ. ಕಾಲೇಜು ದಿನಗಳಲ್ಲಿ ಹುಡುಗಾಟಿಕೆ ಸಹಜ. ಆದರೆ, ಬರೀ ಹುಡುಕಾಟಿಗೆ ಮಾಡಿದರೆ ಜನ್ಮ ಕೊಟ್ಟ ತಂದೆ ತಾಯಿಗೆ ಮೋಸ ಮಾಡಿದಂತೆ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇರುತ್ತದೆ. ಪರಿಶ್ರಮದ ಮೂಲಕ ಅದನ್ನು ಸಾಬೀತುಪಡಿಸಬೇಕು. ದೇವರು ಮತ್ತು ಗುರುಗಳ ಬಗ್ಗೆ ಶ್ರದ್ಧೆ ಮತ್ತು ಭಕ್ತಿ ಇಟ್ಟುಕೊಳ್ಳಬೇಕು ಎಂದು ಇದೇ ವೇಳೆ ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.