ಪ್ರಾಕೃತಿಕ ಸಂಪನ್ಮೂಲ ಅತಿ ಬಳಕೆಯಿಂದ ಪರಿಸರ ನಾಶ
Team Udayavani, Jun 6, 2018, 6:00 AM IST
ಉಡುಪಿ: ಕೈಗಾರಿಕೀಕರಣ ಹೆಚ್ಚಿದಂತೆ ಪ್ರಾಕೃತಿಕ ಸಂಪನ್ಮೂಲಗಳನ್ನು ಮನುಷ್ಯ ಅತಿಯಾಗಿ ಬಳಸಿಕೊಳ್ಳುತ್ತಿದ್ದಾನೆ. ಇದರಿಂದ ಪರಿಸರ ನಾಶವಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ಅವರು ಖೇದ ವ್ಯಕ್ತಪಡಿಸಿದರು.
ಮಣಿಪಾಲದ ಸಾಲುಮರದ ತಿಮ್ಮಕ್ಕ ಹೆಸರಿನ ಅರಣ್ಯ ಪಾರ್ಕ್‌ನಲ್ಲಿ ಅರಣ್ಯ ಇಲಾಖೆ, ನಗರಸಭೆ ಸಹಭಾಗಿತ್ವದಲ್ಲಿ ಉಡುಪಿ ಪ್ರಸ್‌ಕ್ಲಬ್ ವತಿಯಿಂದ ಮಂಗಳವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು. ಯುರೋಪ್, ರಷ್ಯಾ, ಫ್ರಾನ್ಸ್, ಜರ್ಮನಿ ದೇಶಗಳಲ್ಲಿ ಕೈಗಾರಿಕಾ ಕ್ರಾಂತಿಯಾಗಿದ್ದು, ತಂತ್ರಜ್ಞಾನಕ್ಕೆ ಹೆಚ್ಚಿನ ಪ್ರಾಧಾನ್ಯ ಕೊಟ್ಟಿದ್ದರೂ, ಪರಿಸರ ಸಂರಕ್ಷಣೆಗೆ ಒತ್ತು ಕೊಡುತ್ತಿದ್ದಾರೆ. ನಾರ್ವೆ, ನ್ಯೂಜಿಲ್ಯಾಂಡ್‌ನಲ್ಲಿ ಪರಿಸರ ಕಾಳಜಿ ಹೆಚ್ಚಿದೆ. ಪರಿಸರ ಸಂರಕ್ಷಣೆ ಎನ್ನುವುದು ಕೇವಲ ಅರಣ್ಯ ಇಲಾಖೆಯವರ ಜವಾಬ್ದಾರಿಯಲ್ಲ. ಅದು ನಮ್ಮೆಲ್ಲರ ಜೀವನದಲ್ಲಿ ಅಳವಡಿಕೆಯಾಗಬೇಕು ಎಂದು ಎಸ್‌ಪಿ ತಿಳಿಸಿದರು.
ಸಮತೋಲನಕ್ಕೆ ಅರಣ್ಯ ಹೆಚ್ಚಬೇಕು
ಉಡುಪಿ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೊ ಮಾತನಾಡಿ ಶೇ. 33ರಷ್ಟು ಅರಣ್ಯ ಪ್ರದೇಶ ಇರಲೇಬೇಕು. ಆದರೆ ನಮ್ಮಲ್ಲಿ ಕೇವಲ ಶೇ. 21.5 ಮಾತ್ರ ಇದೆ. ಅರಣ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಹಾಗಾದರೆ ಮಾತ್ರ ಪ್ರಾಕೃತಿಕ ಸಮತೋಲನ ಸಾಧ್ಯ ಎಂದರು.
ವಾರ್ತಾಧಿಕಾರಿ ರೋಹಿಣಿ ಕೆ., ಸಂಘದ ಪ್ರ. ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಕೋಶಾಧಿಕಾರಿ ದಿವಾಕರ್ ಭಂಡಾರಿ, ಜತೆ ಕಾರ್ಯದರ್ಶಿ ಮೈಕಲ್ ಉಪಸ್ಥಿತರಿದ್ದರು. ಸಂಘದ ಮಾಜಿ ಅಧ್ಯಕ್ಷ ಕಿರಣ ಮಂಜನಬೈಲು ಸ್ವಾಗತಿಸಿ, ಪ್ರಸ್ ಕ್ಲಬ್ ಸಂಚಾಲಕ ನಾಗರಾಜ ರಾವ್ ವರ್ಕಾಡಿ ನಿರೂಪಿಸಿ, ಸುಭಾಷ್‌ಚಂದ್ರ ವಾಗ್ಲೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.