ಹಾಸ್ಟೆಲ್ ಅಡುಗೆ, ಸಹಾಯಕರ ನೇಮಕಾತಿಗೆ ಹೈಕೋರ್ಟ್ ಅಸ್ತು
Team Udayavani, Jun 6, 2018, 6:00 AM IST
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳ ಅಡುಗೆ ತಯಾರಕರು ಹಾಗೂ ಸಹಾಯಕರ ನೇಮಕಾತಿ ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡುವಂತೆ ಆದೇಶಿಸಿದೆ.
ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಮಂಗಳವಾರ ನಡೆಯಿತು. ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಆದರೆ, ನೇಮಕಾತಿ ಆದೇಶ ಈ ಮೇಲ್ಮನವಿಯ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದು ತಿಳಿಸಿದೆ. ಅಲ್ಲದೆ, ಈ ಕುರಿತು ನೇಮಕಾತಿ ಪತ್ರದಲ್ಲಿಯೂ ಉಲ್ಲೇಖೀಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ವಿಭಾಗೀಯ ಪೀಠದ ಈ ಆದೇಶದಿಂದ ನೇಮಕಾತಿ ಆದೇಶದಿಂದ ವಂಚಿತವಾಗಿದ್ದ 4,017 ಮಂದಿ ನಿಟ್ಟುಸಿರು ಬಿಡುವಂತಾಗಿದೆ.
ಅಡುಗೆ ಸಿಬ್ಬಂದಿ ಹಾಗೂ ಸಹಾಯಕರಿಗೆ 10ನೇ ತರಗತಿ ವಿದ್ಯಾರ್ಹತೆ ನಿಗದಿಪಡಿಸಿ 4,017 ಡಿ ಗ್ರೂಪ್ ಹುದ್ದೆಗಳಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಚಾಮರಾಜನಗರ ಜಿಲ್ಲೆಯ ರತ್ನಮ್ಮ ಎಂಬುವರು ಸೇರಿ 53 ಮಂದಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್ಶೀಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.