ಬಿಟ್ಕಾಯಿನ್ ದಂಧೆ:ಹೊಸ ಜಾಲ ಪತ್ತೆ ;ಶಿಲ್ಪಾ ಶೆಟ್ಟಿ ಪತಿ ವಿಚಾರಣೆ
Team Udayavani, Jun 6, 2018, 4:50 AM IST
ಮುಂಬಯಿ/ಥಾಣೆ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ನಿಷೇಧಿತ ಬಿಟ್ ಕಾಯಿನ್ ಅವ್ಯವಹಾರ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಕುಂದ್ರಾರನ್ನು ವಿಚಾರಣೆ ನಡೆಸಿದೆ.
ಇತ್ತೀಚೆಗಷ್ಟೇ ಬಿಟ್ ಕಾಯಿನ್ ಆಧಾರಿತ ಹೂಡಿಕೆ ವೆಬ್ ಸೈಟ್ ‘ಗೈನ್ ಬಿಟ್ ಕಾಯಿನ್’ನ ಸ್ಥಾಪಕ ಅಮಿತ್ ಭಾರದ್ವಾಜ್ ಹಾಗೂ ಇತರ 8 ಮಂದಿ ವಿರುದ್ಧ ಕೇಸು ದಾಖಲಿಸಲಾಗಿತ್ತು. ಈ ಯೋಜನೆಯಲ್ಲಿ ಹೂಡಿಕೆ ಮಾಡಿರುವ 8,000 ಮಂದಿ ಸುಮಾರು 2 ಸಾವಿರ ಕೋಟಿ ರೂ. ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾರಿಗೆ ನಂಟಿರುವ ಅನುಮಾನದಲ್ಲಿ ಅವರನ್ನು ವಿಚಾರಣೆಗೊಳಪಡಿಸಿ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಇ.ಡಿ. ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ನಟಿಯರಾದ ಶಿಲ್ಪಾ ಶೆಟ್ಟಿ, ಸನ್ನಿ ಲಿಯೋನ್, ನೇಹಾ ದೂಫಿಯಾರನ್ನೂ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
500 ಕೋಟಿ ಮೌಲ್ಯದ ಹೊಸ ಜಾಲ ಪತ್ತೆ
ಮಹಾರಾಷ್ಟ್ರದ ಥಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ 500 ಕೋಟಿ ರೂ. ಮೌಲ್ಯದ ಬಿಟ್ ಕಾಯಿನ್ ವಹಿವಾಟಿನ ಹೊಸ ಜಾಲವನ್ನು ಬಯಲಿಗೆ ಎಳೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.
‘ಮನಿ ಟ್ರೇಡ್ ಕಾಯಿನ್’ ಎಂಬ ಸಂಸ್ಥೆಯನ್ನು ವರ್ಷದ ಹಿಂದೆ ಸ್ಥಾಪಿಸಲಾಗಿತ್ತು. ಉತ್ತಮ ಲಾಭದ ಆಮಿಷ ತೋರಿಸಿ ಹಲವಾರು ಮಂದಿಯನ್ನು ಹೂಡಿಕೆ ಮಾಡುವಂತೆ ಪ್ರಚೋದಿಸಲಾಗಿತ್ತು. ಆರೋಪಿಗಳು ಹೀಗೆ ಒಟ್ಟು 500 ಕೋಟಿ ರೂ. ಹೂಡಿಕೆ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಹಾ ಖಝಿ ಎಂಬಾತನನ್ನು ಬಂಧಿಸಲಾಗಿದ್ದು, ಆತ ಈ ಜಾಲಕ್ಕೆ ತಾಂತ್ರಿಕ ಬೆಂಬಲ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.