ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಜಿದ್ದಾಜಿದ್ದಿ
Team Udayavani, Jun 6, 2018, 12:19 PM IST
ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಎಂ.ರಾಮಪ್ಪ, ಬಿಜೆಪಿಯಿಂದ ವೈ.ಎ.ನಾರಾಯಸ್ವಾಮಿ, ಜೆಡಿಎಸ್‌ನಿಂದ ರಮೇಶ್‌ಬಾಬು ಹಾಗೂ 11 ಮಂದಿ ಕಣದಲ್ಲಿದ್ದಾರೆ. ಇಲ್ಲಿ ಬಿಜೆಪಿಯಿಂದ ಹಾಲನೂರು ಲೇಪಾಕ್ಷಿ ಎಂಬುವರಿಗೆ ಟಿಕೆಟ್ ನೀಡಲಾಗಿತ್ತಾದರೂ ಕೊನೇ ಕ್ಷಣದಲ್ಲಿ ಹೆಬ್ಟಾಳ ವಿಧಾನಸಭೆ ಕ್ಷೇತ್ರದಿಂದ ಸೋಲು ಅನುಭವಿಸಿದ ವೈ.ಎ.ನಾರಾಯಣಸ್ವಾಮಿಗೆ ಟಿಕೆಟ್ ದೊರೆತಿದೆ.
ರಮೇಶ್‌ಬಾಬು ಹಾಲಿ ಸದಸ್ಯರಾಗಿದ್ದು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಅಲ್ಪ ಸಮಯದಲ್ಲೇ ಶಿಕ್ಷಕ ವರ್ಗದ ಜತೆ ಬೆರೆತು ಸದನದ ಒಳಗೆ ಹಾಗೂ ಹೊರಗೆ ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ, ಧರಣಿ-ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ಮೇಲೆ ಒತ್ತಡ ಹೇರಿ ಕೆಲ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯೂ ಆಗಿದ್ದಾರೆ. ಹೀಗಾಗಿ, ಎರಡನೇ ಬಾರಿ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಖುದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮೇತ ಪಕ್ಷತ ನಾಯಕರು ಇವರ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಬಿಜೆಪಿಯಿಂದ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿ ಇದೇ ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದಿದ್ದರು. ಒಮ್ಮೆ ಪಕ್ಷೇತರರಾಗಿ ಮತ್ತೂಮ್ಮೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಹೀಗಾಗಿ, ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದಾರೆ. ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ತಂಡದೊಂದಿಗೆ ಪ್ರಚಾರದಲ್ಲಿ ತೊಡಗಿದ್ದಾರೆ.
ಇನ್ನು ಕಾಂಗ್ರೆಸ್‌ನ ರಾಮಪ್ಪ ಉಪನ್ಯಾಸಕರಾಗಿದ್ದವರು. ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟಿದ್ದೀರಿ, ನನಗೊಂದು ಅವಕಾಶ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರು ಇವರ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಇವರ ಜೊತೆಗೆ ಪಕ್ಷೇತರ ಅಭ್ಯರ್ಥಿಯಾಗಿರುವ ನಿವೃತ್ತ ಪ್ರಾಂಶುಪಾಲ ಕೆ.ಜಿ. ತಿಮ್ಮಾರೆಡ್ಡಿ ಸಹ ಕಣದಲ್ಲಿದ್ದು, ಪ್ರಚಾರ ನಿರತರಾಗಿದ್ದಾರೆ.
ಈ ಕ್ಷೇತ್ರಗಳಿಗೆ ಜೂ.8 ರಂದು ಮತದಾನ ನಡೆಯಲಿದ್ದು, ಅದಕ್ಕೆ ಮುಂಚೆ ಬುಧವಾರ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗುವುದರಿಂದ ಸಚಿವಗಿರಿ ತಪ್ಪಿಸಿಕೊಂಡವರ ಅತೃಪ್ತಿ-ಅಸಮಾಧಾನ ಈ ಚುನಾವಣೆ ಮೇಲೆ ಪರಿಣಾಮ ಬೀರುತ್ತಾ -ಇಲ್ಲವಾ ಎಂಬುದೂ ಕಾದು ನೋಡಬೇಕಾಗಿದೆ.
ನಾಯಕರ ಪರಿಣಾಮ: ರಾಜ್ಯದ ಪದವೀಧರ ಹಾಗೂ ಶಿಕ್ಷಕರ ಒಟ್ಟು ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ಈ ಚುನಾವಣೆ “ಸಮರ’ದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ “ನಾಮಬಲ’ ಹಾಗೂ “ಮೌನ ಬಲ’ ವೂ ಚುನಾವಣೆ ಮೆಲೆ ಪರಿಣಾಮ ಬೀರಲಿದೆ.
* ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.