ಮಾವು ರಫ್ತಿಗೆ ನಿಪ ಕರಿನೆರಳು

Team Udayavani, Jun 7, 2018, 11:40 AM IST

blore-3.jpg

ಬೆಂಗಳೂರು: ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿರುವ “ನಿಪ’ ವೈರಸ್‌ ಹರಡುವಿಕೆಗೆ ಸಂಬಂಧಿಸಿದ ಉಹಾಪೂಹ ಗಳು ಇದೀಗ ಮಾವಿನ ಹಣ್ಣಿನ ರಫ್ತು ವಹಿವಾಟಿನ ಮೇಲೆ ಪ್ರಭಾವ ಬೀರಿದ್ದು, ದೇಶದಿಂದ ಮಾವು ರಫ್ತು ಬಹುತೇಕ ಸ್ಥಗಿತಗೊಂಡಿದೆ! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಮಾವಿನ ಹಣ್ಣುಗಳಿಗೆ ಭಾರಿ ಬೇಡಿಕೆಯಿದೆ. ಆದರೆ ಹಕ್ಕಿಗಳು ತಿಂದ ಹಣ್ಣು ಸೇವಿಸಿದರೆ ನಿಪ ವೈರಸ್‌ ಹರಡುತ್ತದೆ ಎಂಬ ವದಂತಿ ಕೊಲ್ಲಿ ರಾಷ್ಟ್ರಗಳನ್ನೂ ತಲುಪಿದೆ.

ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಭಾರತ ದಿಂದ ರಫ್ತಾಗುವ ಮಾವಿನ ಹಣ್ಣುಗಳನ್ನು ಅನುಮಾನದಿಂದ ನೋಡಲಾಗುತ್ತಿದೆ. ಪರಿಣಾಮ, ಬೇಡಿಕೆ ಕುಸಿದಿದೆ. ದುಬೈ ಸೇರಿ ಇತರ ಕೊಲ್ಲಿ ರಾಷ್ಟ್ರಗಳು ಮಾವಿನ ಹಣ್ಣಿಗೆ ಭಾರತವನ್ನೇ ಅವಲಂಬಿಸಿವೆ. 

ಪ್ರತಿ ವರ್ಷ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಅರಬ್‌ ರಾಷ್ಟ್ರಗಳಿಗೆ ಮಾವು ರಫ್ತಾಗುತ್ತಿದೆ. ಆದರೆ, ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿರುವ ನಿಪ ಸೋಂಕು, ಹಕ್ಕಿ ತಿಂದ ಹಣ್ಣುಗಳಿಂದಲೇ ಬರುತ್ತಿದೆ ಎಂಬ ವದಂತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ದಿಢೀರ್‌ ಕುಸಿದಿದ್ದು, ತಾತ್ಕಾಲಿಕವಾಗಿ ರಪ್ತು ಸ್ಥಗಿತಗೊಂಡಿದೆ. ಬಾದಾಮಿ, ಆಲ್ಫಾನ್ಸೋ , ಅಮ್ರಪಾಲಿ, ಮಲಗೋವಾ, ಮಲ್ಲಿಕಾ, ರಸಪುರಿ, ನೀಲಂ, ಕಾಲಾಪಾಡ್‌, ಸಿಂಧೂರ ಸೇರಿದಂತೆ ನಾನಾ ತಳಿಯ ಮಾವು ದುಬೈ , ಕುವೈತ್‌, ಕತಾರ್‌, ಯುಎಇ, ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳಿಗೆ ರಫ್ತಾಗುತ್ತವೆ.

ಕಳೆದ ಮಾರ್ಚ್‌ ಅಂತ್ಯದವರೆಗೂ ಸುಮಾರು 889 ಟನ್‌ನಷ್ಟು ಮಾವು ವಿದೇಶಕ್ಕೆ ರಫ್ತಾಗಿತ್ತು. ಇದರಲ್ಲಿ ಬಾದಾಮಿ ಮಾವಿಗೆ ಅಗ್ರಸ್ಥಾನ. ಹಾಗಾಗಿ ಈ ಋತುಮಾನದಲ್ಲಿ ಉತ್ತಮ ವಹಿವಾಟು ನಿರೀಕ್ಷಿಸಲಾಗಿತ್ತು ಎಂದು ಮಾವು ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಸ್ಥಳೀಯವಾಗಿ ತಗ್ಗದ ಬೇಡಿಕೆ: ಒಂದೆಡೆ ವಿದೇಶಿಗರು ನಿಪ ಭಯದಿಂದ ಮಾವಿನ ಹಣ್ಣುಗಳಿಂದ ದೂರ ಉಳಿದಿದ್ದರೆ, ಇತ್ತ ನಾಡಿನ ಮಾವು ಪ್ರಿಯರಿಗೆ ನಿಪ ಸೋಂಕಿನ ಭೀತಿಯಿಲ್ಲ. ಸಸ್ಯಕಾಶಿ ಲಾಬ್‌ಲಾಗ್‌ನಲ್ಲಿ ಮಾವು ಮಾರಾಟ ಉತ್ತಮವಾಗಿದೆ. ಮೇ 25ರಿಂದೀಚೆಗೆ ಲಾಲ್‌ಬಾಗ್‌ನಲ್ಲಿ 510 ಟನ್‌ ಮಾವು ಮಾರಾಟವಾಗಿದ್ದು, 3.60 ಕೋಟಿ ರೂ. ವಹಿವಾಟು ನಡೆದಿದೆ. ಇದರಲ್ಲಿ ಆಲ್ಫಾನ್ಸೋ 208 ಟನ್‌, ಮಲ್ಲಿಕಾ 87 ಟನ್‌, ರಸಪುರಿ 53.12 ಟನ್‌, ಸಿಂಧೂರ 36.64 ಟನ್‌, ಮಲಗೋವಾ 28.02 ಟನ್‌, ಸಕ್ಕರೆ ಗುತ್ತಿ 21.37 ಟನ್‌, ತೋತಾಪುರಿ 21.98 ಟನ್‌ ಹಾಗೂ ಇತರೆ ತಳಿಯ ಮಾವು ಸುಮಾರು 53.87 ಟನ್‌ನಷ್ಟು ಮಾರಾಟವಾಗಿದೆ ಎಂದು ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜ್‌ ಹೇಳಿದ್ದಾರೆ.

ಹಾಪ್‌ಕಾಮ್ಸ್‌ನಲ್ಲೂ ಮಾರಾಟ ಜೋರು: ಲಾಲ್‌ಬಾಗ್‌ ಮಾತ್ರವಲ್ಲದೇ ಹಾಪ್‌ಕಾಮ್ಸ್‌ ಮಳಿಗೆಗಳಲ್ಲೂ ಮಾವು ಮಾರಾಟ ಅಬಾಧಿತವಾಗಿ ನಡೆದಿದೆ. ನಗರದ 325 ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಇತ್ತೀಚಿನವರೆಗೆ 203 ಟನ್‌
ಮಾವು ಮಾರಾಟವಾಗಿದೆ. ಜುಲೈವರೆಗೂ ಮಾರಾಟ ಮೇಳ ಮುಂದುವರಿಯಲಿದ್ದು, ಒಂದು ಸಾವಿರ ಟನ್‌ ಮಾವು ಮಾರಾಟ ಮಾಡುವ ಗುರಿಯನ್ನು ಹಾಪ್‌ಕಾಮ್ಸ್‌ ಹೊಂದಿದೆ. ಮಾವು ಮೇಳ ಆರಂಭವಾದಾಗಿನಿಂದ ಈವರೆಗೆ ಬಾದಾಮಿ 63 ಟನ್‌, ರಸಪುರಿ 60 ಟನ್‌, ಸಿಂಧೂರ 20, ಆಲ್ಫಾನ್ಸೋ 25 ಟನ್‌, ಮಲಗೋವಾ 10 ಟನ್‌, ಮಲ್ಲಿಕಾ 16 ಟನ್‌ ಮಾವಿನ ಹಣ್ಣು ಮಾರಾಟವಾಗಿದೆ ಎಂದು ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ್‌ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಇತರೆಡೆಯ ರೈತರಿಂದ ಮಾವು ಖರೀದಿಸಲಾಗುತ್ತದೆ. ಸ್ಥಳೀಯ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ದರಕ್ಕೆ ಮಾವು ಖರೀದಿಸಿ ರೈತರನ್ನು ಉತ್ತೇಜಿಸಲಾಗುತ್ತಿದೆ. ಬೇಡಿಕೆಯ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್‌ ಸಿಟಿಯ ಇನ್ಪೋಸಿಸ್‌ ಆವರಣ, ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕಾ ಟೌನ್‌ಶಿಪ್‌ ಪ್ರಾಧಿಕಾರದ (ಇಎಲ್‌ ಸಿಟಿಎ) ಆವರಣದಲ್ಲಿ ಹಾಪ್‌ಕಾಮ್ಸ್‌ ಮಳಿಗೆ ತೆರೆಯಲಾಗಿದ್ದು, ಉತ್ತಮ ವಹಿವಾಟು ನಡೆದಿದೆ ಎಂದು ತಿಳಿಸಿದರು. 

ನಿಪ ಸೋಂಕಿನ ಬಗೆಗಿನ ವದಂತಿ ಇದ್ದರೂ ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಮಾವು ಮಾರಾಟದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮುಂದೆಯೂ ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಯಾವುದೇ ಕಾರಣಕ್ಕೂ ರೈತರಿಗೆ ನಷ್ಟವಾಗಬಾರದು ಎಂಬುದು ನಮ್ಮ ಕಾಳಜಿ.
 ಚಂದ್ರೇಗೌಡ, ಹಾಪ್‌ಕಾಮ್ಸ್‌ ಅಧ್ಯಕ್ಷ

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.