ವಿದ್ಯುತ್ ಘಟಕ ಸ್ಥಾಪನೆ ಒಡಂಬಡಿಕೆ
Team Udayavani, Jun 7, 2018, 12:38 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ವಿದ್ಯುತ್ ತಯಾರಿಕಾ ಘಟಕಗಳನ್ನಾಗಿ ಪರಿವರ್ತಿಸುತ್ತಿರುವ ಬಿಬಿಎಂಪಿ, ಇದೀಗ ಚಿಕ್ಕನಾಗಮಂಗಲದಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸಲು ಯೋಜನೆಗೆ ಫ್ರಾನ್ಸ್ ಮೂಲದ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಮೇಯರ್ ಆರ್.ಸಂಪತ್‌ರಾಜ್ ಹಾಗೂ ಫ್ರಾನ್ಸ್‌ನ ಫ್ರಾನ್ಸ್ ದೇಶದ ರಾಯಭಾರಿ ಅಲೆಗ್ಸಾಂಡರ್ ಜಿಗ್ಗರ್ ಚಿಕ್ಕನಾಗಮಂಗಲದಲ್ಲಿ ವಿದ್ಯುತ್ ಘಟಕ ಸ್ಥಾಪನೆ ಸಂಬಂಧಿತ ಒಡಂಬಡಿಕೆಗೆ ಸಹಿ ಹಾಕಿದರು.
3ವೇಸ್ಟ್ (ತ್ರೀವೇಸ್ಟ್) ಸಂಸ್ಥೆಯೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಗುತ್ತಿಗೆದಾರರು ನಿತ್ಯ 500 ಟನ್ ತ್ಯಾಜ್ಯವನ್ನು ವಿದ್ಯುತ್ ಆಗಿ ಪರಿವರ್ತಿಸಬೇಕಾಗಿದ್ದು, ಘಟಕ ನಿರ್ಮಾಣಕ್ಕೆ ಅಗತ್ಯವಾದ ಎಲ್ಲ ರೀತಿಯ ಯಂತ್ರೋಪಕರಣಗಳನ್ನು ಗುತ್ತಿಗೆದಾರರೇ ಖರೀದಿಸಬೇಕು. ಪಾಲಿಕೆಯಿಂದ ನಿತ್ಯ ಮನೆಗಳಲ್ಲಿ ಉತ್ಪತ್ತಿಯಾಗುವ 300 ಟನ್ ಹಾಗೂ ಸಗಟು ತ್ಯಾಜ್ಯ ಉತ್ಪಾದಕರಿಂದ 200 ಟನ್ ತ್ಯಾಜ್ಯವನ್ನು ಮಾತ್ರ ಪೂರೈಕೆ ಮಾಡಲಾಗುತ್ತದೆ.
ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಘಟಕ ನಿರ್ಮಾಣಕ್ಕಾಗಿ ಚಿಕ್ಕನಾಗಮಂಗಲದ ಬಳಿ 15 ಎಕರೆ ವಿಸ್ತೀರ್ಣದ ಜಮೀನನ್ನು 3ವೇಸ್ಟ್ ಸಂಸ್ಥೆಗೆ 30 ವರ್ಷಗಳಿಗೆ ಗುತ್ತಿಗೆ ನೀಡುತ್ತಿದ್ದು, ಮುಂದಿನ ಏಳು ತಿಂಗಳಲ್ಲಿ ಇಂಧನ ಉತ್ಪಾದನಾ ಘಟಕ ಸ್ಥಾಪಿಸಿ ಕಾರ್ಯಾರಂಭಿಸಬೇಕು. ಜತೆಗೆ ಜಮೀನನ್ನು ಯಾವುದೇ ಕಾರಣಕ್ಕೂ ಪರಭಾರೆ ಮಾಡುವಂತಿಲ್ಲ ಎಂಬ ಷರತ್ತನ್ನು ಬಿಬಿಎಂಪಿ ವಿಧಿಸಿದೆ. ಜತೆಗೆ ಘಟಕ ಸ್ಥಾಪನೆಗೆ ಪಾಲಿಕೆ ಅಥವಾ ಸರ್ಕಾರದಿಂದ ಯಾವುದೇ ಅನುದಾನ ನೀಡುವುದಿಲ್ಲವೆಂಬ ಅಂಶವನ್ನು ಒಪ್ಪಂದದಲ್ಲಿ ಉಲ್ಲೇಖೀಸಲಾಗಿದೆ.
ಘಟಕ ಸ್ಥಾಪನೆಗೆ ಬೇಕಾಗುವಂತಹ ಸಾಮಗ್ರಿಗಳನ್ನು 3ವೇಸ್ಟ್ ಸಂಸ್ಥೆ ಸರಬರಾಜು ಮಾಡಿಕೊಳ್ಳಬೇಕಿದ್ದು,
ಸರ್ಕಾರಕ್ಕೆ ಅಬಕಾರಿ ಸುಂಕ ಪಾವತಿಸಬೇಕಿದೆ. ಹೀಗಾಗಿ ಸಂಸ್ಥೆಗೆ ಮುಂದಿನ 10 ವರ್ಷಗಳವರೆಗೆ ವಿವಿಧ ತೆರಿಗೆ
ವಿನಾಯಿತಿ ನೀಡಲು ಸರ್ಕಾರ ಸಮ್ಮತಿಸಿರುವುದಾಗಿ ಒಪ್ಪಂದದಲ್ಲಿ ತಿಳಿಸಿದೆ. ಒಡಂಬಡಿಕೆ ವೇಳೆ ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಹಾಜರಿದ್ದರು.
ವಿದ್ಯುತ್ ಮಾರಾಟ
ಚಿಕ್ಕನಾಗಮಂಗಲದಲ್ಲಿ ನಿರ್ಮಿಸಲು ಉದ್ದೇಶಿಸಿರುವ 500 ಟನ್ ಸಾಮರ್ಥಯದ ತ್ಯಾಜ್ಯದಿಂದ ವಿದ್ಯುತ್
ಉತ್ಪಾದನಾ ಘಟಕದಲ್ಲಿ ನಿತ್ಯ 7 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಘಟಕದಲ್ಲಿ ಉತ್ಪಾದನೆಯಾಗುವ ವಿದ್ಯುತ್‌ನ್ನು ಕೆಇಆರ್‌ಸಿ ನಿಗದಿಪಡಿ ಸಿದಂತೆ ಪ್ರತಿ ಕಿಲೋ ವ್ಯಾಟ್‌ಗೆ 7.08 ರೂ.ಗಳಂತೆ ಗುತ್ತಿಗೆದಾರರು ಮಾರಾಟ ಮಾಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.