ಆರ್‌ಟಿಇ: ಹೆಚ್ಚುವರಿ ಹಣಕ್ಕೆ ಬೇಡಿಕ


Team Udayavani, Jun 7, 2018, 12:50 PM IST

bg-1.jpg

ದೇವನಹಳ್ಳಿ: ಖಾಸಗಿ ಶಾಲೆಯೊಂದರಲ್ಲಿ ಆರ್‌ಟಿಇ ಅಡಿ ಸೀಟು ಪಡೆದು ದಾಖಲಾಗುವ ಮಕ್ಕಳಿಗೆ ಹೆಚ್ಚುವರಿ ಹಣ ಪಾವತಿ ಮಾಡಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಬಿ.ಬಿ. ರಸ್ತೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ಪೋಷಕ ಹನುಮಂತೇ ಗೌಡ ಮಾತನಾಡಿ, ತಾಲೂಕಿನ ಆಲೂರುದುದ್ದನಹಳ್ಳಿ ಬಳಿ ಇರುವ ಖಾಸಗಿ ಶಾಲೆಯಲ್ಲಿ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ಹೊರತು ಪಡಿಸಿ ಹೆಚ್ಚುವರಿಯಾಗಿ 5800 ರೂ. ಹಣ ಪಾವತಿಸಬೇಕು ಎಂದು ಬೇಡಿಕೆ ಇಟ್ಟಿದ್ದು, ಹಣ ಸಂದಾಯ ಮಾಡಿದ್ದಕ್ಕೆ ರಸೀದಿ ನೀಡುವಂತೆ ಕೇಳಿದರೆ ರಸೀದಿ ನೀಡಲಾಗುವುದಿಲ್ಲ.

ಹಣ ಪಾವತಿಸುವುದು ಕಡ್ಡಾಯ ಎಂದು ಹೇಳುತ್ತಾರೆ. ಸರ್ಕಾರ ಆರ್‌ಟಿಇ ಮಾಡಿರುವ ಉದ್ದೇಶ ಬಡ ವಿದ್ಯಾರ್ಥಿಗಳಿಗೆ ಅನುಕೂ ಲವಾಗುವ ಉದ್ದೇಶದಿಂದ ಮಾಡಿದೆ. ಅದೇ ಆರ್‌ಟಿಇ ಹಣವನ್ನು ಸರ್ಕಾರ ಮಕ್ಕಳ ವಾರ್ಷಿಕ ಶುಲ್ಕವನ್ನು ಸರ್ಕಾರಿ ಶಾಲೆಗಳಿಗೆ ನೀಡಿದರೆ ಮತ್ತಷ್ಟು ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತದೆ. ಇಂತಹ ಕಾನೂನು ಗಳಿಂದ ಖಾಸಗಿ ಶಾಲೆಗಳಿಗೆ ಲಾಭವಾಗುತ್ತಿದೆ. ಕೂಡಲೇ ಸರ್ಕಾರ ಆರ್‌ ಟಿಇ ಅನ್ನು ತೆಗೆದು ಹಾಕಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈ ಹಣವನ್ನು ಸದುಪಯೋಗ ಮಾಡಲಿ ಎಂದು ಒತ್ತಾಯಿಸಿದರು.

ಪೋಷಕ ನಾರಾಯಣಸ್ವಾಮಿ ಮಾತನಾಡಿ, 11 ದಿನಗಳ ಹಿಂದೆ ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಲಿಖೀತವಾಗಿ ಮನವಿ ಮಾಡಲಾಗಿದೆ. ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ಮಕ್ಕಳ ಶುಲ್ಕ ಭರಿಸುವಾಗ ಹೆಚ್ಚುವರಿ ಶುಲ್ಕಕ್ಕೆ ಏಕೆ ಬೇಡಿಕೆ ಇಡಬೇಕು.
 
ಪ್ರತಿಯೊಂದು ಶಾಲೆಯವರು ಶುಲ್ಕ ನಿಗದಿ ಪಡಿಸಿದ್ದರೂ ಸಹ ಹೆಚ್ಚುವರಿಯಾಗಿ ಪಾವತಿಸಬೇಕು. ಮಕ್ಕಳ ಜೀವನದ ಜೊತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಚೆಲ್ಲಾಟವಾಡುತ್ತಿದೆ. ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. 

ಬಹುಜನ ವಿದ್ಯಾರ್ಥಿ ಸಮಿತಿಯ ಜಿಲ್ಲಾ ಸಂಯೋಜಕ ವಕೀಲ ಮಹೇಶ್‌ ದಾಸ್‌ ಮಾತನಾಡಿ, ಆರ್‌ಟಿಇ ಅಡಿಯಲ್ಲಿ
ಓದುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಮಾನಸಿಕ ತೊಂದರೆಗೆ ಒಳಪಡಬಾರದು ಎಂಬ ದೃಷ್ಟಿಯಲ್ಲಿ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಕೆಲ ಖಾಸಗಿ ಶಾಲೆಗಳು ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಆರ್‌ಟಿಇ ಮಕ್ಕಳ ಪೋಷಕರಿಂದ 5800 ರೂ.ಗಳ ಹೆಚ್ಚುವರಿ ರಸೀದಿ ರಹಿತ ಶುಲ್ಕವನ್ನು ಕಟ್ಟುವಂತೆ ಬೇಡಿಕೆ ಇಡುತ್ತಾರೆ.

ಶಾಲೆಯಲ್ಲಿ ಆರ್‌ಟಿಇ ಮಕ್ಕಳಿಗೆ ಪ್ರತ್ಯೇತಕವಾಗಿ ಕಾಣಲಾಗುತ್ತಿದೆ. ಹಲವಾರು ಮಕ್ಕಳು ಇದರಿಂದ ಮಾನಸಿಕ
ಹಿಂಸೆ ಪಡುತ್ತಿದ್ದಾರೆ. ನಮ್ಮ ಜಿಲ್ಲಾ ಬಹುಜನ ವಿದ್ಯಾರ್ಥಿ ಸಮಿತಿಗೆ ಪೋಷಕರು ಮಾಹಿತಿ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಗಮನ ಹರಿಸಬೇಕು ಎಂದು ಆಗ್ರಹಿಸಿದರು. 

ಪೋಷಕರಾದ ನಾರಾಯಣಸ್ವಾಮಿ, ಸಿ. ಮಂಜುನಾಥ್‌, ಮುನಿಕೆಂಪಣ್ಣ, ಡಿ.ಎಂ. ಮಂಜುನಾಥ, ದುಗ್ಗೇಶ್‌, ಎ.ಎಂ.
ಮಂಜು ನಾಥ್‌, ಲಕ್ಷ್ಮಣ್‌, ಮುನಿರಾಜು ಇತರರು ಇದ್ದರು.  ಆರ್‌ಟಿಇ ಅಡಿ ಖಾಸಗಿ ಶಾಲೆಯಲ್ಲಿ 5800ರೂ. ಹಣ
ಬೇಡಿಕೆ ಇಟ್ಟಿರುವುದು ಪೋಷಕರು ತಮ್ಮ ಗಮನಕ್ಕೆ ತಂದಿದ್ದಾರೆ. ದೂರ ವಾಣಿ ಮುಖಾಂತರ ಕರೆ ಮಾಡಿ
ವಿಚಾರಿಸಿದ್ದೇನೆ. ಕಾರಣ ಕೇಳಿ ನೋಟಿಸ್‌ ಸಹ ನೀಡಲಾಗುತ್ತಿದೆ. ನಾನು ಯಾರ ಪರ ಅಲ್ಲ. ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗುವುದೇ ನನ್ನ ಕರ್ತವ್ಯವಾಗಿದೆ. ಮಕ್ಕಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುತ್ತಿದೆ. ಮುಖಾ ಮುಖೀ ಇಬ್ಬರನ್ನು ಕೂರಿಸಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 
ಗಾಯಿತ್ರಿದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ 

ಟಾಪ್ ನ್ಯೂಸ್

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.