ಜಿಲ್ಲೆಯಲ್ಲಿನ್ನು ರೇವಣ್ಣ ಪಾರುಪತ್ಯ


Team Udayavani, Jun 7, 2018, 2:01 PM IST

has-1.jpg

ಹಾಸನ: ಜಿಲ್ಲೆಯಲ್ಲಿ ಇನ್ನು ಎಚ್‌.ಡಿ.ರೇವಣ್ಣ ಅವರದೇ ಪಾರುಪತ್ಯ. ಒಂದು ದಶಕದಿಂದ ವಿರೋಧ ಪಕ್ಷದಲ್ಲಿದ್ದರೂ ಜಿಲ್ಲೆಯ ಆಡಳಿತದ ಮೇಲೆ ಹಿಡಿತವಿಟ್ಟುಕೊಂಡಿದ್ದ ರೇವಣ್ಣ ಅವರು ಈಗ ಸಚಿವರಾಗಿರುವುದರಿಂದ ಜಿಲ್ಲೆಯ ಅಧಿಕಾರಿ
ವರ್ಗದಲ್ಲಿ ತಳಮಳ ಶುರುವಾಗಿದೆ.

ರಾಜಕೀಯವಾಗಿಯೂ ಈಗ ಜಿಲ್ಲೆಯಲ್ಲಿ ಜೆಡಿಎಸ್‌ ಸಂಪೂರ್ಣ ಹಿಡಿತ ಸಾಧಿಸಿದೆ. 7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿರುವ ಜೆಡಿಎಸ್‌ ಕಾಂಗ್ರೆಸ್‌ಗೆ ದನಿ ಇಲ್ಲದಂತೆ ಮಾಡಿದೆ. ಇನ್ನು ಒಬ್ಬ ಬಿಜೆಪಿ ಶಾಸಕರಿದ್ದರೂ ಬಲಾಡ್ಯ 6 ಮಂದಿ ಜೆಡಿಎಸ್‌ ಶಾಸಕರೆದುರು ಹೋರಾಡುವಷ್ಟು ರಾಜಕೀಯ ಶಕ್ತಿ ಅವರಿಗಿಲ್ಲ. ಇದೇ ಮೊದಲ ಬಾರಿಗೆ ಶಾಸಕರಾಗಿರುವ ಬಿಜೆಪಿಯ ಪ್ರೀತಂ ಜೆ.ಗೌಡ ಅವರಿಗೆ ಇನ್ನೂ ರಾಜಕೀಯ ಹಾಗೂ ಆಡಳಿತದ ಆಳ ಅರಿವು ಗೊತ್ತಿಲ್ಲ. ಹಾಗಾಗಿ ಸಚಿವ ರೇವಣ್ಣ ಎದರು ಜಿಲ್ಲೆಯಲ್ಲಿ ದನಿ ಎತ್ತುವವರೇ ಇಲ್ಲ.

ಗತಕಾಲದ ಸಾಧನೆ: ಒಂದು ದಶಕದ ನಂತರ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಿರುವ ಎಚ್‌.ಡಿ.ರೇವಣ್ಣ ಅವರಿಂದ ಜಿಲ್ಲೆಯ ಜನರು ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದಾರೆ. 2004 ರಿಂದ 2008 ರವರೆಗೆ ರೇವಣ್ಣ ಅವರು ಜಿಲ್ಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಈಗಲೂ ಮೆಲುಕು ಹಾಕುತ್ತಿರುವ ಜಿಲ್ಲೆಯ ಜನರು ಈಗ ಇನ್ನಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಧರಂ ಸಿಂಗ್‌ ನೇತೃತ್ವದ ಕಾಂಗ್ರೆಸ್‌ – ಜೆಡಿಎಸ್‌ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಹಾಗೂ ಇಂಧನ ಸಚಿವರಾಗಿದ್ದ ರೇವಣ್ಣ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್‌- ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲೂ ಅದೇ ಖಾತೆಗಳನ್ನು ನಿರ್ವಹಿಸಿದ್ದರು. ಆ 36 ತಿಂಗಳ ಆಡಳಿತದಲ್ಲಿ ಹಾಸನಕ್ಕೆ ಸರ್ಕಾರಿ ಮೆಡಿಕಲ್‌ ಕಾಲೇಜು, 2 ನರ್ಸಿಂಗ್‌ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು, ಕೃಷಿ ಕಾಲೇಜು, ಪಶುವೈದ್ಯಕೀಯ ಕಾಲೇಜು, ಗೃಹ ವಿಜ್ಞಾನ ಕಾಲೇಜು, ಕಾನೂನು ಕಾಲೇಜು, ಮಹಿಳಾ ಕಾಲೇಜು, ಪ್ರತಿ ಹೋಬಳಿ ಕೇಂದ್ರಗಳಿಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಬರುವಂತೆ ಮಾಡಿದ್ದರು.

ಹೆಚ್ಚಿದ ನಿರೀಕ್ಷೆ: ಹೈನುಗಾರಿಕೆ ಅಭಿವೃದ್ಧಿಯಲ್ಲಿ ರೇವಣ್ಣ ಅವರನ್ನು ಮೀರಿಸುವವರಿಲ್ಲ ಎಂಬಂತೆ ಅಭಿವೃದ್ಧಿ ಮಾಡಿ ಹಾಸನ ಜಿಲ್ಲೆ ಈಗ ರಾಜ್ಯದಲ್ಲಿಯೇ ಹಾಲು ಉತ್ಪಾದನೆಯಲ್ಲಿ 2 ನೇ ಸ್ಥಾನ ಪಡೆದುಕೊಂಡಿದೆ. ಹಾಸನ ಡೇರಿ ಮೆಗಾ ಡೇರಿ ರೂಪ ಪಡೆದಿದೆ. ಈಗ ಅದೇ ವೇಗದ ಅಭಿವೃದ್ಧಿಯನ್ನು ಜಿಲ್ಲೆಯ ಜನರು ರೇವಣ್ಣ ಅವರಿಂದ ನಿರೀಕ್ಷಿಸುತ್ತಿದ್ದಾರೆ.

ಎಚ್ಚರಿಸುವ ವಿರೋಧಪಕ್ಷದ ಕೊರತೆ: ಕಳೆದ ಒಂದು ದಶಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರಗಳು ಹಾಸನ ಜಿಲ್ಲೆಯ ಅಭಿವೃದ್ಧಿಯನ್ನು ನಿರ್ಲಕ್ಷಿಸಿವೆ ಎಂದು ಆರೋಪಿಸುತ್ತಾ ಬಂದಿದ್ದ ರೇವಣ್ಣ ಅವರು, ಜಿಲ್ಲೆ ತಾವು ಉಸ್ತುವಾರಿ ಸಚಿವರಾಗಿದ್ದಾಗ ಏನೇನು ಆಗಿತ್ತು, ಜಿಲ್ಲೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರಗಳು ಏನೇನು ಅನ್ಯಾಯ ಮಾಡಿದವರು ಎಂದು ಪಟ್ಟಿ ಮಾಡುತ್ತಾ ಹೋಗುತ್ತಿದ್ದರು. ಈಗ ಅವುಗಳನ್ನೆಲ್ಲಾ ಈಡೇರಿಸುವ ಹೊಣೆ ರೇವಣ್ಣ ಅವರ ಮೇಲಿದೆ. ಆದರೆ ಈಗ ಅವರ ಹೊಣೆಗಾರಿಕೆಯನ್ನು ನೆನಪಿಸುವ ಪ್ರಬಲ ವಿರೋಧ ಪಕ್ಷವೇ ಜಿಲ್ಲೆಯಲ್ಲಿ ಇಲ್ಲ. 

ರೇವಣ್ಣ ನಡೆದು ಬಂದ ಹಾದಿ ಹೊಳೆನರಸೀಪುರ ತಾಲೂಕು ಪಡುವಲ ಹಿಪ್ಪೆಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷನಾಗಿ 80 ರ ದಶಕದಲ್ಲಿ ಸಾರ್ವಜನಿಕ ಸೇವಾ ಕ್ಷೇತ್ರ ಪ್ರವೇಶಿಸಿದ ರೇವಣ್ಣ, 1986 ರಲ್ಲಿ ಹಾಸನ ಜಿಪಂ ಸದಸ್ಯರಾಗಿ ಆಯ್ಕೆಯಾದರು. ಹೊಳೆನರಸೀಪುರ ಕ್ಷೇತ್ರದಿಂದ 1994 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದು ಒಟ್ಟು 5 ಬಾರಿ, 2004 ರಿಂದ ಸತತ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಅವರು 4ನೇ ಬಾರಿ ಸಚಿವರಾಗುತ್ತಿದ್ದಾರೆ. 1994 ರಲ್ಲಿ ಪ್ರಥಮ ಬಾರಿಗೆ ರೇವಣ್ಣ ಅವರು ವಿಧಾನಸಭೆ ಪ್ರವೇಶಿಸಿದಾಗ ಅವರ ತಂದೆ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ. 

1996 ರ ಜೂನ್‌ 1 ರಂದು ದೇವೇಗೌಡರು ಪ್ರಧಾನಿಯಾದಾಗ ರಾಜ್ಯದಲ್ಲಿ ಜೆ.ಎಚ್‌.ಪಟೇಲ್‌ ನೇತೃತ್ವದ ಜನತಾದಳ ಸರ್ಕಾರದಲ್ಲಿ ಎಚ್‌.ಡಿ.ರೇವಣ್ಣ ಸಂಪುಟ ದರ್ಜೆ ಸಚಿವರಾಗಿ ವಸತಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಧರಂಸಿಂಗ್‌ ಸರ್ಕಾರದಲ್ಲಿ ಲೋಕೋಪಯೋಗಿ ಮತ್ತು ಇಂಧನ ಸಚಿವ. ಎಚ್‌.ಡಿ.ಕುಮಾರಸ್ವಾಮಿ ಅವರ ಸರ್ಕಾರದಲ್ಲೂ ಆ ಎರಡೂ ಮಹತ್ವದ ಖಾತೆಗಳನ್ನು ನಿರ್ವಹಿಸಿದ್ದರು. ಈ ಬಾರಿಯೂ ಲೋಕೋಪಯೋಗಿ ಖಾತೆ ನಿರೀಕ್ಷಿಸಿದ್ದಾರೆ.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.