ಎರಡನೇ ದಿನವೂ ತೇಜಿ: ಮುಂಬಯಿ ಶೇರು 284 ಅಂಕ ಜಿಗಿತ
Team Udayavani, Jun 7, 2018, 4:37 PM IST
ಮುಂಬಯಿ: ಆರ್ ಬಿ ಐ ಹಣಕಾಸು ನೀತಿಯನ್ನು ಅನುಸರಿಸಿ ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಕಂಡು ಬಂದಿರುವ ತೇಜಿ ಇಂದು ಎರಡನೇ ದಿನವೂ ಮುಂದುವರಿದಿರುವ ಪರಿಣಾಮವಾಗಿ ಸೆನ್ಸೆಕ್ಸ್ ಇಂದು ಗುರುವಾರದ ವಹಿವಾಟನ್ನು 284 ಅಂಕಗಳ ಮುನ್ನಡೆಯೊಂದಿಗೆ ದಿನದ ವಹಿವಾಟನ್ನು 35,463.08 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 83.70 ಅಂಕಗಳ ಜಿಗಿತವನ್ನು ಸಾಧಿಸಿ ದಿನದ ವಹಿವಾಟನ್ನು 10,768.35 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ರಿಯಲ್ಟಿ, ಮೆಟಲ್, ಬ್ಯಾಂಕಿಂಗ್, ಆಟೋ ಮತ್ತು ಇನ್ಫ್ರಾಸ್ಟ್ರಕ್ಚರ್ ಶೇರುಗಳು ಭರ್ಜರಿ ಖರೀದಿ ದಾಖಲಾಯಿತು. ಸಟ್ಟಾ ವಹಿವಾಟುದಾರರಿಂದ ಶಾರ್ಟ್ ಕವರಿಂಗ್ ನಡೆದಿರುವುದು ಮತ್ತು ದೇಶೀಯ ಸಾಂಸ್ಥಿಕ ಹೂಡಿಕೆದಾರರು ವ್ಯಾಪಕ ಶೇರು ಖರೀದಿಯಲ್ಲಿ ತೊಡಗಿಕೊಂಡದ್ದು ಇಂದಿನ ತೇಜಿಗೆ ಕಾರಣವಾಯಿತು.
ನಿನ್ನೆ ಬುಧವಾರ ದೇಶೀಯ ಹೂಡಿಕೆದಾರ ಸಂಸ್ಥೆಗಳು 712.31 ಕೋಟಿ ರೂ. ಶೇರುಗಳನ್ನು ಖರೀದಿಸಿದರೆ ವಿದೇಶಿ ಹೂಡಿಕೆದಾರರು 81.40 ಕೋಟಿ ರೂ.ಶೇರುಗಳನ್ನು ಮಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.