ಸವಾಯಿ ಗಂಧರ್ವ ಕಲಾಭವನ ಉದ್ಘಾಟನೆಗೆ ವಿದ್ಯುತ್‌ ಶಾಕ್‌?


Team Udayavani, Jun 7, 2018, 4:57 PM IST

7-june-21.jpg

ಹುಬ್ಬಳ್ಳಿ: ಕಳೆದ ಆರು ವರ್ಷಗಳಿಂದ ನವೀಕರಣದ ಹಣೆಪಟ್ಟಿ ಕಟ್ಟಿಕೊಂಡ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನ ಸಾರ್ವಜನಿಕ ಬಳಕೆಗೆ ಇಲ್ಲವಾಗಿದೆ. ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಪಾಲಿಕೆ ಹಾಗೂ ಹೆಸ್ಕಾಂ ಅಧಿಕಾರಿಗಳ ಸಮನ್ವಯತೆ ಕೊರತೆ ಹಾಗೂ ವಿಳಂಬ ನೀತಿಯಿಂದ ಉದ್ಘಾಟನಾ ಭಾಗ್ಯ ಇಲ್ಲದಂತಾಗಿದೆ.

ನವೀಕರಣಕ್ಕಾಗಿ 2013ರಿಂದಲೇ ಭವನದ ಸಾರ್ವಜನಿಕ ಬಳಕೆ ಸ್ಥಗಿತಗೊಳಿಸಲಾಗಿತ್ತು. ಅಂದಾಜು 4 ಕೋಟಿ ರೂ.ವೆಚ್ಚದಲ್ಲಿ ನವೀಕರಣಗೊಳ್ಳುತ್ತಿರುವ ಭವನಕ್ಕೆ ವಿದ್ಯುತ್‌ ಸಂಪರ್ಕದ ಕಾರ್ಯವೇ ಉದ್ಘಾಟನೆಗೆ ಬಹುತೇಕ ಅಡ್ಡಿಯಾಗಿದೆ ಎಂದು ಹೇಳಲಾಗುತ್ತಿದೆ.

ಭವನದಲ್ಲಿ ಈಗಾಗಲೇ 475 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, 6 ವಿವಿಐಪಿ ಆಸನಗಳು, 10 ವಿಐಪಿ ಆಸನಗಳನ್ನು ತರಿಸಲಾಗಿದೆ. ಇನ್ನುಳಿದಂತೆ ಭವನದಲ್ಲಿ ಕೇಂದ್ರೀಕೃತ ಹವಾ ನಿಯಂತ್ರಿತ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಇದಕ್ಕೆ ಬೇಕಾದ ಅಗತ್ಯ ಸಲಕರಣೆಗಳು ಬಂದಿದ್ದು ಅಳವಡಿಸಬೇಕಿದೆ. 200 ಕೆವಿ ಜನರೇಟರ್‌ ಬಂದಿದ್ದು ಅದರ ಅಳವಡಿಕೆ ಕೂಡಾ ಮಾಡಬೇಕಿದೆ.

ಭವನದಲ್ಲಿ ಕೆಳಭಾಗದಲ್ಲಿ 5 ಕೊಠಡಿಗಳು, ಮೇಲ್ಭಾಗದಲ್ಲಿ 1 ದೊಡ್ಡ ಹಾಲ್‌ ಹಾಗೂ 1ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಕೆಳಭಾಗದ ಎರಡು ಕೊಠಡಿಗಳು ಡೆಸ್ರಿಂಗ್‌ ಕೊಠಡಿಗಳಾಗಿದ್ದು, ಒಂದು ವಿವಿಐಪಿ ಕೊಠಡಿ ಇದೆ. ಕಲಾಭವನ ನವೀಕರಣಕ್ಕಾಗಿ ರಾಜ್ಯ ಸರಕಾರ ಪಾಲಿಕೆಗೆ ನೀಡುವ ವಿಶೇಷ ಅನುದಾನದಲ್ಲಿ 2ನೇ 100 ಕೋಟಿ ರೂ. ಅನುದಾನದಲ್ಲಿ 1.75 ಕೋಟಿ ಹಾಗೂ 3ನೇ 100 ಕೋಟಿ ರೂ. ಅನುದಾನದಲ್ಲಿ 1.5 ಕೋಟಿ ರೂ. ನೀಡಲಾಗಿದೆ. ಆರಂಭದಲ್ಲಿ ಕೆಲಸ ವಹಿಸಿಕೊಂಡಿದ್ದ ನಿರ್ಮಿತಿ ಕೇಂದ್ರ ತನ್ನ ಪಾಲಿನ ಕಾಮಗಾರಿ ಮುಕ್ತಾಯಗೊಳಿಸಿದೆ. ಬೆಂಗಳೂರಿನ ಕಲರ್‌ ವೈಬ್ರೇಷನ್‌ ಸಂಸ್ಥೆ ನಂತರದ ಕಾಮಗಾರಿ ಕೈಗೆತ್ತಿಕೊಂಡು ಆಸನ, ಹವಾ ನಿಯಂತ್ರಿತ ವ್ಯವಸ್ಥೆ, ಪ್ಲೋರಿಂಗ್‌, ಪ್ಲಾಸ್ಟರಿಂಗ್‌ ಹಾಗೂ ವಿದ್ಯುತ್‌ ಸೌಲಭ್ಯ ಅಳವಡಿಕೆ ಕಾರ್ಯ ನಡೆಸಬೇಕಿದೆ. ಇದರಲ್ಲಿ ಈಗಾಗಲೇ ಆಸನ ವ್ಯವಸ್ಥೆ ಹಾಗೂ ಸೌಂಡ್‌ ಸಿಸ್ಟಮ್‌ ವ್ಯವಸ್ಥೆ ಮಾಡಿದ್ದು, ಹವಾ ನಿಯಂತ್ರಿತ ಅಳವಡಿಸುವ ಕೆಲಸ ಬಾಕಿ ಇದೆ.

ಇನ್ನುಳಿದಂತೆ ಹೊರಾಂಗಣ ಕಾಮಗಾರಿ ಪಡೆದಿರುವ ಸ್ಥಳೀಯ ಎಸ್‌ಜಿಐ ಸಂಸ್ಥೆಯು ಫೇವರ್ ಕಾಮಗಾರಿ, ಗೇಟ್‌ ಅಳವಡಿಸುವ ಕಾಮಗಾರಿ ಸೇರಿದಂತೆ ಎಲ್ಲ ಕಾಮಗಾರಿ ಭರದಿಂದ ಮಾಡುತ್ತಿದೆ. ಫೇವರ್ ಕಾಮಗಾರಿ ಕೊನೆ ಹಂತದಲ್ಲಿದ್ದು ಗೇಟ್‌ ಅಳವಡಿಸುವ ಕಾಮಗಾರಿ ಮುಕ್ತಾಯಗೊಳಿಸಲಾಗುವುದು ಎನ್ನುತ್ತಾರೆ ಸಿಬ್ಬಂದಿ.

ಕತ್ತಲಲ್ಲೇ ಉದ್ಘಾಟಿಸುತ್ತೇವೆ 
ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಕಲಾಭವನದ ಕಾಮಗಾರಿ ಎಲ್ಲವೂ ಮುಕ್ತಾಯಗೊಂಡಿದ್ದು ಉದ್ಘಾಟನೆಗೆ ಸಿದ್ಧಗೊಂಡಿದೆ. ಆದರೆ ಪಾಲಿಕೆ ಅಧಿಕಾರಿಗಳು ಹಾಗೂ ಹೆಸ್ಕಾಂ ಅಧಿಕಾರಿಗಳ ಸಮನ್ವಯ ಕೊರತೆಯಿಂದ ಇದುವರೆಗೂ ಭವನಕ್ಕೆ ವಿದ್ಯುತ್‌ ಅಳವಡಿಸುವ ಕೆಲಸ ಮಾಡಿಲ್ಲ. ಈ ಕುರಿತು ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಅಂತಿಮವಾಗಿ ಅಧಿಕಾರಿಗಳಿಗೆ ಕತ್ತಲಲ್ಲೇ ಭವನ ಉದ್ಘಾಟಿಸಲಾಗುವುದು ಎಂದು ಎಚ್ಚರಿಕೆ ಸಹ ನೀಡಲಾಗಿದೆ. 
 ವೀರಣ್ಣ ಸವಡಿ, ಪಾಲಿಕೆ ಸದಸ್ಯ 

ಹೆಸ್ಕಾಂ ಅಧಿಕಾರಿಗಳೊಂದಿಗೆ ಮಾತನಾಡಿ ಕ್ರಮ
ಈಗಾಗಲೇ ಸವಾಯಿ ಗಂಧರ್ವ ಕಲಾ ಭವನದ ಎಲ್ಲ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಸಣ್ಣ ಪುಟ್ಟ ಕೆಲಸಗಳು ಬಾಕಿ ಉಳಿದಿವೆ. ಮುಖ್ಯವಾಗಿ ವಿದ್ಯುತ್‌ ಕನೆಕ್ಷನ್‌ ಆಗಬೇಕಿದ್ದು ಈ ಕುರಿತು ಹೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಕೇಳಿಕೊಳ್ಳಲಾಗುವುದು. ಅತೀ ಶೀಘ್ರದಲ್ಲೇ ಭವನದ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು. 
 ಇಬ್ರಾಹಿಂ ಮೈಗೂರ, ಹು-ಧಾ
ಮಹಾನಗರ ಪಾಲಿಕೆ ಆಯುಕ್ತ 

ಭವನದ ಹೊರಭಾಗದ ಅಲ್ಪ ಸ್ವಲ್ಪ ಕೆಲಸ ಬಾಕಿ ಉಳಿದಿದ್ದು ಫೇವರಸ್‌ ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಒಂದು ಭಾಗದ ಗೇಟ್‌ ಅಳವಡಿಕೆ ಬಾಕಿ ಇದ್ದು ಕೂಡಲೇ ಆ ಕೆಲಸ ಮಾಡಲಾಗುವುದು. 
ಶಿವಯೋಗಿ ವಾಳದ,
ಸೈಟ್‌ ಇಂಜನಿಯರ್‌

ಬಸವರಾಜ ಹೂಗಾರ

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.