“ಕೊಡವ ಸಮಾಜಗಳ ಒಕ್ಕೂಟ ಮೂಲಕವೇ ಕೋವಿ ಹಕ್ಕಿನ ಹೋರಾಟ’
Team Udayavani, Jun 8, 2018, 6:40 AM IST
ಮಡಿಕೇರಿ: ಕೊಡವರ ಕೋವಿ ಹಕ್ಕಿನ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಕೊಡವ ಸಮಾಜಗಳ ಒಕ್ಕೂಟದ ಮೂಲಕವೇ ನ್ಯಾಯಯುತ ಹೋರಾಟ ನಡೆಸಲು ಒಕ್ಕೂಟದ 12 ನೇ ವಾರ್ಷಿಕ ಮಹಾಸಭೆ ನಿರ್ಣಯ ಕೈಗೊಂಡಿದೆ.
ಒಕ್ಕೂಟದ ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆಯು ಬಾಳುಗೋಡುವಿನ ಸಭಾಂಗಣದಲ್ಲಿ ನಡೆಯಿತು.
ಚೇತನ್ ಎಂಬುವವರು ನ್ಯಾಯಾಲಯದಲ್ಲಿ ಕೋವಿ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದಕ್ಕೆ ಸಭೆ ಖಂಡನೆ ಮತ್ತು ವಿಷಾದವನ್ನು ವ್ಯಕ್ತಪಡಿಸಿತು. ಕೋವಿ ಹಕ್ಕಿನ ವಿವಾದವನ್ನು ಸರಿಪಡಿಸಿ ನ್ಯಾಯ ಪಡೆಯಲು ಕಾನೂನು ಹೋರಾಟವನ್ನು ಒಕ್ಕೂಟದ ಮೂಲಕವೇ ನಡೆಸಲು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಒಪ್ಪಿಗೆ ನೀಡಿದರು.
ಮುಂದಿನ ದಿನಗಳಲ್ಲಿ ಕೊಡಗಿಗೆ ಮತ್ತು ಕೊಡವರಿಗೆ ಆಗುವ ಅನ್ಯಾಯದ ವಿರುದ್ಧ ಕೊಡವ ಸಮಾಜಗಳ ಒಕ್ಕೂಟದ ಮೂಲಕ ಹೋರಾಟ ನಡೆಸಲು ಸಭೆ ನಿರ್ಣಯ ಕೈಗೊಂಡಿತು.
ತಲಕಾವೇರಿಯಲ್ಲಿ ಅಷ್ಟಮಂಗಲ
ಜೂ. 18 ಮತ್ತು 19ರಂದು ತಲಕಾವೇರಿಯಲ್ಲಿ ನಡೆಯುವ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಸೂಚಕ ಕಾರ್ಯಕ್ರಮದಲ್ಲಿ ಎಲ್ಲ ಕೊಡವ ಸಮಾಜಗಳ ಪ್ರತಿನಿಧಿಗಳು ಪಾಲ್ಗೊಳ್ಳಬೇಕೆಂದು ಒಕ್ಕೂಟದ ಪ್ರಮುಖರು ಮನವಿ ಮಾಡಿಕೊಂಡರು.
ಮುಂಬರುವ ಸಾಲಿನಲ್ಲಿ ಹರಿಹರ ಮುಕ್ಕಾಟಿರ ಕುಟುಂಬ ನಡೆಸುವ ಕೊಡವ ಹಾಕಿ ಹಬ್ಬ ಸೇರಿದಂತೆ ಎಲ್ಲಾ ಕೊಡವ ಕುಟುಂಬದ ಹಾಕಿ ಹಬ್ಬದ ಆಯೋಜನೆಗೆ ಒಕ್ಕೂಟ ಸಂಪೂರ್ಣ ಸಹಕಾರ ನೀಡಲು ಸಿದ್ಧವಿದೆ ಎಂದು ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಭರವಸೆ ನೀಡಿದರು.ಎಲ್ಲ ಕೊಡವ ಸಮಾಜಗಳ ಸದಸ್ಯರು ಕೊಡವ ಸಮಾಜಗಳ ಒಕ್ಕೂಟದ ಸದಸ್ಯರಾಗಿರುತ್ತಾರೆ ಎಂದು ಅವರು ಇದೇ ಸಂದರ್ಭ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಇಲ್ಲಿಯವರೆಗೆ ನಡೆದ ಒಕ್ಕೂಟದ ಸಾಧನೆ ಹಾಗೂ ಮುಂದಿನ ಕಾರ್ಯ ಸಾಧನೆಗಳ ವಿವರವನ್ನು ನೀಡಲಾಯಿತು.
ಪರಿಸರ ದಿನಾಚರಣೆ
ಸಭೆಗೂ ಮುನ್ನ ಕೊಡವ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಸದಸ್ಯರು ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ವೇದಿಕೆಯಲ್ಲಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಮಂಡೇಡ ರವಿ ಉತ್ತಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೆ.ಎಸ್. ದೇವಯ್ಯ, ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷರಾದ ಮಾಲೇಟಿರ ಅಭಿಮನ್ಯು ಕುಮಾರ್, ಬಾಳೆಲೆ ಕೊಡವ ಸಮಾಜದ ಅಧ್ಯಕ್ಷರಾದ ಮಲಚ್ಚೀರ ಬೋಸ್ ಚಿಟ್ಟಿಯಪ್ಪ, ಜಂಟಿ ಕಾರ್ಯದರ್ಶಿ ಕೋದಂಡ ಸನ್ನು ಉತ್ತಪ್ಪ, ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ, ಖಜಾಂಚಿ ಚೇರಿಯಪಂಡ ಕಶ್ಯಪ್ಪ ಹಾಗೂ ಪೋಷಕ ಸದಸ್ಯರಾದ ಎಂ.ಸಿ. ನಾಣಯ್ಯ, ಮಲ್ಲೆಂಗಡ ದಾದ ಬೆಳ್ಳಿಯಪ್ಪ, ದಾನಿ ಸದಸ್ಯರಾದ ಬೊಟ್ಟೋಳಂಡ ಮಿಟ್ಟು ಚಂಗಪ್ಪ, ಪೊಮ್ಮಕ್ಕಡ ಸಂಘದ ಅಧ್ಯಕ್ಷರಾದ ಚೆರಿಯಪಂಡ ಇಮ್ಮಿ ಉತ್ತಪ್ಪ ಸೇರಿದಂತೆ ಹಲವು ದಾನಿ ಸದಸ್ಯರು, ಕೊಡವ ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಒಕ್ಕೂಟದ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.ಕಳ್ಳಿಚಂಡ ಶಾಲಿನಿ ಕಾರ್ಯಪ್ಪ ಪ್ರಾರ್ಥಿಸಿ, ವಾಟೇರಿರ ಶಂಕರಿ ಪೂವಯ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.