ಲಂಕಾ ಲಾಗ; ಗೆಲುವಿನ ಹಳಿಗೆ ಭಾರತ


Team Udayavani, Jun 8, 2018, 6:00 AM IST

cc-47.jpg

ಕೌಲಾಲಂಪುರ: ವನಿತಾ ಟಿ20 ಏಶ್ಯ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಬುಧವಾರ ಬಾಂಗ್ಲಾದೇಶಕ್ಕೆ ಶರಣಾಗಿದ್ದ ಭಾರತವೀಗ ಗೆಲುವಿನ ಹಳಿ ಏರುವಲ್ಲಿ ಯಶಸ್ವಿಯಾಗಿದೆ. ಗುರುವಾರದ ತನ್ನ 4ನೇ ಪಂದ್ಯದಲ್ಲಿ ಶ್ರೀಲಂಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿ ಕೂಟದ 3ನೇ ಜಯ ದಾಖಲಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ 7 ವಿಕೆಟಿಗೆ ಕೇವಲ 107 ರನ್‌ ಗಳಿಸಿದರೆ, ಭಾರತ 18.5 ಓವರ್‌ಗಳಲ್ಲಿ 3 ವಿಕೆಟಿಗೆ 110 ರನ್‌ ಮಾಡಿ ಗೆದ್ದು ಬಂದಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿಯಿತು. ಭಾರತದಂತೆ ಪಾಕಿಸ್ಥಾನ, ಬಾಂಗ್ಲಾದೇಶ 3 ಜಯದೊಂದಿಗೆ 6 ಅಂಕ ಹೊಂದಿ ದ್ದರೂ ರನ್‌ರೇಟ್‌ನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆಯೇ ಮುಂದಿದೆ. ಅತ್ಯಧಿಕ ಅಂಕ ಸಂಪಾದಿಸಿದ 2 ತಂಡಗಳು ಜೂ. 10ರ ಫೈನಲ್‌ನಲ್ಲಿ ಸೆಣಸಲಿವೆ. ಫೈನಲ್‌ ಪ್ರವೇಶಕ್ಕೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ಶನಿವಾರದ ಅಂತಿಮ ಲೀಗ್‌ ಪಂದ್ಯದಲ್ಲಿ ಪಾಕಿಸ್ಥಾನವನ್ನು ಮಣಿಸುವುದು ಭಾರತಕ್ಕೆ ಅನಿವಾರ್ಯವಾಗಬಹುದು.

ಬಿಗಿ ಬೌಲಿಂಗ್‌, ಫೀಲ್ಡಿಂಗ್‌
ಭಾರತ ತನ್ನ ಸಾಂ ಕ ಬೌಲಿಂಗ್‌ ಹಾಗೂ ಬಿಗಿಯಾದ ಫೀಲ್ಡಿಂಗ್‌ ಮೂಲಕ ಶ್ರೀಲಂಕಾವನ್ನು ಕಟ್ಟಿಹಾಕಿತು. ಆರಂಭಿಕ ಆಟಗಾರ್ತಿ ಯಶೋದಾ ಮೆಂಡಿಸ್‌ (27) ಮತ್ತು 3ನೇ ಕ್ರಮಾಂಕದಲ್ಲಿ ಆಡಲಿಳಿದ ಹಾಸಿನಿ ಪೆರೆರ (46) ಹೊರತುಪಡಿಸಿ ಉಳಿದವರ್ಯಾರೂ ಎರಡಂಕೆಯ ಗಡಿ ಮುಟ್ಟಲಿಲ್ಲ. ಭಾರತದ ಪರ ಏಕ್ತಾ ಬಿಷ್ಟ್ 2 ವಿಕೆಟ್‌ ಕಿತ್ತರೆ, ಜೂಲನ್‌ ಗೋಸ್ವಾಮಿ, ಅನುಜಾ ಪಾಟೀಲ್‌ ಮತ್ತು ಪೂನಂ ಯಾದವ್‌ ಒಂದೊಂದು ವಿಕೆಟ್‌ ಉರುಳಿಸಿದರು. ಲಂಕೆಯ ಇಬ್ಬರು ಆಟಗಾರ್ತಿಯರು ರನೌಟಾದರು.

ಸಣ್ಣ ಮೊತ್ತವನ್ನು ಬೆನ್ನಟ್ಟುವ ಹಾದಿಯಲ್ಲಿ ಭಾರತಕ್ಕೆ ಯಾವುದೇ ತೊಡಕಾಗಲಿಲ್ಲ. ಮಿಥಾಲಿ 23, ಸ್ಮತಿ ಮಂಧನಾ 12, ಹರ್ಮನ್‌ಪ್ರೀತ್‌ ಕೌರ್‌ 24, ವೇದಾ ಕೃಷ್ಣಮೂರ್ತಿ ಔಟಾಗದೆ 29 ಹಾಗೂ ಅನುಜಾ ಪಾಟೀಲ್‌ ಔಟಾಗದೆ 19 ರನ್‌ ಮಾಡಿದರು. ಆಲ್‌ರೌಂಡ್‌ ಪ್ರದರ್ಶನವಿತ್ತ ಅನುಜಾ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು.

ಮಿಥಾಲಿ 2 ಸಾವಿರ ರನ್‌
ಭಾರತದ ಖ್ಯಾತ ಆಟಗಾರ್ತಿ ಮಿಥಾಲಿ ರಾಜ್‌ ಟಿ20 ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ ಪೂರೈಸಿದ್ದಾರೆ. ಏಶ್ಯ ಕಪ್‌ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆ ಅವರು ಈ ದಾಖಲೆ ನಿರ್ಮಿಸಿದರು.  ಇದರೊಂದಿಗೆ ಚುಟುಕು ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ ಪೂರೈಸಿದ ಭಾರತದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ. ವಿಶ್ವ ಮಟ್ಟದಲ್ಲಿ ಈ ಸಾಧನೆಗೈದ 7ನೇ ಆಟಗಾರ್ತಿ. ಇಂಗ್ಲೆಂಡ್‌ನ‌ ಚಾರ್ಲೋಟ್‌ ಎಡ್ವರ್ಡ್ಸ್‌ (2,605 ರನ್‌) ಅಗ್ರಸ್ಥಾನದಲ್ಲಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-20 ಓವರ್‌ಗಳಲ್ಲಿ 7 ವಿಕೆಟಿಗೆ 107 (ಹಾಸಿನಿ 46, ಯಶೋದಾ 27, ಏಕ್ತಾ 20ಕ್ಕೆ 2, ಅನುಜಾ 19ಕ್ಕೆ 1). ಭಾರತ-18.5 ಓವರ್‌ಗಳಲ್ಲಿ 3 ವಿಕೆಟಿಗೆ 110 (ವೇದಾ ಔಟಾಗದೆ 29, ಹರ್ಮನ್‌ಪ್ರೀತ್‌ 24, ಮಿಥಾಲಿ 23, ನೀಲಾಕ್ಷಿ 12ಕ್ಕೆ 1, ಒಶಾದಿ 15ಕ್ಕೆ 1). ಪಂದ್ಯಶ್ರೇಷ್ಠ: ಅನುಜಾ ಪಾಟೀಲ್‌.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

New York: ಜೀನ್ಸ್‌ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್‌ ಆಡಲು ಕಾರ್ಲ್ಸನ್‌ ಸಿದ್ಧ

Blitz Chess: ಜೀನ್ಸ್‌ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್‌ ಆಡಲು ಕಾರ್ಲ್ಸನ್‌ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.