ಕ್ಷೇತ್ರ ಪುನರ್‌ವಿಂಗಡಣೆ, ಮೀಸಲು ಪಟ್ಟಿ ಶೀಘ್ರ ಬಿಡುಗಡೆಗೊಳಿಸಿ


Team Udayavani, Jun 8, 2018, 6:15 AM IST

high-court-karnataka.jpg

ಬೆಂಗಳೂರು: ಅವಧಿ ಪೂರ್ಣಗೊಳ್ಳಲಿರುವ ನೂರಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿಯನ್ನು ಮುಂದಿನ ಐದು ದಿನಗಳಲ್ಲಿ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಕುರಿತು ರಾಜ್ಯಸರ್ಕಾರಕ್ಕೆ ಆದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ, ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು, ವಿಧಾನಸಭಾ ಚುನಾವಣೆಯ ಅಧಿಸೂಚನೆಯ ಬಳಿಕ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ತಯಾರಿಸಲು ವಿಳಂಬವಾಯಿತು. ಹೀಗಾಗಿ, ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಕೋರಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲು ವಿಳಂಬವಾಗುತ್ತಿದೆ ಎಂದು ಹೇಳುತ್ತಿದೆ. ಹೀಗಾಗಿ, ಮುಂದಿನ ವಿಚಾರಣೆ ವೇಳೆಗೆ ಬಾಕಿ ಉಳಿದುಕೊಂಡಿರುವ ಕ್ಷೇತ್ರಗಳ ಪುನರ್  ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಸಿದ್ಧಪಡಿಸಿ ಪ್ರಕಟಿಸಿ ಎಂದು ನಿರ್ದೇಶಿಸಿ ಜೂ.12ಕ್ಕೆ ವಿಚಾರಣೆ ಮುಂದೂಡಿತು.

ರಾಜ್ಯದ 218 ಸ್ಥಳೀಯ ಸಂಸ್ಥೆಗಳ ಪೈಕಿ, ಮೂರು ಪಾಲಿಕೆಗಳು, 29 ನಗರ ಪೌರಾಡಳಿತಗಳು, 56
ಪುರಸಭೆಗಳು, 28 ಪಟ್ಟಣ ಪಂಚಾಯಿತಿಗಳ ಅವಧಿ ಇದೇ ವರ್ಷ ಮೇ ತಿಂಗಳಿನಿಂದ ಹಂತ-ಹಂತವಾಗಿ ಪೂರ್ಣಗೊಳ್ಳಲಿದೆ. ಹೀಗಾಗಿ ಒಟ್ಟು 116 ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದ್ದು, ಆಗಸ್ಟ್‌ 15ರಲ್ಲಿ ಚುನಾವಣಾ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ. ಆದರೆ, ರಾಜ್ಯ ಸರ್ಕಾರ 218 ಸ್ಥಳೀಯ ಸಂಸ್ಥೆಗಳ ಪೈಕಿ 18 ಕ್ಷೇತ್ರ ಪುನರ್‌ ವಿಂಗಡಣೆ ಪಟ್ಟಿ ಹಾಗೂ ಮೀಸಲು ಕ್ಷೇತ್ರ ಪಟ್ಟಿಯನ್ನು ನೀಡಿಲ್ಲ.

ಹೀಗಾಗಿ, ನೂರಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲು ಪಟ್ಟಿ ನೀಡದಿದ್ದರೆ ಅವಧಿ ಪೂರ್ಣಗೊಂಡ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕಾಗಿದ್ದು, ಪುನ: ಚುನಾವಣಾ ಪ್ರಕ್ರಿಯೆ ವಿಳಂಬವಾಗಲಿದೆ. ಅಲ್ಲದೆ, 2019ರಲ್ಲಿ ನಡೆಯಬೇಕಾದ 102 ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಗಳ ಮೇಲೆಯೂ ಪರಿಣಾಮ
ಬೀರಲಿದೆ ಎಂದು ಆಯೋಗ ಅರ್ಜಿಯಲ್ಲಿ ವಿವರಿಸಿದೆ.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.