ವೈದ್ಯಕೀಯ-ಇನ್ನಿತರ ಕೋರ್ಸ್‌ ಆರಂಭ


Team Udayavani, Jun 8, 2018, 9:43 AM IST

gul-1.jpg

ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿ ನಡೆಯುತ್ತಿರುವ ಶರಣಬಸವ ವಿಶ್ವವಿದ್ಯಾಲಯ ಬೃಹದಾಕಾರವಾಗಿ ಬೆಳೆಯುವ ನಿಟ್ಟಿನಲ್ಲಿ ನಗರದ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ಬಳಿ ಇರುವ ಕಲಬುರಗಿ-ಅಫಜಲಪುರ ರಸ್ತೆ ಪಕ್ಕದಲ್ಲಿ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್‌ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ವಿವಿ ಕುಲಾಧಿಪತಿ ಹಾಗೂ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಶರಣಬಸವಪ್ಪ ಅಪ್ಪ ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ವಿವಿಯ ಹೊಸ ಕ್ಯಾಂಪಸ್‌ ನಲ್ಲಿ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯ ಭರದಿಂದ ಸಾಗಿದೆಯಲ್ಲದೇ ವಿವಿಯಲ್ಲಿ ಮುಂದಿನ 2019-2020 ನೇ ಶೈಕ್ಷಣಿಕ ಸಾಲಿನಿಂದ ವೈದ್ಯಕೀಯ ಮತ್ತು ಸಂಯೋಜಿತ ಶಿಕ್ಷಣ ನೀಡಲು ತೀರ್ಮಾನಿಸಿದೆ ಎಂದು ಪ್ರಕಟಿಸಿದರು.

ನೂತನವಾಗಿ ಆರಂಭವಾಗಿರುವ ಶರಣಬಸವ ವಿಶ್ವವಿದ್ಯಾಲಯ ಉನ್ನತ ಶಿಕ್ಷಣದ ಹೊಸ ಮಾರ್ಗಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಸಮಾಜದ ಬೇಡಿಕೆಗಳನ್ನು ಪೂರೈಸಲು ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಹೊಸ ಕೋರ್ಸ್‌ಗಳನ್ನು ಪರಿಚಯಿಸುವುದರೊಂದಿಗೆ ಉತ್ತಮ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಹೊಂದಿದೆ. ವಿವಿಯಲ್ಲಿ ಶಿಕ್ಷಣ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ತನ್ನ ಚಟುವಟಿಕೆಗಳನ್ನು ಆರಂಭಿಸುತ್ತಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ವಿವಿಯು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಎರಡು ಹೊಸ ಕೋರ್ಸಗಳನ್ನು ಪರಿಚಯಿಸುತ್ತಿದೆ ಎಂದು ತಿಳಿಸಿದರು. 

ವಿವಿಯು ಪೂರ್ಣ ಪ್ರಮಾಣದ ವೈದ್ಯಕೀಯ ಕಾಲೇಜು ಸ್ಥಾಪಿಸುವ ಮಹದಾಸೆ ಹೊಂದಿದೆ. ಇದರ ಮೊದಲ ಹೆಜ್ಜೆಯಾಗಿ ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿಯೇ ಪ್ರಪ್ರಥಮವಾಗಿ ಎರಡು ವರ್ಷದ ಸ್ನಾತಕೋತ್ತರ ಪದವಿಯ ಆಸ್ಪತ್ರೆ ಆಡಳಿತ (ಎಂಬಿಐ ಹಾಸ್ಪಿಟಲ್‌ ಅಡ್ಮಿನಿಸ್ಟೆಶನ್‌) ಕೋರ್ಸ್‌ನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಕೋರ್ಸ್‌ ಕೆಲವೇ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ಲಭ್ಯವಿತ್ತು. ಆರಂಭದಲ್ಲಿ 30 ವಿದ್ಯಾರ್ಥಿಗಳೊಂದಿಗೆ ಆಸ್ಪತ್ರೆ ಆಡಳಿತ ಕೋರ್ಸ್‌ನ್ನು ಪ್ರಾರಂಭಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಕೋರ್ಸ್‌ನಿಂದ ಅಪಾರ ಪ್ರಮಾಣದ ಉದ್ಯೋಗ ಅವಕಾಶಗಳು ಭಾರತದ ಮತ್ತು ವಿದೇಶದ ಆಸ್ಪತ್ರೆಗಳಲ್ಲಿ ದೊರಕಲಿವೆ.

ಇದಲ್ಲದೇ ಮುಂದಿನ ಶೈಕ್ಷಣಿಕ ವರ್ಷದಿಂದ 40 ವಿದ್ಯಾರ್ಥಿಗಳೊಂದಿಗೆ ಬ್ಯಾಚುಲರ್‌ ಆಫ್‌ ಆರ್ಕಿಟೆಕ್ಚರ್‌ (ಬಿ.ಆರ್ಕ) ಪದವಿ ಕೋರ್ಸ್‌ನ್ನು ಆರಂಭಿಸುತ್ತಿದೆ. ಈ ಕೋರ್ಸ್‌ನ್ನು ಪ್ರಾರಂಭಿಸಲು ಸಿಒಎಯಿಂದ ಅಗತ್ಯ ಅನುಮೋದನೆ ಪಡೆಯುವಲ್ಲಿ ಬೇಕಾಗುವ ಎಲ್ಲ ತಯಾರಿ ಮಾಡಿಕೊಂಡಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಂತರ ಈ ಕೋರ್ಸ್‌ನ್ನು ಹೊಂದಿದ ಎರಡನೇ ವಿಶ್ವವಿದ್ಯಾಲಯ ಶರಣಬಸವ ವಿಶ್ವವಿದ್ಯಾಲಯವಾಗಿದೆ ಎಂದು ವಿವರಿಸಿದರು.

ಮಹಿಳಾ ಸಬಲೀಕರಣಕ್ಕಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಕಿಕೊಂಡಿರುವ ಸಂಪ್ರದಾಯಗಳನ್ನು ಮುಂದುವರಿಸಲಿದೆ. 

ವಿಶೇಷವಾಗಿ ಇಂಜಿನಿಯರಿಂಗ್‌ ಮತ್ತು ಮ್ಯಾನೇಜಮೆಂಟ್‌ ಕೋರ್ಸಗಳನ್ನು ಆಯ್ಕೆ ಮಾಡಿಕೊಳ್ಳುವ ಮಹಿಳಾ ವಿದ್ಯಾರ್ಥಿಗಳಿಗಾಗಿ ಶರಣಬಸವ ವಿಶ್ವವಿದ್ಯಾಲಯವು ಆಡಳಿತ ಮಂಡಳಿಯ ಸೀಟುಗಳನ್ನು ಸರ್ಕಾರಿ ಕೋಟಾದಲ್ಲಿ ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ. ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಕ್ಷೇತ್ರದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ಪ್ರಾರಂಭಿಸಿ ಕೇವಲ ಹಣ ಗಳಿಕೆಯೇ ತಮ್ಮ ಉದ್ದೇಶ ಎಂದು ಸ್ಥಾಪಿಸಲ್ಪಟ್ಟ ದೇಶದ ಇತರೆ ಖಾಸಗಿ ವಿಶ್ವವಿದ್ಯಾಲಯಗಳಂತಲ್ಲದೇ, ಶರಣಬಸವ ವಿಶ್ವವಿದ್ಯಾಲಯವು ಮಾನವಿಯತೆಯಿಂದ ಸಮಾಜಕ್ಕೆ ಪೂರ್ಣ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸಮಾಜ ವಿಜ್ಞಾನಗಳ ಜೊತೆ ಇಂಜಿನಿಯರಿಂಗ್‌ ಶಿಕ್ಷಣವನ್ನು ಒದಗಿಸುವ ಮಹತ್ವಾಕಾಂಕ್ಷೆ ಹೊಂದಿದೆ ಎಂದರು.

ಕುಲಪತಿಗಳಾದ ಡಾ| ನಿರಂಜನ ನಿಷ್ಟಿ, ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ, ಸಹ ಕುಲಪತಿಗಳಾದ ಪ್ರೊ| ವಿ.ಡಿ. ಮೈತ್ರಿ ಮತ್ತು ಎನ್‌.ಎಸ್‌. ದೇವರಕಲ್‌, ಕುಲಸಚಿವರಾದ ಪ್ರೊ| ಅನಿಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವರಾದ ಡಾ| ಎಸ್‌.ಎಚ್‌. ಹೊನ್ನಳ್ಳಿ, ಡೀನ್‌ ಡಾ| ಲಿಂಗರಾಜ ಶಾಸ್ತ್ರೀ ಹಾಗೂ ಹಣಕಾಸು ಅಧಿಕಾರಿಗಳಾದ ಶಿವಲಿಂಗಪ್ಪ ಅವರು ನಿಗದಿತ ಅವಧಿಯನ್ನು ಮೀರಿ ವಿದ್ಯಾರ್ಥಿಗಳ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. 

ಕಳೆದ ಶೈಕ್ಷಣಿಕ ವರ್ಷದಲ್ಲಿ ಆರಂಭವಾದ ವಿವಿಯು ಮೊದಲ ಹಂತವಾಗಿ ಸ್ನಾತಕೋತ್ತರ ಪದವಿಗಳನ್ನು ಪ್ರಾರಂಭಿಸಿ ತನ್ನ ಕಾರ್ಯ ಚಟುವಟಿಕೆಗಳನ್ನು ಆರಂಭಿಸಿತ್ತು. ಮುಂದಿನ ದಿನಗಳಲ್ಲಿ ಶರಣಬಸವ ವಿಶ್ವವಿದ್ಯಾಲಯದ ಅಡಿಯಲ್ಲಿ ಇಂಜಿನಿಯರಿಂಗ್‌, ಮ್ಯಾನೇಜಮೆಂಟ್‌, ಕಂಪ್ಯೂಟರ್‌ ಅಪ್ಲಿಕೇಶನ್‌ ಸ್ನಾತಕ ಪದವಿ ಕೋರ್ಸ್‌ಗಳಾದ ಬಿ.ಇ, ಬಿಬಿಎಂ, ಬಿಸಿಎ ಆರಂಭಿಸಲು ನಿರ್ಧರಿಸಿದೆ. ಸಧ್ಯ ಸ್ನಾತಕೋತ್ತರ ಪದವಿಯಲ್ಲಿ ಇಂಗ್ಲಿಷ್‌, ಕನ್ನಡ, ಭೌತಶಾಸ್ತ್ರ ಗಣಿತಶಾಸ್ತ್ರ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸಂಗೀತ ಮತ್ತು ಕಲೆ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಕಂಪ್ಯೂಟರ್‌ ನೆಟವರ್ಕ್‌,ಡಿಜಿಟಲ್‌ ಇಲೆಕ್ಟ್ರಾನಿಕ್ಸ್‌, ಡಿಜಿಟಲ್‌ ಕಮ್ಯೂನಿಕೇಶನ್‌, ಸ್ಟ್ರಕ್ಚರಲ್‌ ಇಂಜಿನಿಯರಿಂಗ್‌, ಮಶೀನ್‌ ಡಿಜೈನ್‌, ನ್ಯಾನೊ ಟೆಕ್ನಾಲಜಿ, ಎಂ.ಕಾಂ, ಎಂಬಿಎ, ಮಾಸ್ಟರ್‌ ಆಫ್‌ ಟೂರಿಸಂ, ಮತ್ತು ಇತರೆ ಕೋರ್ಸಗಳು ಕಾರ್ಯ
ನಿರ್ವಹಿಸುತ್ತಿವೆ. ಸಂಶೋಧನೆಯ ಭಾಗವಾಗಿ ನೂತನ ಬೋಧನಾ ವಿಧಾನವನ್ನು ಪರಿಚಯಿಸಲಾಗಿದ್ದು.

ವಿಶ್ವವಿದ್ಯಾಲಯವು ಮೂರು ಗಂಟೆಯ ಬೋಧನಾ ಅವಧಿ  ಪರಿಚಯಿಸಿ ವಿದ್ಯಾರ್ಥಿಗಳು ತರಗತಿಯ ಕೊಠಡಿಯಲ್ಲಿ ಆ ದಿನ ಏನು ಕಲಿತಿದ್ದಾರೆ ಎಂದು ಅರಿಯಲು ಕಲಿತದ್ದನ್ನು ಬರೆಯಿಸುವ ಮೂಲಕ ಬರಹಗಾರಿಕೆಗೆ ಒತ್ತು ನೀಡಲಾಗಿದೆ. ಇದು ದೇಶವ್ಯಾಪಿ ಖ್ಯಾತಿ ಪಡೆಯುವಂತಾಗಿದೆ ಎಂದು ಹೇಳಿದರು.

ಶರಣಬಸವ ವಿಶ್ವವಿದ್ಯಾಲಯವು ಸಂಶೋಧನಾ ಕಾರ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ನಿರ್ಧರಿಸಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಭಾಷೆ, ಮಾನವಿಯತೆ, ಸಮಾಜ ವಿಜ್ಞಾನ, ಇಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ, ವ್ಯವಹಾರ ಅಧ್ಯಯನ, ವಿಜ್ಞಾನ ಹಾಗೂ ಅದರ ಸಂಬಂಧ ವಿಷಯಗಳ ವಿಭಾಗದಲ್ಲಿಯೂ ಸಂಶೋಧನೆಗೆ ಅವಕಾಶ ದೊರೆಯಲಿದೆ ಎಂದು ತಿಳಿಸಿದರು 

ಶೈಕ್ಷಣಿಕವಾಗಿ ಹಿಂದುಳಿದ ಹೈಕ ಪ್ರದೇಶವನ್ನು ಶಿಕ್ಷಣದ ಸಂಕೀರ್ಣವನ್ನಾಗಿ ಪರಿವರ್ತಿಸಿದ್ದ ಶ್ರೇಯಸ್ಸು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘಕ್ಕೆ ಸಲ್ಲುತ್ತದೆ. ಮಾಂಟೇಸ್ಸರಿ ಶಿಕ್ಷಣದಿಂದ ಹಿಡಿದು ಸಂಶೋಧನಾ
ಚಟುವಟಿಕೆಗಳ ವರೆಗೆ ಶಿಕ್ಷಣ ಒದಗಿಸಿ, ನಿರಂತರ ಸರಣಿ ಶಾಲೆ-ಕಾಲೇಜುಗಳನ್ನು ಆರಂಭಿಸಿ ಖಾಸಗಿ ವಿಶ್ವವಿದ್ಯಾಲಯ ಪ್ರಾರಂಭಿಸಿ ಬಾನೆತ್ತರದ ವರೆಗೆ ತನ್ನ ಶೈಕ್ಷಣಿಕ ಕಾರ್ಯ ಮುಂದುವರಿಸಿದೆ. 
ಡಾ| ಶರಣಬಸವಪ್ಪ ಅಪ್ಪಾ, ಕುಲಾಧಿಪತಿಗಳು, ಶರಣಬಸವ ವಿವಿ

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.