ಯುವತಿ ವಿಚಾರಕ್ಕೆ ವಿದ್ಯಾರ್ಥಿಗೆ ಚಾಕು ಇರಿತ


Team Udayavani, Jun 8, 2018, 11:31 AM IST

murder-naif.jpg

ಬೆಂಗಳೂರು: ಎಂಜಿನಿಯರಿಂಗ್‌ ವಿದ್ಯಾರ್ಥಿ ಶಶಾಂಕ್‌ ಮೇಲೆ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮೊಬೈಲ್‌ನಲ್ಲಿದ್ದ ಯುವತಿಯೊಬ್ಬಳ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಘಟನೆ ನಡೆದಿದೆ ಎಂಬುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

ಜೂ.4ರಂದು ಕಾಮಾಕ್ಷಿಪಾಳ್ಯ ನಿವಾಸಿ ಶಶಾಂಕ್‌ ತನ್ನ ಸ್ನೇಹಿತ ಸುಪ್ರೀತ್‌ಗೌಡ ಜತೆ ವಿನಾಯಕ ನಗರದ ಸಮೀಪದ ರುದ್ರಮ್ಮ-ರುದ್ರೇಗೌಡ ಕಲ್ಯಾಣ ಮಂಟಪದ ಬಳಿ ಹೋದಾಗ ಕಮಲನಗರ ನಿವಾಸಿ ಪ್ರಸಾದ್‌ ಹಾಗೂ ಇತರರೊಂದಿಗೆ ಗಲಾಟೆ ತೆಗೆದ ಆರೋಪಿಗಳು ಚಾಕುವಿನಿಂದ ಶಶಾಂಕ್‌ ಬೆನ್ನಿಗೆ ಇರಿದಿದ್ದರು.

ಆದರೆ, ಕೆಳಗೆ ಬಿದ್ದಿದ್ದ ಮೊಬೈಲ್‌ ತೆಗೆದುಕೊಳ್ಳುವಾಗ ಅಪರಿಚಿತರು ಹಲ್ಲೆ ನಡೆಸಿದ್ದರು ಎಂದು ಶಶಾಂಕ್‌ ಕಲಾಸಿಪಾಳ್ಯ ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು. ಆದರೆ, ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಪ್ರಕರಣದ ಹಿಂದಿನ ಸತ್ಯ ಗೊತ್ತಾಗಿದೆ.

ಆಗಿದ್ದೇನು: ಕೆಂಗೇರಿ ಬಳಿಯ ಎಸಿಎಸ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಶಾಂಕ್‌ನ ಸ್ನೇಹಿತ ಸುಪ್ರೀತ್‌ ಗೌಡ ಎಂಬಾತ ಯುವತಿಯೊಬ್ಬಳ ಫೋಟೋವನ್ನು ತನ್ನ ಮೊಬೈಲ್‌ನಲ್ಲಿ ಇಟ್ಟುಕೊಂಡು ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದ. ಇದಕ್ಕೆ ಕಮಲಾನಗರ ನಿವಾಸಿ ಪ್ರಸಾದ್‌ ಆಕ್ಷೇಪ ವ್ಯಕ್ತಪಡಿಸಿದ್ದು, ಕೆಲ ದಿನಗಳ ಹಿಂದೆ ವಿಜಯನಗರದ ಮಾರುತಿ ಮಂದಿರ ಬಳಿ ಸುಪ್ರೀತ್‌ಗೌಡನಿಗೆ ಯುವತಿಯನ್ನು ಬ್ಲಾಕ್‌ವೆುàಲ್‌ ಮಾಡದಂತೆ ಎಚ್ಚರಿಕೆ ನೀಡಿದ್ದ. ಇದರಿಂದ ಇಬ್ಬರು ನಡುವೆ ವೈಷಮ್ಯ ಬೆಳೆದಿತ್ತು.

ಈ ಮಧ್ಯೆ ಸುಪ್ರೀತ್‌ಗೌಡಗೆ ಕರೆ ಮಾಡಿದ್ದ ಪ್ರಸಾದ್‌, ರಾಜಿ ಮಾಡಿಕೊಳ್ಳುವ ಕುರಿತು ಮಾತನಾಡಲು ಕಾಮಾಕ್ಷಿಪಾಳ್ಯದ ವಿನಾಯಕನಗರಕ್ಕೆ ಬರುವಂತೆ ಹೇಳಿದ್ದ. ಅದರಂತೆ ಸುಪ್ರೀತ್‌ಗೌಡ ತನ್ನ ಸ್ನೇಹಿತ ಶಶಾಂಕ್‌ನನ್ನು ಮಾತುಕತೆಗೆ ಕರೆದೊಯ್ದಿದ್ದ. ಈ ವೇಳೆ ಮಾತುಕತೆ ಸಂದರ್ಭದಲ್ಲಿ ಯುವತಿಯ ಫೋಟೋ ಇದ್ದ ಮೊಬೈಲ್‌ ನೀಡುವಂತೆ ಪ್ರಸಾದ್‌ ಕೇಳಿದಾಗ ಸುಪ್ರೀತ್‌ಗೌಡ ನಿರಾಕರಿಸಿದ್ದ. ಇದರಿಂದ ಮತ್ತೆ ಪ್ರಸಾದ್‌ ಮತ್ತು ಸುಪ್ರೀತ್‌ ಮಧ್ಯೆ ಮಾತಿನ ಚಕಮಕಿಯಾಗಿ ಕೈ ಮಿಲಾಯಿಸುವ ಹಂತ ತಲುಪಿತು.

ಒಂದು ಹಂತದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತೆರಳಿ ಪ್ರಸಾದ್‌ ತನ್ನ ಬಳಿಯಿದ್ದ ಬಟನ್‌ ಚಾಕುವಿನಿಂದ ಸುಪ್ರೀತ್‌ಗೌಡನ ಮೇಲೆ ಹಲ್ಲೆಗೆ ಮುಂದಾದ. ಈ ವೇಳೆ ಸುಪ್ರೀತ್‌ಗೌಡ ತಪ್ಪಿಸಿಕೊಂಡಿದ್ದು, ಚಾಕು ಜತೆಗಿದ್ದ ಶಶಾಂಕ್‌ ಬೆನ್ನಿಗೆ ನುಗ್ಗಿತ್ತು. ಇದರಿಂದ ತೀವ್ರ ರಕ್ತಸ್ರಾವವಾಗಿ ಕೆಳಗೆ ಬಿದ್ದ ಶಶಾಂಕ್‌ನನ್ನು ಕಾಮಾಕ್ಷಿಪಾಳ್ಯದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಪ್ರಕರಣ ಸಂಬಂಧ ಆರೋಪಿ ಪ್ರಸಾದ್‌ನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ವೇಳೆ ಯುವತಿಯ  ಫೋಟೋ ವಿಚಾರವಾಗಿ ಗಲಾಟೆ ನಡೆದ ಬಗ್ಗೆ ಹೇಳಿಕೆ ನೀಡಿದ್ದಾನೆ. ಮತ್ತೂಂದೆಡೆ ಸುಪ್ರೀತ್‌ಗೌಡ ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಕಾಮಾಕ್ಷಿಪಾಳ್ಯ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.