ಪದವೀಧರ, ಶಿಕ್ಷಕ ಕ್ಷೇತ್ರದಲ್ಲೂ ಆಮಿಷದ ಆರೋಪ

Team Udayavani, Jun 8, 2018, 11:32 AM IST

padvidhara.jpg

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಕ ಹಾಗೂ ಪದವೀಧರರು ನಿರಂತರವಾಗಿ ಬಿಜೆಪಿ ಬೆಂಬಲಿಸುತ್ತಾ ಬಂದಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಈ ಬಾರಿ ಶಿಕ್ಷಕರು, ಪದವೀಧರರಿಗೂ ಆಮಿಷ ಒಡ್ಡುವ ಮೂಲಕ ಈ ಕ್ಷೇತ್ರಗಳ ಚುನಾವಣೆಯನ್ನು ಭ್ರಷ್ಟಗೊಳಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಬೋಜೇಗೌಡ ಪರವಾಗಿ ಕೊಡಗಿನಲ್ಲಿ ಶಿಕ್ಷಕರೊಬ್ಬರಿಗೆ ಹಣ ಹಂಚುತ್ತಿದ್ದ ಪ್ರಾಂಶುಪಾಲ ಧರ್ಮಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಮೈತ್ರಿ ಸರ್ಕಾರವು ಶಿಕ್ಷಕ ಕ್ಷೇತ್ರದ ಚುನಾವಣೆಯನ್ನು ಭ್ರಷ್ಟಗೊಳಿಸಲು ಯತ್ನಿಸಿರುವುದು ಸಾಬೀತಾಗಿದೆ ಎಂದು ಹೇಳಿದರು.

ಆಯೋಗ ಕ್ರಮ ಕೈಗೊಳ್ಳಬೇಕು: ಬೋಜೇಗೌಡ ಅವರು ಮತದಾರರಿಗೆ ನಾನಾ ರೀತಿಯ ಆಮಿಷ ಒಡ್ಡುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಲು, ಭ್ರಷ್ಟಗೊಳಿಸಲು ಜೆಡಿಎಸ್‌ ಕೆಳಮಟ್ಟಕ್ಕಿಳಿದಿದೆ. ಒಂದೆಡೆ ಆರ್ಥಿಕ ಸ್ಥಿತಿ ಸುಧಾರಣೆಗೆ ಆಡಳಿತದಲ್ಲಿ ಮಿತವ್ಯಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಾರೆ.

ಆದರೆ ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಮಿಷವೊಡ್ಡಿ ಭ್ರಷ್ಟಗೊಳಿಸುತ್ತಿದ್ದಾರೆ. ಚುನಾವಣಾ ಆಯೋಗ ಕೂಡಲೇ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜನರಿಂದ ತಿರಸ್ಕೃತವಾದ ಕಾಂಗ್ರೆಸ್‌ ಹಿಂಬಾಗಿಲ ಮೂಲಕ ಅಧಿಕಾರ ಹಿಡಿದಿದ್ದು, ಇದಕ್ಕೆ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಮತದಾರರು ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

ಉಚಿತ ಬಸ್‌ಪಾಸ್‌ ನೀಡಬೇಕು: ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವುದನ್ನು ಸ್ಥಗಿತಗೊಳಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ನೀಡಿಕೆಯಲ್ಲೂ ಜಾತಿ ಆಧಾರದ ಮೇಲೆ ತಾರತಮ್ಯ ಮಾಡುವುದು ಖಂಡನೀಯ.

ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾತಿ ಆಧಾರಿತವಾಗಿ ಆಯ್ದ ವರ್ಗದ ವಿದ್ಯಾರ್ಥಿಗಳಿಗೆ ಪ್ರವಾಸ ವ್ಯವಸ್ಥೆ ಕಲ್ಪಿಸಿತ್ತು. ಇದೀಗ ಉಚಿತ ಬಸ್‌ಪಾಸ್‌ನಲ್ಲೂ ಜಾತಿ ತರಲಾಗಿದೆ. ಕೂಡಲೇ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ 20 ದಿನಗಳಿಂದ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈವರೆಗೆ ಅವರ ಕುಟುಂಬದವರಿಗೆ ಸರ್ಕಾರ ಸ್ಪಂದಿಸಿಲ್ಲ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು. ಜನ, ಜಾನುವಾರು ಪ್ರಾಣಹಾನಿ, ಆಸ್ತಿಪಾಸ್ತಿಗೆ ನಷ್ಟವಾಗಿ ಜನ ತೀವ್ರ ತೊಂದರೆ ಅನುಭವಿಸಿದರು.

ಸಿಡಿಲು ಬಡಿದು ಪಂಚಾಯ್ತಿ ಸದಸ್ಯರೊಬ್ಬರು ನಿಧನರಾದರು. ಆದರೂ, ನೊಂದವರಿಗೆ ಸಾಂತ್ವನ ಹೇಳಲಿಲ್ಲ. ಅಧಿಕಾರಿಗಳು ಸಹ ಸ್ಪಂದಿಸಲಿಲ್ಲ. ಇದು ಸರ್ಕಾರದ ತಾರತಮ್ಯದ ಆಡಳಿತ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಭಾರತಿ ಶೆಟ್ಟಿ, ಸಹ ವಕ್ತಾರ ಎ.ಎಚ್‌.ಆನಂದ್‌ ಇತರರು ಉಪಸ್ಥಿತರಿದ್ದರು.

ಬಿಜೆಪಿ ತಲೆಗೆ ಕಟ್ಟುವ ಯತ್ನ: ಉಡುಪಿಯಲ್ಲಿ ಇತ್ತೀಚೆಗೆ ನಡೆದ ದನದ ವ್ಯಾಪಾರಿ ಸಾವಿನ ಪ್ರಕರಣವನ್ನು ಬಿಜೆಪಿಯ ತಲೆಗೆ ಕಟ್ಟುವ ಪ್ರಯತ್ನ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯು ಸಮಾಜದ ವಾತಾವರಣ ಕಲುಷಿತಗೊಳಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿ ಎಂದು ಕಾಯುತ್ತಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯ ಹಟ್ಟಿಗಳಲ್ಲಿನ ದನಗಳನ್ನು ಕದ್ದು ಸಾಗಿಸಲಾಗುತ್ತಿದೆ. ಇದು ವಸ್ತುಸ್ಥಿತಿ ತೋರಿಸುತ್ತದೆ ಎಂದು ಹೇಳಿದರು.

ಉಡುಪಿಯಲ್ಲಿ ಇತ್ತೀಚೆಗೆ ಸ್ಕಾರ್ಪಿಯೋ ವಾಹನದಲ್ಲಿ 14 ದನಗಳನ್ನು ತುಂಬಿ ಸಾಗಿಸಲಾಗುತ್ತಿತ್ತು. ಆಗ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಗಾಬರಿಯಿಂದ ವಾಹನವನ್ನು ಹಿಮ್ಮುಖವಾಗಿ ಚಲಿಸುವಾಗ ಅಪಘಾತ ಸಂಭವಿಸಿತ್ತು. ಒಳಗಿದ್ದ ಮೂರು ಮಂದಿ ಪರಾರಿಯಾದರು. ಹುಸೈನಬ್ಬ ಸೆರೆ ಸಿಕ್ಕರು. ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದರು.

ಆಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಸಾಧ್ಯತೆ ಇದೆ. ಹಾಗಿದ್ದರೂ ಸಾವಿನ ಪ್ರಕರಣವನ್ನು ಬಿಜೆಪಿಯ ತಲೆಗೆ ಕಟ್ಟುವ ಕೆಲಸ ನಡೆಯುತ್ತಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ ಅನುಸರಿಸಿದ ಹಾದಿಯಲ್ಲೇ ಕುಮಾರಸ್ವಾಮಿಯವರು ಸಾಗುತ್ತಿದ್ದಾರೆ. ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಹಾಗೆಯೇ ದನಗಳ ಕಳವು ತಡೆಗೆ ಕೈಗೊಂಡಿರುವ ಕ್ರಮವೇನು ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.