ಸಿಎಂ ಭೇಟಿಯಾದ ಫ್ರಾನ್ಸ್ ನಿಯೋಗ
Team Udayavani, Jun 8, 2018, 11:32 AM IST
ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಲು ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಬಂಡವಾಳ ಹೂಡುವ ಬಗ್ಗೆ ತಮ್ಮನ್ನು ಭೇಟಿ ಮಾಡಿದ ಫ್ರಾನ್ಸ್ ದೇಶದ ರಾಯಭಾರಿ ಎಚ್.ಇ ಅಲೆಗ್ಸಾಂಡರ್ ಝೈಗ್ಲರ್ ಮತ್ತು ಕಾನ್ಸುಲ್ ಜನರಲ್ ಆಫ್ ಫ್ರಾನ್ಸ್ ಫ್ರಾನ್ಸಿ ಕೋಯ್ಸ ಗಾಟಿಯರ್ ಅವರೊಂದಿಗೆ ಚರ್ಚೆ ನಡೆಸಿದರು.
ಈಗಾಗಲೇ ಫ್ರಾನ್ಸ್ನೊಂದಿಗೆ ಬೆಂಗಳೂರು ಮಹಾನಗರ ಪಾಲಿಕೆ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಂಡಿದೆ. ಬೆಂಗಳೂರು ಸಂಪೂರ್ಣ ಕಸ ಮುಕ್ತ ನಗರವನ್ನಾಗಿಸಲು ಆದ್ಯತೆಯ ಮೇಲೆ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಏರೋನಾಟಿಕಲ್ ಮತ್ತು ಕೈಗಾರಿಕೆಗೆ ಸಂಬಂಧಿಸಿದಂತೆ ಬಂಡವಾಳ ಹೂಡಲು ಹೆಚ್ಚು ಅವಕಾಶಗಳಿವೆ.
ಬಂಡವಾಳ ಹೂಡಿಕೆದಾರರು ಬಂದರೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದರು. ಬೆಂಗಳೂರಿನ ಹವಾಮಾನ ಕೈಗಾರಿಕೆ ಸ್ಥಾಪನೆಗೆ ಸಹಕಾರಿಯಾಗಿದೆ. ಬೆಂಗಳೂರಿನ ಐಐಎಸ್ಸಿಗೆ ಭೇಟಿ ನೀಡಿದ್ದೇವೆ. ಕರ್ನಾಟಕದಲ್ಲಿ ಜ್ಞಾನಾಧಾರಿತ ಸಂಸ್ಥೆಗಳನ್ನು ಸ್ಥಾಪಿಸಲು ಅನುಕೂಲಕಾರಿಯಾಗಿದೆ. ಈ ಕುರಿತು ನಮ್ಮ ದೇಶದ ಸಂಬಂಧಿಸಿದವರ ಜೊತೆ ಚರ್ಚಿಸುತ್ತೇವೆ ಎಂದು ಫ್ರಾನ್ಸ್ ರಾಯಭಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.