ಕಾಲಾ ಚಿತ್ರಕ್ಕೆ ಸಿಗಲಿಲ್ಲ ಬಿಡುಗಡೆ ಭಾಗ್ಯ


Team Udayavani, Jun 8, 2018, 1:38 PM IST

m5-kaaa.jpg

ಮೈಸೂರು: ನಟ ರಜನಿಕಾಂತ್‌ ಅಭಿನಯದ “ಕಾಲಾ’ ಚಿತ್ರ ಬಿಡುಗಡೆಗೆ ಕನ್ನಡಪರ ಸಂಘಟನೆಗಳ ವ್ಯಾಪಕ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಗುರುವಾರ ನಗರದ ಯಾವುದೇ ಚಿತ್ರಮಂದಿಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿಲ್ಲ. 

ಕಾವೇರಿ ನದಿ ನೀರು ಹಂಚಿಕೆ ಕುರಿತು ನಟ ರಜನಿಕಾಂತ್‌ ಅವರ ವಿವಾದಾತ್ಮಕ ಹೇಳಿಕೆಗೆ ಆಕ್ರೋಶಗೊಂಡಿರುವ ಕನ್ನಡಪರ ಸಂಘಟನೆಗಳಿಂದ ಕಾಲಾ ಚಿತ್ರ ಬಿಡುಗಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ನಡುವೆ ನಗರದ ಕೆಲವು ಚಿತ್ರಮಂದಿಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಗುರುವಾರ ಬೆಳಗ್ಗೆ ಕಾಲಾ ಚಿತ್ರ ಬಿಡುಗಡೆಯಾಗಬೇಕಿತ್ತು.

ಆದರೆ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಾಗೂ ವಿರೋಧದಿಂದ ಹಿನ್ನೆಲೆಯಲ್ಲಿ ಎಚ್ಚೆತ್ತ ನಗರದ ಮಲ್ಟಿಫ್ಲೆಕ್ಸ್‌ಗಳು ಹಾಗೂ ಚಿತ್ರಮಂದಿರಗಳ ಮಾಲೀಕರು ಕಾಲಾ ಚಿತ್ರ ಬಿಡುಗಡೆಗೆ ಆಸಕ್ತಿ ತೋರಲಿಲ್ಲ. ಹೀಗಾಗಿ ನಗರದ ಮಲ್ಟಿಪ್ಲೆಕ್ಸ್‌ ಹಾಗೂ ಚಿತ್ರಮಂದಿರಗಳಲ್ಲಿ ಬೆಳಗ್ಗಿನ ಪ್ರದರ್ಶನ ರದ್ದುಗೊಂಡಿತು. 

ಮ್ಯಾಟನಿ ಶೋ ಆರಂಭ: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಬೆಳಗ್ಗಿನ ಪ್ರದರ್ಶನ ರದ್ದುಗೊಳಿಸಿದ್ದ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಮಧ್ಯಾಹ್ನ ಹೊತ್ತಿಗೆ ಪ್ರದರ್ಶನ ಆರಂಭಗೊಂಡಿತು. ಹೀಗಾಗಿ ಪೊಲೀಸ್‌ ಬಿಗಿ ಭದ್ರತೆಯೊಂದಿಗೆ ಮಧ್ಯಾಹ್ನದ ಬಳಿಕ ನಗರದ ಎಂ.ಜಿ.ರಸ್ತೆಯಲ್ಲಿರುವ ಮಾಲ್‌ ಆಫ್ ಮೈಸೂರ್‌ನಲ್ಲಿರುವ ಐನಾಕ್ಸ್‌ ಮತ್ತು ಜಯಲಕ್ಷ್ಮಿಪುರಂನಲ್ಲಿರುವ ಡಿಆರ್‌ಸಿ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಕಾಲಾ ಚಿತ್ರ ಪ್ರದರ್ಶನಗೊಂಡಿತು.

ಆ ಮೂಲಕ ಮಧ್ಯಾಹ್ನದಿಂದ ರಾತ್ರಿವರೆಗಿನ ಒಟ್ಟು ಮೂರು ಶೋಗಳಲ್ಲಿ ಕಾಲಾ ಚಿತ್ರ ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನ ಕಂಡಿತು. ಚಿತ್ರ ಪ್ರದರ್ಶನಕ್ಕೆ ಯಾವುದಾದರೂ ಸಂಘಟನೆಗಳು ಪ್ರತಿಭಟನೆ ನಡೆಸುವ ಮೂಲಕ ಅಡ್ಡಿಪಡಲಿವೆ ಎಂಬ ಕಾರಣಕ್ಕೆ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದ ಮಾಲೀಕರು, ಪೋಲಿಸರ ರಕ್ಷಣೆಯಲ್ಲಿ ಚಿತ್ರಪ್ರದರ್ಶನ ಆರಂಭಿಸಿದರು. 

ಟಾಪ್ ನ್ಯೂಸ್

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.