ಪ್ರಣಾಳಿಕೆ ಭರವಸೆ ಹಂತ-ಹಂತವಾಗಿ ಈಡೇರಿಕೆ: ಸಿದ್ದು
Team Udayavani, Jun 8, 2018, 5:23 PM IST
ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಡಿಮೆ ಸ್ಥಾನ ಪಡೆದ ಬಳಿಕ ನನ್ನನ್ನು ಸೈಡ್‌ಲೈನ್ ಮಾಡಲಾಗಿದೆ ಎಂಬ ಟೀಕೆ ತಪ್ಪು. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ನಾನೇ ಆಗಿದ್ದೇನೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕನೂ ನಾನೇ ಇದ್ದೇನೆ. ಹೀಗಾಗಿ ನಾನು ಹೇಗೆ ಪಕ್ಷದಲ್ಲಿ ನಿರ್ಲಕ್ಷ್ಯಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಪ್ರಶ್ನಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಗುರುವಾರ ಬಾದಾಮಿಗೆ ಆಗಮಿಸಿದ ಅವರು ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಚಿವರಾದವರೂ ಆಪ್ತರೇ: ನನ್ನ ಪರಮಾಪ್ತರಿಗೆ ಸಚಿವ ಸ್ಥಾನ ಕೊಡದೇ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಸಚಿವರಾದವರೂ ನನ್ನ ಪರಮಾಪ್ತರು. ಮೊದಲು ಸಚಿವರಿದ್ದವರೂ ನನ್ನ ಆಪ್ತರು. ಸಚಿವ ಸಂಪುಟ ರಚನೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸದ್ಯ 27 ಜನರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಇನ್ನೂ 6 ಸ್ಥಾನ ಖಾಲಿ ಇವೆ. ಸೂಕ್ತರಿಗೆ ಸ್ಥಾನಮಾನ ದೊರೆಯಲಿದೆ ಎಂದರು. ಜಿಲ್ಲಾವಾರು ಪ್ರಾತಿನಿಧ್ಯ ವಿಷಯದಲ್ಲಿ ಹಲವು ಜಿಲ್ಲೆ ಕಡೆಣಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಪಕ್ಷದ 6 ಹಾಗೂ ಜೆಡಿಎಸ್‌ನ 1 ಸ್ಥಾನ ಕಾಯ್ದಿರಿಸಲಾಗಿದೆ. ಇನ್ನೊಮ್ಮೆ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಆಗ ಇನ್ನುಳಿದ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲಾಗುವುದು.
ಎರಡೂ ಪಕ್ಷಗಳ ಭರವಸೆ ಈಡೇರಿಕೆ: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದಿಂದ ನಾವು ಪ್ರಣಾಳಿಕೆ ನೀಡಿದ್ದೆವು. ಜೆಡಿಎಸ್ ಕೂಡ ಹಲವು ಭರವಸೆ ನೀಡಿತ್ತು. ಕೋಮುವಾದ ಸರ್ಕಾರ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ನಾವಿಬ್ಬರೂ ಕೂಡಿ ಸರ್ಕಾರ ರಚಿಸಿದ್ದೇವೆ. ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಲಿದ್ದೇವೆ. ರಾಜ್ಯದಲ್ಲಿ ಐದು ವರ್ಷ ಹಲವು
ಅತ್ಯುತ್ತಮ ಯೋಜನೆಯನ್ನು ಕೊಟ್ಟಿದ್ದೇವೆ. ಅವು ಇನ್ನು ಮುಂದೆಯೂ ಮುಂದುವರಿಯುತ್ತವೆ ಎಂದರು.
ಅಪ್ಪ- ಮಕ್ಕಳ ಪಕ್ಷದಿಂದ ಕಾಂಗ್ರೆಸ್‌ನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 133 ವರ್ಷಗಳ ಇತಿಹಾಸವಿದೆ. ಬಿಜೆಪಿ ದೂರ ಇಡುವ ಒಂದೇ ಉದ್ದೇಶದಿಂದ ಜೆಡಿಎಸ್ ಜತೆಗೆ ಸರ್ಕಾರ ಮಾಡಿದ್ದೇವೆ. ಸುದೀರ್ಘ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಯಾರು-ಏನೂ ಮಾಡಲಾಗುವುದಿಲ್ಲ ಎಂಹೇಳಿದರು. ಬಾಗಲಕೋಟೆ ಜಿಲ್ಲೆಯಿಂದ ಸದ್ಯ ನಾನೋಬ್ಬನೇ ಶಾಸಕನಿದ್ದೇನೆ. ಜಮಖಂಡಿ ಶಾಸಕರಾಗಿದ್ದ ಸಿದ್ದು ನ್ಯಾಮಗೌಡ ಅವರನ್ನು ಕಳೆದುಕೊಂಡಿದ್ದೇವೆ. ಈ ನೋವು ನಮಗೆ ಮಾಸಿಲ್ಲ. ನಾನು ಸಮನ್ವಯ ಸಮಿತಿ ಅಧ್ಯಕ್ಷನಾಗಿದ್ದು ಸಚಿವನಾಗಲು ಬರಲ್ಲ. ಶೀಘ್ರವೇ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕವಾಗಲಿದೆ ಎಂದು ಹೇಳಿದರು.
ಮುಸ್ಲಿಂರು ದೇಶದ ಪ್ರಜೆಗಳಲ್ವಾ
ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಕುರಿತು ಪರೋಕ್ಷವಾಗಿ ಟಾಂಗ್ ನೀಡಿದ ಅವರು, ಮುಸ್ಲಿಂರು ದೇಶದ ಪ್ರಜೆಗಳು ಅಲ್ವಾ? ಅವರ ಬಗ್ಗೆ ಅಷ್ಟೊಂದು ದ್ವೇಷ ಸಾಧಿಸುವುದು ರಾಜಕಾರಣವೇ? ಪಕ್ಷಪಾತ, ಜಾತಿ-ಭೇದ ಇಲ್ಲದೇ ಕೆಲಸ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿ, ಮುಸ್ಲಿಂರ ಬಗ್ಗೆ ಈ ರೀತಿ ಹೇಳುವುದು ಎಷ್ಟು ಸರಿ. ಬಿಜೆಪಿಯ ಯತ್ನಾಳ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಂತೆ ಕೀಳು ಮಟ್ಟದ ರಾಜಕೀಯ ನಾನು ಮಾಡಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.