ಜನರಲ್ಲಿ ಯೋಗ ಅರಿವು ಮೂಡಿಸಿ
Team Udayavani, Jun 8, 2018, 5:23 PM IST
ಶಿವಮೊಗ್ಗ: ಯೋಗ ದಿನಾಚರಣೆ ಸಂದರ್ಭದಲ್ಲಿ ಯುವ ಜನರು ಯೋಗದ ಬಗ್ಗೆ ಹೆಚ್ಚಿನ ಒಲವು ಮೂಡಿಸುವಂತಹ
ಕಾರ್ಯಕ್ರಮ ರೂಪಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ
ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಜೂ. 21ರಂದು ನಗರದ ನೆಹರು
ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾತ್ರವಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಅಂದು ಬೆಳಗ್ಗೆ 7ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಆರಂಭದಲ್ಲಿ ಸಾಮೂಹಿಕ ಯೋಗ ಪ್ರದರ್ಶನ, ನಂತರ
ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9ಗಂಟೆಗೆ ಯೋಗ ನಡಿಗೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು
ತಿಳಿಸಿದರು.
ಯೋಗ ನಡಿಗೆ ನೆಹರು ಒಳಾಂಗಣ ಕ್ರೀಡಾಂಗಣದಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿ ಕಚೇರಿ, ಕೋರ್ಟ್ ಸರ್ಕಲ್,
ಸರ್ಕಾರಿ ನೌಕರರ ಭವನ ಮೂಲಕ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸೇರಲಿದೆ. ಈ ಸಂದರ್ಭದಲ್ಲಿ ಯೋಗದ ಬಗ್ಗೆ ಜನಸಾಮಾನ್ಯರಲ್ಲಿ ಆಸಕ್ತಿ ಮೂಡುವಂತಹ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳಿದರು. ವೇದಿಕೆ ಕಾರ್ಯಕ್ರಮದ ಸಂದರ್ಭದಲ್ಲಿ ಒತ್ತಡ ನಿವಾರಣ ತಂತ್ರ, ಆರೋಗ್ಯದ ಬಗ್ಗೆ ವಿಶೇಷ ಉಪನ್ಯಾಸ ಆಯೋಜಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಯುರ್ವೇದ ಮಹಾವಿದ್ಯಾಲಯ, ವಿವಿಧ ಸಂಘ ಸಂಸ್ಥೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಹಕಾರದಿಂದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಹರ್ಷ ಪುತ್ತುರಾಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.