ತಾತ್ಕಾಲಿಕ ಸಂಪರ್ಕ ರಸ್ತೆಯಿಂದ ನೆರೆ ಸೃಷ್ಟಿ
Team Udayavani, Jun 9, 2018, 6:15 AM IST
ಅಜೆಕಾರು: ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಡೆಬೆಟ್ಟು ಪರಿಸರದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಅಪೂರ್ಣವಾಗಿ ಸ್ಥಳೀಯರು ಸಂಕಷ್ಟಕ್ಕೆ ಈಡಾಗಿದ್ದಾರೆ.
ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ ತಾತ್ಕಾಲಿಕ ಸಂಪರ್ಕ ರಸ್ತೆ ನದಿಗೆ ಅಡ್ಡವಾಗಿರುವುದರಿಂದ ಕೃತಕ ನೆರೆ ಸೃಷ್ಟಿಯಾಗಿ ನದಿ ನೀರು ಕೃಷಿ ಭೂಮಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.
ನದಿ ಸಮೀಪದ ಸಾದು ಪೂಜಾರಿಯವರ ಅಡಿಕೆ ತೋಟಕ್ಕೆ ನೀರು ನುಗ್ಗಿ ಅಡಿಕೆ ಗಿಡಗಳು ಹಾನಿಗೀಡಾಗಿದ್ದರೆ ಇದೇ ಪರಿಸರದ ಜಯಂತ ಶೆಟ್ಟಿಯವರ ಅಡಿಕೆ ತೋಟಕ್ಕೆ ನೀರು ನುಗ್ಗಿ ಕೆಸರು ಮಣ್ಣು ತೋಟದಲ್ಲಿ ತುಂಬಿ ಹೋಗಿದೆ. ಜತೆಗೆ ತೋಟದ ಸಮೀಪದ ಮಣ್ಣು ಕೃತಕ ನೆರೆಯಿಂದ ಕುಸಿಯುತ್ತಿದ್ದು ಅಡಿಕೆ ಮರಗಳು ನೆಲಕ್ಕುರುಳುವ ಸಂಭವ ಹೆಚ್ಚಾಗಿದೆ.
ವಿದ್ಯುತ್ ಕಂಬ ತೆರವು
ಹೊಸದಾಗಿ ನಿರ್ಮಾಣವಾಗುವ ಸೇತುವೆ ಬಳಿಯಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಹೊಸ ಕಂಬ ಅಳವಡಿಸುವಂತೆ ಕಂದಾಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಹ ಹೊಸ ಕಂಬ ಅಳವಡಿಸಿರಲಿಲ್ಲ. ಆದರೆ ಜೂ. 8ರಂದು ಸುರಿದ ಭಾರೀ ಮಳೆಗೆ ಅಪಾಯಕಾರಿ ಕಂಬವು ನೆಲಕ್ಕುರುಳಿದ ಪರಿಣಾಮ ಎಚ್ಚೆತ್ತ ಮೆಸ್ಕಾಂ ಅಧಿಕಾರಿಗಳು ಕಂಬವನ್ನು ತೆರವುಗೊಳಿಸಿ ಹೊಸ ಕಂಬ ಅಳವಡಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ತಾತ್ಕಾಲಿಕ ಸಂಪರ್ಕ ರಸ್ತೆ ತೆರವು
ಹಲವು ದಶಕಗಳಿಂದ ತೂಗು ಸೇತುವೆಯ ಸಂಕಷ್ಟದಿಂದ ಬಳಲುತ್ತಿದ್ದ ಸ್ಥಳೀಯರು ಹೊಸ ಸೇತುವೆಗೆ ಮನವಿ ಮಾಡುತ್ತಾ ಬಂದಿದ್ದರು. ಸ್ಥಳೀಯರ ಮನವಿಗೆ ಸ್ಪಂದಿಸಿದ ಶಾಸಕ ಸುನಿಲ್ ಕುಮಾರ್ ಹೊಸ ಸೇತುವೆಗೆ ಹಾಗೂ ರಸ್ತೆಗೆ 3.90 ಕೋಟಿ ರೂ. ಅನುದಾನ ಒದಗಿಸಿದ್ದರು. ಆದರೆ ಕಾಮಗಾರಿ ವಿಳಂಬವಾದ ಕಾರಣ ಈ ಮಳೆಗಾಲದಲ್ಲಿಯೂ ಸ್ಥಳೀಯರು ಸಂಕಷ್ಟಪಡಬೇಕಾಗಿದೆ.
ಸೇತುವೆಯ ಕಾಮಗಾರಿ ಪ್ರಾರಂಭಗೊಂಡ ಸಂದರ್ಭದಲ್ಲಿ ಸಂಪರ್ಕಕ್ಕಾಗಿ ತಾತ್ಕಾಲಿಕವಾಗಿ ಮಣ್ಣಿನಿಂದ ನದಿಯ ನಡುವೆ ಸಂಪರ್ಕ ರಸ್ತೆ ಮಾಡಿಕೊಡಲಾಗಿತ್ತು. ಈಗ ಮಳೆಗಾಲ ಪ್ರಾರಂಭವಾಗಿದ್ದು ನದಿ ನೀರಿನ ಹರಿವು ಹೆಚ್ಚಾದ ಪರಿಣಾಮ ತಾತ್ಕಾಲಿಕ ರಸ್ತೆಯನ್ನು ತೆರವುಗೊಳಿಸಿ ನದಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗಿದೆ. ಹೀಗಾಗಿ ಸ್ಥಳೀಯರು ಸಂಚರಿಸಲು ಸುತ್ತು ಬಳಸಿ ಕೋಲಿಬೆಟ್ಟು ರಸ್ತೆಯಾಗಿ ತೆರಳಬೇಕಾಗಿದೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಇದು ತೀವ್ರ ಸಂಕಷ್ಟ ತಂದೊಡ್ಡಿದೆ.
ಕೂಡಲೇ ಸ್ಪಂದನೆ
ಕೃತಕ ನೆರೆ ಸೃಷ್ಟಿಯಾಗುವುದನ್ನು ಮನಗಂಡ ಪಂಚಾಯತ್ ಆಡಳಿತ ಕೂಡಲೇ ಸ್ಪಂದಿಸಿ ತಾತ್ಕಾಲಿಕ ರಸ್ತೆಯನ್ನು ತೆರವುಗೊಳಿಸಿ ನೀರು ಹರಿದುಹೋಗುವಂತೆ ಮಾಡಲಾಗಿದೆ.
– ಆನಂದ ಬಿ.ಕೆ.,ಶಿರ್ಲಾಲು ಪಿಡಿಒ
ಕಾಲಾವಕಾಶವಿದೆ
ಗುತ್ತಿಗೆದಾರರಿಗೆ ಮುಂದಿನ ನವೆಂಬರ್ ತಿಂಗಳವರೆಗೆ ಕಾಲಾವಕಾಶವಿರುವುದರಿಂದ ಕಾಮಗಾರಿ ಪೂರ್ಣಗೊಂಡಿಲ್ಲ.
– ರಮಾನಂದ ಪೂಜಾರಿ,
ಶಿರ್ಲಾಲು ಗ್ರಾ.ಪಂ. ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
Karkala: ಬೈಕ್ ಢಿಕ್ಕಿ; ಗಾಯ
ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
By Election: ಮೂರೂ ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.