ಉತ್ತರ, ಮಲೆನಾಡಲ್ಲಿ ಉತ್ತಮ ಮಳೆ; ಇನ್ನೂ 5 ದಿನ ಭಾರೀ ಮಳೆ 

Team Udayavani, Jun 9, 2018, 6:00 AM IST

ban09061801medn-revised.jpg

ಬೆಂಗಳೂರು: ರಾಜಧಾನಿ ಬೆಂಗಳೂರು, ಹಾಸನ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಬೀದರ್‌ ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಅಬ್ಬರಿಸುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಅಲ್ಲದೆ, ಮುಂದಿನ ಐದು ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡು, ಕೊಡಗಿನ ಹಲವೆಡೆ ಉತ್ತಮ ಮಳೆಯಾಗಿದ್ದು, ತುಂಗಾ, ಭದ್ರಾ, ನೇತ್ರಾವತಿ, ಶರಾವತಿ, ಅಘನಾಶಿನಿ, ಕಾವೇರಿ ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಅಲ್ಲದೆ, ಭಾರೀ ಮಳೆಯಾಗಬಹುದು ಎಂಬ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ಶನಿವಾರವೂ ಉಭಯ ಜಿಲ್ಲೆಗಳ ವ್ಯಾಪ್ತಿಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕುಂದಾಪುರ ತಾಲೂಕಿನ ಹಲವೆಡೆ ಮರಗಳು ಧರಾಶಾಹಿಯಾಗಿದ್ದು, ಹಲವೆಡೆ ಮನೆಗಳು ಹಾನಿಗೊಳಗಾಗಿವೆ. ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ರಸ್ತೆಗಳಲ್ಲಿ ನೀರು ತುಂಬಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಬೈಂದೂರು ಬಳಿ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ಕೊಂಡಿ ಒತ್ತಿನೆಣೆ ಗುಡ್ಡದ ತಳಭಾಗ ಬಿರುಕು ಬಿಟ್ಟಿದ್ದು, ಗುಡ್ಡ ಕುಸಿಯುವ ಅಪಾಯ ಎದುರಾಗಿದೆ.

ಮೂಡಿಗೆರೆ, ಶೃಂಗೇರಿ, ಕೊಪ್ಪ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡು ಭಾಗದ ನದಿಗಳಾದ ತುಂಗಾ, ಭದ್ರಾದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಹಳ್ಳ, ಕೊಳ್ಳ, ಕೆರೆಗಳು ತುಂಬಿ ಹರಿಯುತ್ತಿವೆ. ಬೀದರ್‌, ಗದಗ, ಗುಳೇದಗುಡ್ಡ, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ರಾಜ್ಯದ ಇತರೆಡೆಯೂ ಮಳೆಯಾದ ವರದಿಯಾಗಿದೆ.

ಉಡುಪಿಯಲ್ಲಿ 210 ಮಿ.ಮೀ. ಮಳೆ
ಹವಾಮಾನ ಇಲಾಖೆಯ ಮೂಲಗಳ ಪ್ರಕಾರ, ಉಡುಪಿಯ ಸಿದ್ದಾಪುರದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಅತ್ಯಧಿಕ 210 ಮಿ.ಮೀ. ಮಳೆ ದಾಖಲಾಗಿದೆ. ಕೊಲ್ಲೂರಿನಲ್ಲಿ 180 ಮಿ.ಮೀ., ಶಿವಮೊಗ್ಗದ ಆಗುಂಬೆ 170, ಚಿಕ್ಕಮಗಳೂರಿನ ಕೊಟ್ಟಿಗೆಹಾರ 160, ಹೊನ್ನಾವರ 150, ದಕ್ಷಿಣ ಕನ್ನಡದ ಮುಲ್ಕಿ, ಮಾಣಿ, ಕಲಬುರಗಿಯ ಖಜೂರಿ ಮತ್ತು ಕೊಡಗಿನ ಭಾಗಮಂಡಲ 140, ಪಣಂಬೂರು ಹಾಗೂ ಪುತ್ತೂರು 130, ಸುಳ್ಯ, ಮೂಡಬಿದರೆ, ಗೇರುಸೊಪ್ಪ 120, ಧರ್ಮಸ್ಥಳ 110, ಆಳಂದ, ಮಡಿಕೇರಿ 100, ಸುಬ್ರಮಣ್ಯ, ಶೃಂಗೇರಿ 90, ಕುಮಟಾ, ತಾಳಗುಪ್ಪ 80, ನಾಪೋಕ್ಲು, ಲಿಂಗನಮಕ್ಕಿ, ಕಮ್ಮರಡಿ 70 ಮಿ.ಮೀ. ಮಳೆ ಆಗಿದೆ.

ಭಾರೀ ಮಳೆ ಮುನ್ಸೂಚನೆ:
ಮುಂಗಾರು ಮಾರುತಗಳು ರಾಜ್ಯಾದ್ಯಂತ ವ್ಯಾಪಿಸಿವೆ. ಈ ಮಧ್ಯೆ ಬಂಗಾಳ ಕೊಲ್ಲಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತ ಕಂಡು ಬರಲಿದೆ. ಮುಂದಿನ 48 ಗಂಟೆಗಳಲ್ಲಿ ಇದರ ತೀವ್ರತೆ ಮತ್ತಷ್ಟು ಹೆಚ್ಚುವ ಲಕ್ಷಣಗಳಿವೆ. ಹಾಗಾಗಿ, ಜೂನ್‌ 12ರವರೆಗೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ “ಕಡಿಮೆ ಒತ್ತಡದ ತಗ್ಗು’ (ಟ್ರಫ್) ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್‌. ಪಾಟೀಲ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಉತ್ತರ ಒಳನಾಡಿನಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜೂನ್‌ 10 ಮತ್ತು 11ರಂದು ಬಹುಭಾಗಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಇದರ ಅಬ್ಬರ ಕಡಿಮೆ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ ಎಂದರು.

ಮುಂದಿನ ಐದು ದಿನಗಳಲ್ಲಿ ಕರಾವಳಿಯಲ್ಲಿ 70ರಿಂದ 130 ಮಿ.ಮೀ.ವರೆಗೂ ಹಾಗೂ ಆಯ್ದ ಭಾಗಗಳಲ್ಲಿ 240 ಮಿ.ಮೀ. ಮಳೆ ಆಗುವ ನಿರೀಕ್ಷೆ ಇದೆ. ಘಟ್ಟಪ್ರದೇಶಗಳಲ್ಲೂ ಭಾರಿ ಮಳೆ ಆಗಲಿದೆ. ಈಗಾಗಲೇ ಒಟ್ಟಾರೆ ರಾಜ್ಯದ ಶೇ. 75 ಭಾಗದಲ್ಲಿ ಮುಂಗಾರು ಮಳೆ ವ್ಯಾಪಿಸಿದೆ ಎಂದು ಸಿ.ಎಸ್‌. ಪಾಟೀಲ ತಿಳಿಸಿದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.