ಭಿಕ್ಷಾಟನೆಗೆ ಬಳಸುತ್ತಿದ್ದ ಅಶಕ್ತ ಮಕ್ಕಳ ರಕ್ಷಣೆ
Team Udayavani, Jun 10, 2018, 11:03 AM IST
ಕಲಬುರಗಿ: ಅಶಕ್ತತೆಯಿಂದ ಬಳಲುತ್ತಿದ್ದ ಮಕ್ಕಳನ್ನು ಭಿಕ್ಷಾಟನೆಗೆ ಬಳಸಲಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿ, ಅವರನ್ನು ರಕ್ಷಿಸಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾನ್ ಬಾಸ್ಕೋ ಸಂಸ್ಥೆ, ಚೈಲ್ಡ್‌ಲೈನ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಭಿಕ್ಷಾಟನೆಗೆ ಬಳಕೆ ಮಾಡುತ್ತಿದ್ದ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದರು. ನಂತರ ನಗರದ ಸರ್ಕಾರಿ ಆಸ್ಪತ್ರೆಗೆ ಇಬ್ಬರನ್ನು ಚಿಕಿತ್ಸೆಗಾಗಿ ದಾಖಲಿಸಲಾಯಿತು, ಉಳಿದಿಬ್ಬರನ್ನು ಬಾಲಕರ ಬಾಲಮಂದಿರಕ್ಕೆ ಸೇರಿಸಲಾಯಿತು.
ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಶರಣಬಸವೇಶ್ವರ ದೇವಸ್ಥಾನ, ಖಾಜಾ ಬಂದೇ ನವಾಜ್ ದರ್ಗಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಕ್ಕಳು ಭಿಕ್ಷಾಟನೆ ಮಾಡುತ್ತಿದ್ದರು.
ಉತ್ತರ ಪ್ರದೇಶ ಮೂಲದ ಇಬ್ಬರು ಮಹಿಳೆಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಈ ಮಕ್ಕಳನ್ನು ಇಟ್ಟುಕೊಂಡು, ಇನ್ನಿಬ್ಬರೂ ಮಕ್ಕಳ ಮೂಲಕ ಭಿಕ್ಷಾಟನೆ ಮಾಡಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು.
ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ಪ್ರಕರಣ ಗಂಭೀರವಾಗಿ ಪರಿಗಣಿಸಿ ಸೂಕ್ತ
ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಕ್ಕಳ ಹಕ್ಕುಗಳ ಹೋರಾಟಗಾರ ವಿಠಲ ಚಿಕಣಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.