ಮುಂಗಾರು ಪ್ರವೇಶಿಸಿದರೂ ತೋಡುಗಳ ಹೂಳೆತ್ತಲಿಲ್ಲ !
Team Udayavani, Jun 11, 2018, 6:15 AM IST
ತೆಕ್ಕಟ್ಟೆ: ಮುಂಗಾರು ಆಗಮನ ಇನ್ನೇನು ಶುರು ಎಂದರೂ ತೆಕ್ಕಟ್ಟೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆ ಮಾತ್ರ ನಡೆದೇ ಇಲ್ಲ.
ರಾ.ಹೆ.66 ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದೆ ಆದರೂ ಕೂಡಾ ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಒಳ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂಧ ನೀರು ಪ್ರಮುಖ ರಸ್ತೆಗೆ, ತಾತ್ಕಾಲಿಕ ಬಸ್ ತಂಗುದಾಣ ಹಾಗೂ ಕೃಷಿ ಭೂಮಿಗಳಿಗೆ ನುಗ್ಗುವ ಸಾಧ್ಯತೆಗಳಿವೆ.
ಎಲ್ಲೆಲ್ಲಿ ಸಮಸ್ಯೆ?
ಹೆದ್ದಾರಿಯ ಬಳಿಯ ಗ್ರಾ.ಪಂ. ಬಳಿ ಭಾರಿ ಪ್ರಮಾಣದಲ್ಲಿ ಹರಿದು ಬರುವ ಮಳೆ ನೀರು ನೇರವಾಗಿ ಬಂದು ತೆಕ್ಕಟ್ಟೆ ಪ್ರಮುಖ ಭಾಗದಲ್ಲಿರುವ ಬಸ್ ತಂಗುದಾಣವನ್ನು ಆವರಿಸುತ್ತಿದೆ. ಮಲ್ಯಾಡಿ ಒಳ ರಸ್ತೆಗೆ ಅಳವಡಿಸಿರುವ ಸಿಮೆಂಟ್ ಪೈಪ್‌ಗ್ಳು ಕಿರಿದಾಗಿದ್ದು ಹೂಳು ತುಂಬಿಕೊಂಡಿದೆ. ಪರಿಣಾಮ ವಾಗಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ತೆಕ್ಕಟ್ಟೆ ಕೊಮೆ ಇತ್ತೀಚೆಗಷ್ಟೆ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಹೆದ್ದಾರಿಯಿಂದ ಸುಮಾರು 300 ಮೀ. ಒಳಗೆ ಎರಡೂ ಬದಿ ಒಳ ಚರಂಡಿ ನಿರ್ಮಿಸಲಾಗಿದೆಯಾದರೂ ಕೃಷಿ ಭೂಮಿಗಳು ಇರುವ ಭಾಗದಲ್ಲಿ ಈ ಕಾರ್ಯ ಆಗಿಲ್ಲ. ಪರಿಣಾಮ ಹೆದ್ದಾರಿಯಿಂದ ಬಂದ ನೀರು ಕೃಷಿ ಭೂಮಿಗೆ ನುಗ್ಗುವ ಸಾಧ್ಯತೆ ಇದೆ.
ಕೃತಕ ನೆರೆಯ ಭೀತಿ
ಗ್ರಾಮದ ಪ್ರಮುಖ ಭಾಗದಲ್ಲಿ ರುವ ಅಂಗಡಿ ಮುಂಗಟ್ಟು ಗಳ ಎದುರು ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿದು ಹೋಗಲು ಅವಕಾಶವಿಲ್ಲ. ಇದರಿಂದ ಕೃತಕ ನೆರೆ ಸೃಷ್ಟಿಯಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೂ ನಡೆದಾಡಲು ಸಾಧ್ಯವಾಗದೇ ಹೆದ್ದಾರಿಯಲ್ಲೇ ನಡೆಯಬೇಕಾದ ಕಷ್ಟವಿದೆ.
ಸಮಸ್ಯೆ ಬಗ್ಗೆ ಗಮನಹರಿಸಲು ಸೂಚನೆ
ಮುಂಗಾರು ಆರಂಭದ ಪೂರ್ವದಲ್ಲಿಯೇ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೆಳೆದು ನಿಂತ ಗಿಡಗಂಟಿಗಳ ತೆರವು ಕಾರ್ಯ ಹಾಗೂ ಒಳ ಚರಂಡಿ ಸಮಸ್ಯೆಗಳಿರುವ ಕಡೆ ಗಮನಹರಸಿ ಪರಿಹಾರ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ.
– ವೀರಶೇಖರ್, ತೆಕ್ಕಟ್ಟೆ ಪಿಡಿಒ
ಕ್ರಮ ಅಗತ್ಯ
ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆ ಇನ್ನೂ ಆರಂಭಗೊಂಡಿಲ್ಲ .ರಾ.ಹೆ.66 ರಿಂದ ಬರುವ ಅಪಾರ ಪ್ರಮಾಣದ ನೀರು ಕೃಷಿ ಭೂಮಿಯನ್ನು ಆವರಿಸುವ ಸಾಧ್ಯತೆ ಇದೆ. ತೋಡುಗಳ ಹೂಳೆತ್ತುವ ಬಗ್ಗೆ ಸಂಬಂಧಪಟ್ಟ ಸ್ಥಳೀಯಾಡಳಿತ ಕ್ರಮ ಕೈಗೊಳ್ಳಬೇಕಾಗಿದೆ.
– ವಿಟಲ್ ದೇವಾಡಿಗ, ತೆಕ್ಕಟ್ಟೆ ಕೃಷಿಕರು.
– ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.