ಮಳೆಗೆ ಕೃಷ್ಣಾ, ಮಲಪ್ರಭಾ ಒಡಲು ಭರ್ತಿ
Team Udayavani, Jun 11, 2018, 6:05 AM IST
ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ.
ಗಾಳಿ, ಮಳೆಗೆ ಹಲವೆಡೆ ಮರಗಳು ಧರೆಗುರುಳಿದ್ದು, ಅಪಾರ ನಷ್ಟ ಉಂಟಾಗಿದೆ. ಇನ್ನೂ ಎರಡು-ಮೂರು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ದಿನವಿಡಿ ಮಳೆ ಹನಿಯಿತು. ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ
ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಜಿಲ್ಲಾಧಿಕಾರಿ ಮನೆಯ ಮೇಲೆ ಮರಗಳು ಉರುಳಿ ಬಿದ್ದಿದ್ದು, ಜಿಲ್ಲಾಧಿಕಾರಿ ಕಾವಲು ಸಿಬ್ಬಂದಿಯ ಕೋಣೆ ಸಂಪೂರ್ಣ ಜಖಂಗೊಂಡಿದೆ.
ಜಿಲ್ಲಾಧಿಕಾರಿ ನಿವಾಸಕ್ಕೂ ಹಾನಿಯಾಗಿದೆ. ಸಂಗಮದಲ್ಲಿರುವ ಕೇಶಮುಂಡನ ಸ್ಥಳ ಮತ್ತು ಬಟ್ಟೆ ಬದಲಿಸುವ ಕಟ್ಟಡ, ಮೂರ್ನಾಡು ಬಲಮುರಿಯ ಹಳೆಯ ಸೇತುವೆ ಜಲಾವೃತವಾಗಿದೆ. ವಿರಾಜಪೇಟೆ ತಾಲೂಕಿನ ಹಲವೆಡೆ ಗುಡ್ಡ ಕುಸಿತ ಉಂಟಾಗಿದೆ. ಮಳೆ ಹಿನ್ನೆಲೆಯಲ್ಲಿ ಜಿಲ್ಲಾವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ 10 ಕ್ರೆಸ್ಟ್‌ಗೇಟ್ ತೆರೆದು ಸುಮಾರು 13 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ.
ಗಾಜನೂರಿನ ಜಲಾಶಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ತುಂಗಾ, ಭದ್ರಾ ನದಿಯಲ್ಲಿ ಕೂಡ ನೀರಿನ ಮಟ್ಟ ಏರುತ್ತಿದ್ದು, ನದಿ ಪಾತ್ರದಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ತುಂಗಾ ಜಲಾಶಯ ಸಮೀಪದ ಮಂಡಗದ್ದೆ ಪಕ್ಷಿಧಾಮದಲ್ಲಿ ವಿದೇಶಿ ಬಾನಾಡಿಗಳು ಅಪಾಯಕ್ಕೆ ಸಿಲುಕಿವೆ. ಶರಾವತಿ ನದಿ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ 9384 ಕ್ಯೂಸೆಕ್ ಒಳಹರಿವಿದೆ. ಜಲಾಶಯದ ಮಟ್ಟ 1753.05 ಅಡಿಗೆ ತಲುಪಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಶನಿವಾರ ರಾತ್ರಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಭಾನುವಾರ ಬೆಳಗ್ಗೆವರೆಗೂ ನೂರಾರು ವಾಹನಗಳು ರಸ್ತೆಯಲ್ಲಿಯೇ ನಿಲ್ಲುವಂತಾಯಿತು.
ಉತ್ತರ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಕೃಷ್ಣಾ ಹಾಗೂ ಮಲಪ್ರಭಾ ನದಿಯ ಒಡಲು ತುಂಬಿಕೊಂಡು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ನಾರಾಯಣಪುರ ಜಲಾಶಯದ ಹಿನ್ನೀರಿನ ಕೃಷ್ಣಾ ಹಾಗೂ ಮಲಪ್ರಭಾ ನದಿಯ
ಒಡಲು ಸಂಪೂರ್ಣ ತುಂಬಿಕೊಂಡಿದೆ. ಹೀಗಾಗಿ, ಕೂಡಲಸಂಗಮಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ನದಿಯಲ್ಲಿ ಸ್ನಾನ ಮಾಡಿ, ದೇವರ ದರ್ಶನ ಪಡೆದು, ದೋಣಿ ಸಂಚಾರ ಮಾಡುತ್ತಿದ್ದಾರೆ. ಇದೇ ವೇಳೆ, ವಾಡಿ,ಚಿಂಚೋಳಿ, ಚಿತ್ರದುರ್ಗ, ಶಿರಸಿ, ಸಿದ್ದಾಪುರ,ಯಲ್ಲಾಪುರ, ಸಾಗರ ಸೇರಿದಂತೆ ರಾಜ್ಯದ
ಇತರೆಡೆಯೂ ಮಳೆಯಾದ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.