ಕಿನಾರೆಯ “ಕೋಳಿ’ ಹಾಡು ಬಂತು
Team Udayavani, Jun 11, 2018, 10:52 AM IST
“ಭರ್ಜರಿ’ ಚಿತ್ರದ ನಂತರ ಧ್ರುವ ಸರ್ಜಾ ಅವರ ಹೊಸ ಸಿನಿಮಾದ ಸುದ್ದಿಗಳು ಓಡಾಡುತ್ತಲೇ ಇದ್ದವು. ಈ ನಡುವೆ ಅವರು “ಪೊಗರು’ ಮಾಡುತ್ತಾರೆಂಬ ಸುದ್ದಿಯೂ ಬಂತು. ಇದು ಅವರ ಸಿನಿಮಾ ಸುದ್ದಿಗಳಾದರೆ, “ಭರ್ಜರಿ’ ನಂತರ ಧ್ರುವ ಸರ್ಜಾ ಅದೆಷ್ಟೋ ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಡಿಯೋ ಬಿಡುಗಡೆ, ಟೀಸರ್ ಬಿಡುಗಡೆ ಮಾಡಿ, ಹೊಸಬರಿಗೆ ಬೆನ್ನು ಪ್ರೋತ್ಸಾಹಿಸಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಕಿನಾರೆ’.
“ಕಿನಾರೆ’ ಎಂಬ ಹೊಸಬರ ಸಿನಿಮಾವೊಂದು ತಯಾರಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಚಿತ್ರೀಕರಣ ಮುಗಿಸಿದ್ದು, ಬಿಡುಗಡೆಯ ಹಂತಕ್ಕೆ ಬಂದಿದೆ. ದೇವರಾಜ್ ಪೂಜಾರಿ ಈ ಸಿನಿಮಾದ ನಿರ್ದೇಶಕರು. ಈಗ ಚಿತ್ರದ ಹಾಡೊಂದನ್ನು ಧ್ರುವ ಸರ್ಜಾ ಬಿಡುಗಡೆ ಮಾಡಿದ್ದಾರೆ. ದೇವರಾಜ್ ಪೂಜಾರಿ ಬರೆದಿರುವ “ಹೋಯ್ತಲ್ಲೋ ಕೋಳಿ ಓಡಿ ಹೋಯ್ತಲ್ಲೋ …’ ಎಂಬ ಹಾಡನ್ನು ಧ್ರುವ ಸರ್ಜಾ ಬಿಡುಗಡೆ ಮಾಡಿದ್ದಾರೆ.
ಈ ಮೂಲಕ ಹಾಡುಗಳ ಬಿಡುಗಡೆಗೆ ಧ್ರುವ ಚಾಲನೆ ನೀಡಿದ್ದಾರೆ. ಚಂದನ್ ಶೆಟ್ಟಿ ಹಾಡಿರುವ ಈ ಹಾಡು ಡ್ಯಾನ್ಸ್ ನಂಬರ್ ಆಗಿದ್ದು, ಈಗಾಗಲೇ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಜೂನ್ ತಿಂಗಳು ಪೂರ್ತಿ ವಾರಕ್ಕೊಂದರಂತೆ ಒಬ್ಬೊಬ್ಬರಿಂದ ಹಾಡುಗಳನ್ನು ಬಿಡುಗಡೆ ಮಾಡಿಸುವ ಯೋಚನೆ ಕೂಡಾ ಚಿತ್ರತಂಡಕ್ಕಿದೆ.
ಬಿ.ಆರ್.ಸುರೇಂದ್ರನಾಥ್ ಸಂಗೀತ ಚಿತ್ರಕ್ಕಿದ್ದು, ರೆಡ್ ಆ್ಯಪಲ್ ಮತ್ತು ಅದಿತಿ ಫಿಲಂಸ್ ಬ್ಯಾನರ್ನಡಿ ತಯಾರಾಗಿರುವ ಈ ಸಿನಿಮಾ ಜುಲೈನಲ್ಲಿ ತೆರೆಕಾಣಲಿದೆ. ಸತೀಶ್ ರಾಜ್, ಗೌತಮಿ ಜಾದವ್ ಚಿತ್ರದ ನಾಯಕ- ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಕರಾವಳಿ ಸುತ್ತಮುತ್ತ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.