ಹಿಂದುಳಿದವರ ಸಬಲೀಕರಣಕ್ಕೆ ಸಹಕಾರಿಯಾಗಿ: ಸ್ವಾಮೀಜಿ

Team Udayavani, Jun 11, 2018, 5:34 PM IST

11-june-21.jpg

ಹುಬ್ಬಳ್ಳಿ: ಸಾಮಾಜಿಕ ನ್ಯಾಯದಿಂದ ಹಿಂದುಳಿದವರ, ಪೌರ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಹಂತಕ್ಕೆ ಅವರನ್ನು ಆರ್ಥಿಕ ಸಬಲರನ್ನಾಗಿ
ಮಾಡುವ ಕಾರ್ಯ ಸಹಕಾರಿ ಸಂಘದಿಂದ ಆಗಲಿ ಎಂದು ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು. ಇಲ್ಲಿನ ಜೆ.ಸಿ. ನಗರದ ಅಕ್ಕನಬಳಗ ಸಭಾಂಗಣದಲ್ಲಿ ನಡೆದ ಪ್ರೊ| ಬಿ. ಕೃಷ್ಣಪ್ಪ ಕ್ರೆಡಿಟ್‌ ಕೋ-ಆಪ್‌ ಸೊಸೈಟಿ ಪೌರ ಕಾರ್ಮಿಕರ ನೂತನ ಸಹಕಾರಿ ಸಂಘಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೌರ ಕಾರ್ಮಿಕರನ್ನು ಆರ್ಥಿಕವಾಗಿ ಸಬಲಗೊಳಿಸಿ ಅವರ ಕುಟುಂಬ ನಿರ್ವಹಣೆ ಸುಧಾರಿಸುವ ನಿಟ್ಟಿನಲ್ಲಿ ಸಹಕಾರಿ ಸಂಘ ಶ್ರಮ ವಹಿಸಬೇಕು. ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡುವಂತಾಗಬೇಕು. ಶ್ರೀ ಧರ್ಮಸ್ಥಳ ಸಹಕಾರಿ ಸಂಘಗಳ ಮಾದರಿಯಲ್ಲಿ ಉಳಿತಾಯ ಮಾಡಬೇಕು ಎಂದರು.

ಸಫಾಯಿ ಕರ್ಮಚಾರಿ ಕಾವಲು ಸಮಿತಿ ರಾಜ್ಯ ಅಧ್ಯಕ್ಷ ಕೆ.ಬಿ. ಓಬಳೇಶ ಮಾತನಾಡಿ, ಗುಜರಾತಿನಲ್ಲಿ ಎಲ್ಲಾ ಸಮುದಾಯಗಳು ಸಹಕಾರಿ ಸಂಘಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸಬಲರಾಗಿದ್ದಾರೆ. ಸಹಕಾರಿ ಸಂಘಗಳಲ್ಲಿ ಮರುಪಾವತಿ ಪ್ರಮುಖವಾಗಿದ್ದು, ಪ್ರತಿಯೊಬ್ಬ ಪೌರ ಕಾರ್ಮಿಕರು ಪಡೆದ ಸಾಲವನ್ನು ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಹೇಳಿದರು.

ದಲಿತ ಹೋರಾಟಗಾರ ಪಿತಾಂಬ್ರಪ್ಪ ಬಿಳಾರ ಮಾತನಾಡಿ, ಉಳಿತಾಯದ ಮೂಲಕ ಪೈ ಎಂಬುವರು ಕೆನರಾ ಬ್ಯಾಂಕ್‌ ಸ್ಥಾಪಿಸಿದರು. ಇಂದು ಅದು ರಾಷ್ಟ್ರೀಕೃತ ಬ್ಯಾಂಕ್‌ ಆಗಿ ಪರಿವರ್ತನೆಯಾಗಿರುವುದು ದೊಡ್ಡ ಸಾಧನೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಸಹಕಾರಿ ಸಂಘವನ್ನು ಮುಂದುವರಿಸಬೇಕಾಗಿದೆ. ಪೌರ ಕಾರ್ಮಿಕರು ಹೆಚ್ಚು ಬಡ್ಡಿಗೆ ಸಾಲ ಪಡೆಯದೆ ತಮ್ಮದೇ ಸಹಕಾರಿ ಸಂಘದಲ್ಲಿ ಅವಶ್ಯತೆಗೆ ತಕ್ಕಂತೆ ಮಾತ್ರ ಸಾಲ ಪಡೆದು ಮರುಪಾವತಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದರು. ನ್ಯಾಶನಲ್‌ ಸ್ಕೂಲ್‌ನ ಡಾ| ಚಂದ್ರಶೇಖರ ಹಾಗೂ ಪೌರ ಕಾರ್ಮಿಕರ ಹೋರಾಟಗಾರ ವಿಜಯ ಗುಂಟ್ರಾಳ ಮಾತನಾಡಿದರು. ಸೋಮು ಮೊರಬದ, ಚಂದ್ರಶೇಖರ ಖಾನಾಪುರ, ಶರಣಪ್ಪ ಅಮರಾವತಿ, ಗಂಗಮ್ಮ ಸಿದ್ರಾಂಪುರ, ಕಸ್ತೂರೆವ್ವ ಬೆಂಗುಂದಿ, ಕನಕಪ್ಪ ಕೊಟಬಾಗಿ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.