ರೈತರಿಗೆ ಪರಿಹಾರ ಚೆಕ್ ವಿತರಣೆ
Team Udayavani, Jun 12, 2018, 9:16 AM IST
ಸುರಪುರ: ಸಿಡಿಲು ಬಡಿದು ಅಸುನೀಗಿದ್ದ ಜಾನುವಾರಗಳ ಮಾಲೀಕರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಶಾಸಕ ರಾಜುಗೌಡ 1.20 ಲಕ್ಷ ರೂ. ಮೊತ್ತದ ಪರಿಹಾರ ಧನದ ಚೆಕ್ ವಿತರಿಸಿದರು.
ಇಲ್ಲಿಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ತಲಾ 30 ಸಾವಿರ ರೂಪಾಯಿಯಂತೆ ನಾಲ್ಕು ಜನರಿಗೆ ಚೆಕ್ ವಿತರಿಸಿ ಅವರು ಮಾತನಾಡಿ, ಈ ಪರಿಹಾರದ ಹಣವನ್ನು ವ್ಯರ್ಥವಾಗಿ ಖರ್ಚು ಮಾಡದೆ ಸದುಪಯೋಗ ಮಾಡಿಕೊಳ್ಳಬೇಕು. ಜಾನುವಾರಗಳನ್ನು ಖರೀದಿಸಿ ಕೃಷಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಹಾರ ಧನದ ಚೆಕ್‌ಗಳನ್ನು ಶೆಳ್ಳಗಿ ಗ್ರಾಮದ ಚಂದ್ರಶೇಖರ ಲಗಶೆಟ್ಟಿ, ಯಕ್ತಾಪುರ ಗ್ರಾಮದ ಗುತ್ತಪ್ಪ ಕಂಠೆಪ್ಪ, ಕೊಡೇಕಲ್ ಗ್ರಾಮದ ಶಂಕ್ರಪ್ಪ ಲಚ್ಚಪ್ಪ, ಜಮಾಲುಪುರ ತಾಂಡಾದ ಗೋಪಿಚಂದ್ ಟಾಕರೆಪ್ಪ ಚವ್ಹಾಣ
ಇವರಿಗೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.
ತಹಶೀಲ್ದಾರ್ ಸುರೇಶ ಅಂಕಲಗಿ, ಹುಣಸಗಿ ತಹಶೀಲ್ದಾರ್ ಸುರೇಶ ಚವಲ್ಕರ್, ಗ್ರೇಡ್-2 ತಹಶೀಲ್ದಾರ್ ಸೊಫಿಯಾ
ಸುಲ್ತಾನ್, ಜಿಪಂ ಮಾಜಿ ಅಧ್ಯಕ್ಷ ಯಲ್ಲಪ್ಪ ಕುರುಕುಂದಿ, ವಕೀಲರಾದ ರಾಮನಗೌಡ ಸುಬೇದಾರ್, ಶಿರಸ್ತೇದಾರ್ ಶರಣಬಸವ, ವಿ.ಎ. ಸೋಮಶೇಖರ ಪತ್ತಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.