ಮಳೆ-ಗಾಳಿಗೆ ಹಾನಿ; ಬಾಧಿತರಿಗೆ ಶೀಘ್ರ ಪರಿಹಾರ

Team Udayavani, Jun 12, 2018, 9:39 AM IST

ray-1.jpg

ರಾಯಚೂರು: ಕಳೆದ ತಿಂಗಳು ಬೀಸಿದ ಭಾರೀ ಬಿರುಗಾಳಿಗೆ ಸಾಕಷ್ಟು ಮನೆಗಳು ಜಖಂಗೊಂಡಿದ್ದು, ಏಪ್ರಿಲ್‌ನಲ್ಲಿ ಸುರಿದ ಆಲಿಕಲ್ಲು ಮಳೆಗೆ ಭತ್ತ, ಮಾವು ಬೆಳೆ ಹಾನಿಯಾಗಿದೆ. ಈ ಕುರಿತು ಜಿಲ್ಲಾಡಳಿತ ಸಮೀಕ್ಷೆ ನಡೆಸಿದ್ದು, ಸಂತ್ರಸ್ತರಿಗೆ ಶೀಘ್ರದಲ್ಲೇ ಪರಿಹಾರ ವಿತರಿಸಲು ಸೂಚಿಸಿದ್ದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ್‌ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮೇ 24, 25ರಂದು ಬೀಸಿದ ಬಿರುಗಾಳಿಯಿಂದ ಮಾನ್ವಿ ತಾಲೂಕಿನ ಹರವಿ, ಗುಡದಿನ್ನಿ ಸೇರಿ ವಿವಿಧೆಡೆ ಮನೆಗಳು ಜಖಂಗೊಂಡರೆ, ಕೆಲವೆಡೆ ಟಿನ್‌ ಶೆಡ್‌ಗಳು ಹಾರಿ ಹೋಗಿವೆ. ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. 

ಈಗಾಗಲೇ 1,027 ಮನೆಗಳಿಗೆ ಪರಿಹಾರ ನೀಡುವ ಬಗ್ಗೆ ಮಾಹಿತಿ ಸಿಕ್ಕಿದೆ. ಪ್ರತಿ ಸಂತಸ್ತರಿಗೆ 4,100 ರೂ. ಪರಿಹಾರವನ್ನು ಆರ್‌ಟಿಜಿಎಸ್‌ ಮಾಡಲಾಗುವುದು. ಇನ್ನು ಏಪ್ರಿಲ್‌ನಲ್ಲಿ ಸುರಿದ ಆಲಿಕಲ್ಲು ಮಳೆಯಿಂದ ಸಿಂಧನೂರು ಸೇರಿ ಇತರೆ ಪ್ರದೇಶದಲ್ಲಿ, ಸುಮಾರು 2,277 ಹೆಕ್ಟೇರ್‌ ಭತ್ತದ ಬೆಳೆ ಹಾನಿಯಾಗಿದ್ದು, 1.52 ಕೋಟಿ ರೂ. ನಷ್ಟವಾಗಿದೆ. ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ರೈತರಿಂದ ಖರೀದಿಸಿದ್ದ ತೊಗರಿ ಬಾಕಿ ಹಣವನ್ನು ಒಂದು ವಾರದಲ್ಲಿ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ಇಲ್ಲಿವರೆಗೆ 21 ಸಾವಿರ ರೈತರಿಗೆ ಹಣ ನೀಡಿದ್ದು, ಇನ್ನೂ 744 ರೈತರಿಗೆ ಬಾಕಿಯಿದೆ. ದಾಖಲೆಗಳ ಪರಿಶೀಲನೆ, ಬ್ಯಾಂಕ್‌ ಖಾತೆ ಸಂಗ್ರಹದಲ್ಲಿನ ಸಮಸ್ಯೆಯಿಂದ ವಿಳಂಬವಾಗಿದ್ದು, ತಕ್ಷಣ ವಿತರಿಸಲಾಗುವುದು. ಉದ್ದೇಶಪೂರ್ವಕವಾಗಿ ಆದಂಥ ತಪ್ಪುಗಳಲ್ಲ. ಅಚಾತುರ್ಯದಿಂದಾಗಿದ್ದು, ಶೀಘ್ರದಲ್ಲೇ ಮಾಡಿಸಲಾಗುವುದು ಎಂದರು.

ಪ್ರಸಕ್ತ ವರ್ಷ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು, ಈ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 37 ರೈತ ಸಂಪರ್ಕ ಕೇಂದ್ರಗಳಿಂದ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ನಿತ್ಯ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಳೆದ ವರ್ಷ ಬೆಳೆ ವಿಮೆ ಮಾಡಿಸಿದ್ದ ರೈತರಿಗೆ ಹಣ ಬಂದಿಲ್ಲ ಎಂಬ ದೂರುಗಳಿವೆ. ಹೀಗಾಗಿ ಬೆಳೆ ವಿಮೆ ಮಾಡಿಸಲು ರೈತರು ಮುಂದೆ ಬರುತ್ತಿಲ್ಲ. ವಿಮೆ ಕಂಪನಿಗಳ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತರಲಾಗುವುದು ಎಂದರು. ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಇದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.