ಆಜಾದ್ ಜಮ್ಮು ಕಾಶ್ಮೀರ ಸಂವಿಧಾನ ತಿದ್ದುಪಡಿ:ಪಾಕಿಗೆ ಭಾರತ ಪ್ರತಿಭಟನೆ
Team Udayavani, Jun 12, 2018, 10:57 AM IST
ಹೊಸದಿಲ್ಲಿ : 2018ರ ಆಜಾದ್ ಜಮ್ಮು ಕಾಶ್ಮೀರ ಸಂವಿಧಾನ ತಿದ್ದುಪಡಿ ಕಾಯಿದೆಯನ್ನು ಪಾಕ್ ಸರಕಾರ ಪಾಸ್ ಮಾಡಿದ ಬೆನ್ನಿಗೇ ಭಾರತ ಪಾಕ್ ಸರಕಾರದ ಈ ಕೃತ್ಯಕ್ಕೆ ಬಲವಾದ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.
ಕಾನೂನು ಬಾಹಿರವಾಗಿ ತನ್ನ ವಶದಲ್ಲಿ ಇರಿಸಿಕೊಂಡಿರುವ ಜಮ್ಮು ಕಾಶ್ಮೀರದ ಎಲ್ಲ ಪ್ರದೇಶಗಳನ್ನು ತೆರವುಗೊಳಿಸಬೇಕೆಂದು ಭಾರತ ಪಾಕಿಸ್ಥಾನಕ್ಕೆ ಅತ್ಯಂತ ಕಟುವಾದ ಶಬ್ದಗಳಲ್ಲಿ ತಿಳಿಸಿದೆ.
ಪಾಕಿಸ್ಥಾನವು ಆಜಾದ್ ಜಮ್ಮು ಮತ್ತು ಕಾಶ್ಮೀರ ಎಂದರೆ ಕರೆಯುವ ಸಂಪೂರ್ಣ ಭೂಭಾಗವು ಇಡಿಯ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಸೇರಿದ್ದಾಗಿದ್ದು 1947ರ ಸೇರ್ಪಡೆಯಿಂದಾಗಿ ಭಾರತದ ಅವಿಭಾಜ್ಯ ಅಂಗವಾಗಿದೆ. ಹಾಗಿರುವಾಗ ಪಾಕಿಸ್ಥಾನ ಪಾಸು ಮಾಡಿರುವ ಆಜಾದ್ ಜಮ್ಮು ಕಾಶ್ಮೀರ ಮಧ್ಯಾವಧಿ ಸಂವಿಧಾನ (13ನೇ ತಿದ್ದುಪಡಿ) 2018ರ ಕಾಯಿದೆಯು ಕಾನೂನು ಬಾಹಿರವಾಗಿದೆ.
ಆದುದರಿಂದ ಪಾಕಿಸ್ಥಾನ ತನ್ನ ವಶದಲ್ಲಿರಿಸಿಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ತೆರವು ಗೊಳಿಸಿ ಭಾರತಕ್ಕೆ ಮರಳಿಸಬೇಕು ಎಂದು ಅತ್ಯಂತ ಸ್ಪಷ್ಟ ಶಬ್ದಗಳಲ್ಲಿ ರಾಜತಾಂತಿಕ ಮಾಧ್ಯಮದ ಮೂಲಕ ಪಾಕ್ ಸರಕಾರಕ್ಕೆ ತಿಳಿಸಲಾಗಿದೆ ಎಂದು ವಿದೇಶ ವ್ಯವಹಾರಗಳ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.